ಬೆಂಗಳೂರು(ನ.18): ಮಾದಕ ವಸ್ತು ಕೊಕೇನ್‌ ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ನೈಜೀರಿಯಾನ್‌ ಪ್ರಜೆಗಳಾದ ಮಾರ್ಕ್ ಮತ್ತು ಹೆನ್ರಿ ಬಂಧಿತರು. ಆರೋಪಿಗಳಿಂದ ಲಕ್ಷಾಂತರ ರು. ಮೌಲ್ಯದ ಕೊಕೇನ್‌ ಮತ್ತು ಎಕ್ಸಾಟಸಿ ಮಾತ್ರೆಗಳನ್ನು ಜಪ್ತಿ ಮಾಡಲಾಗಿದೆ.

ಬಂಧಿತ ಆರೋಪಿಗಳು ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ವಿದೇಶದಿಂದ ಮಾದಕ ವಸ್ತುಗಳನ್ನು ತರಿಸಿಕೊಂಡು ವಿದ್ಯಾರ್ಥಿಗಳು, ಸಾಫ್ಟ್‌ವೇರ್‌ ಉದ್ಯೋಗಿಗಳಿಗೆ ಮಾರಾಟ ಮಾಡುವುದನ್ನೇ ದಂಧೆಯನ್ನಾಗಿಸಿಕೊಂಡಿದ್ದರು.

ಟೋಲ್‌ ಬಳಿ 3 ಪೆಡ್ಲರ್‌ಗಳ ಬಂಧನ: 25 ಲಕ್ಷದ ಡ್ರಗ್ಸ್‌ ವಶ

ಈಗಾಗಲೇ ಬಂಧನಕ್ಕೆ ಒಳಗಾಗಿರುವ ಸನ್ನಿ ಎಂಬ ಡ್ರಗ್‌ ಪೆಡ್ಲರ್‌ ಕೊಟ್ಟ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರ ಪೈಕಿ ಮಾರ್ಕ್ ಎರಡು ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದರೆ, ಹೆನ್ರಿ ವೀಸಾ ಅವಧಿ ಮುಗಿದಿದ್ದು, ಅಕ್ರಮವಾಗಿ ನಗರದಲ್ಲಿ ನೆಲೆಸಿದ್ದ. ಆರೋಪಿಗಳ ಬಗ್ಗೆ ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಸಿಸಿಬಿ ಅಧಿಕಾರಿಗಳು ತಿಳಿಸಿದರು. ಈ ಸಂಬಂಧ ರಾಮಮೂರ್ತಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ.