Asianet Suvarna News Asianet Suvarna News

ದಾವಣಗೆರೆ: ಕೊಳೆತ ಸ್ಥಿತಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ..!

* ದಾವಣಗೆರೆ ನಗರದ ಆಂಜನೇಯ ಕಾಟನ್ ಮಿಲ್ ಬಳಿ ನಡೆದ ಘಟನೆ
* ಮೃತ ಸಹೋದರಿಯರು ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನ ಬೆನಕನಹಳ್ಳಿಯ ಗ್ರಾಮದವರು 
*  ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು 

Two Sisters Dead Body Found at Davanagere grg
Author
Bengaluru, First Published Jul 30, 2021, 1:12 PM IST
  • Facebook
  • Twitter
  • Whatsapp

ದಾವಣಗೆರೆ(ಜು.30): ಸಹೋದರಿಯರಿಬ್ಬರ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾದ ಘಟನೆ ನಗರದ ಹೊರವಲಯದ ಆಂಜನೇಯ ಕಾಟನ್ ಮಿಲ್ ಬಳಿ ಇಂದು(ಶುಕ್ರವಾರ) ನಡೆದಿದೆ. ಗೌರಮ್ಮ (34) ಹಾಗೂ ರಾಧಮ್ಮ (32) ಸಾವನ್ನಪ್ಪಿರುವ ಸಹೋದರಿಯರಾಗಿದ್ದಾರೆ.

ಕೊಳೆತ ಸ್ಥಿತಿಯಲ್ಲಿ ಶವಗಳು ಪತ್ತೆಯಾಗಿದ್ದು, ಕೆಟ್ಟ ವಾಸನೆ ಬಂದ ಹಿನ್ನೆಲೆಯಲ್ಲಿ ಘಟನೆ ನಡೆದು ಮೂರರಿಂದ ನಾಲ್ಕು ದಿನಗಳಾಗಿರಬಹುದು ಎಂದು ಅಂದಾಜಿಸಲಾಗಿದೆ. ಯಾರೋ ದುಷ್ಕರ್ಮಿಗಳು ಇವರನ್ನ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ಹರಪನಹಳ್ಳಿ RTI ಕಾರ್ಯಕರ್ತ ಶ್ರೀಧರ್ ಹತ್ಯೆ ಪ್ರಕರಣ: ಮತ್ತೆ ಮೂವರ ಬಂಧನ

ಮೃತ ಸಹೋದರಿಯರು ಮೂಲತಃ ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನ ಬೆನಕನಹಳ್ಳಿಯ ಗ್ರಾಮದವರಾಗಿದ್ದಾರೆ ಎಂದು ತಿಳಿದು ಬಂದಿದೆ. ಕೆಲ ತಿಂಗಳ ಹಿಂದೆ ಆಂಜನೇಯ ಕಾಟನ್ ಮಿಲ್‌ನಲ್ಲಿ‌ ಕೆಲಸಕ್ಕೆಂದು ಇಬ್ಬರೂ ಸಹೋದರಿಯರು ಸೇರಿಕೊಂಡಿದ್ದರು ಎಂದು ತಿಳಿದು ಬಂದಿದೆ. 

ಈ ಸಂಬಂಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹಗಳು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನೆ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ.
 

Follow Us:
Download App:
  • android
  • ios