ಅಕ್ರಮ ಸಂಬಂಧ ಹೊಂದಿದ್ದರಿಂದ ಇಬ್ಬರಿಗೂ ತಿಳುವಳಿಕೆ ಹೇಳಿದ್ದ ಎರಡೂ ಮನೆಯ ಕುಟುಂಬಸ್ಥರು|  ತೀವ್ರ ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ಪುರುಷ| ಈ ಸುದ್ದಿ ತಿಳಿದ ಮನೆಯಲ್ಲಿ ನೇಣಿಗೆ ಶರಣಾದ ಮಹಿಳೆ|  

ಬೆಳಗಾವಿ(ಡಿ.14): ವಿವಾಹಿತ ಪುರುಷ ಹಾಗೂ ಮಹಿಳೆ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಬೆಳಗಾವಿ ತಾಲೂಕಿನ ಬೆನ್ನಾಳಿ ಗ್ರಾಮದ ಜಯಶ್ರೀ ರಾಜು ಗಾಡಿವಡ್ಡರ (35) ಹಾಗೂ ಶಿವಾಜಿ ಭೀಮಾ ಗಾಡಿವಡ್ಡರ (31) ಆತ್ಮಹತ್ಯೆಗೆ ಶರಣಾದವರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹಲವು ವರ್ಷಗಳಿಂದ ಇವರಿಬ್ಬರ ನಡುವೆ ಪರಿಚಯವಾಗಿ ನಂತರ ಪ್ರೇಮಾಂಕುರವಾಗಿತ್ತು. ಅಕ್ರಮ ಸಂಬಂಧವನ್ನೂ ಹೊಂದಿದ್ದರಿಂದ ಎರಡೂ ಮನೆಯ ಕುಟುಂಬಸ್ಥರು ಇಬ್ಬರಿಗೂ ತಿಳುವಳಿಕೆ ಹೇಳಿದ್ದರು. ಆದರೆ ಇವರಿಬ್ಬರು ತಮ್ಮ ಹಳೆಯ ಚಾಳಿಯನ್ನು ಮುಂದುವರೆಸಿದ್ದರು ಎನ್ನಲಾಗುತ್ತಿದೆ. ಇದರಿಂದಾಗಿ ಶಿವಾಜಿ ಮನೆಯವರು ತೀವ್ರ ತರಾಟೆಗೆ ತೆಗೆದುಕೊಂಡ ಹಿನ್ನೆಲೆಯಲ್ಲಿ ಮನನೊಂದು ಹೆದ್ದಾರಿ ಪಕ್ಕದಲ್ಲಿರುವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸುದ್ದಿ ತಿಳಿದ ಜಯಶ್ರೀ ಗಾಡಿವಡ್ಡರ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ.

ಹುಬ್ಬಳ್ಳಿ: ಪ್ರಿಯಕರ ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ

ಈ ಘಟನೆ ಸುದ್ದಿ ತಿಳಿದ ಕಾಕತಿ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್‌ ರಾಘವೇಂದ್ರ ಹಳ್ಳೂರ ಸೇರಿದಂತೆ ಇನ್ನಿತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಕುರಿತು ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.