ಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ ಘಟನೆ ಬೀದರ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರ್ಣಾ ಕ್ರಾಸ್ NH-65 ಮುಂಬೈ ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಬೀದರ್ (ಸೆ.9): ಚಲಿಸುತ್ತಿದ್ದ ಬೈಕ್‌ಗೆ ಹಿಂಬದಿಯಲ್ಲಿ ವೇಗವಾಗಿ ಬಂದ ಕಾರು ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದ ಘಟನೆ ಬೀದರ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ನಿರ್ಣಾ ಕ್ರಾಸ್ NH-65 ಮುಂಬೈ ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಉಡಬಾಳ ಗ್ರಾಮದ ಸತೀಶ್ ಶಿವಕುಮಾರ ಗೆ ಗಂಭೀರ ಗಾಯಗೊಂಡಿದ್ದಾರೆ. ಹೈದರಾಬಾದ್‌ನಿಂದ ಮಹಾರಾಷ್ಟ್ರಕ್ಕೆ ಹೋಗುತ್ತಿದ್ದ ಕಾರು. ಈ ವೇಳೆ ಮುಂದೆ ಚಲಿಸುತ್ತಿದ್ದ ಬೈಕ್. ಬೈಕ್ ಮೇಲೆ ಇಬ್ಬರು ಸವಾರರು ಕುಳಿತಿದ್ದರು. ಹಿಂದಿನಿಂದ ಯಮವೇಗದಲ್ಲಿ ಬಂದ ಕಾರು ಬೈಕ್‌ಗೆ ಗುದ್ದಿದೆ. ಡಿಕ್ಕಿಯಾದ ರಭಸಕ್ಕೆ ಹತ್ತು ಅಡಿ ದೂರಕ್ಕೆ ಹಾರಿಬಿದ್ದ ಬೈಕ್ ಸವಾರರು. ಗಾಯಾಳು ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಾಕ್ಸ್‌ನಲ್ಲಿ ನಗದು ಹಣ ಇಟ್ಟು ಪೂಜಿಸಿದ್ರೆ ಡಬಲ್ ಹಣ; ಜನರನ್ನ ವಂಚಿಸುತ್ತಿದ್ದ ನಕಲಿ ಸ್ವಾಮಿ ಅರೆಸ್ಟ್

ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಮೈನಡುಗಿಸುವಂತಿದೆ. ಘಟನೆ ಸಂಬಂಧ ಮನ್ನಾಖೇಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರನ ದಾಖಲಾಗಿದೆ.