Asianet Suvarna News Asianet Suvarna News

ರಾಯಚೂರಲ್ಲಿ ಭೀಕರ ಅಪಘಾತ ಪ್ರಕರಣ; ಚಿಕಿತ್ಸೆ ಫಲಿಸದೇ ಇಬ್ಬರು ವಿದ್ಯಾರ್ಥಿಗಳು ದುರ್ಮರಣ!

ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ವಾಹನ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳು ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.

two students dies after terrible accident school bus in kapgal manvi taluku raichur district rav
Author
First Published Sep 5, 2024, 11:57 AM IST | Last Updated Sep 5, 2024, 12:22 PM IST

ರಾಯಚೂರು (ಸೆ.5): ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ವಾಹನ ಹಾಗೂ ಸಾರಿಗೆ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರು ವಿದ್ಯಾರ್ಥಿಗಳು ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ.

ಸಮರ್ಥ (7) ಹಾಗೂ ಶ್ರೀಕಾಂತ ( 12) ಸಾವು ಮೃತ ಬಾಲಕರು. ಇಂದು ಮುಂಜಾನೆ ನಡೆದಿರುವ ದುರ್ಘಟನೆ ಕಪ್‌ಗಲ್ ನಿಂದ ಮಾನ್ವಿ ಪಟ್ಟಣದತ್ತ ಹೊರಟಿದ್ದ ಶಾಲಾ ವಾಹನ. ಸಿಂಧನೂರು ಕಡೆಯಿಂದ ರಾಯಚೂರು ಕಡೆಗೆ ಹೊರಟಿದ್ದ ಸಾರಿಗೆ ಬಸ್. ಎರಡೂ ಮುಖಾಮುಖಿ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ.

ರಾಯಚೂರಲ್ಲಿ ಭೀಕರ ಅಪಘಾತ: ಶಿಕ್ಷಕರ ದಿನಾಚರಣೆಯಂದೇ ಕಾಲು ಕಳೆದುಕೊಂಡ ನಾಲ್ವರು ಮಕ್ಕಳು!

ರಿಮ್ಸ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ:

two students dies after terrible accident school bus in kapgal manvi taluku raichur district rav

ಅಪಘಾತ ಪ್ರಕರಣ ಮಾಹಿತಿ ಪಡೆದ ಜಿಲ್ಲಾಧಿಕಾರಿ ನಿತೀಶ್ ಕೆ  ರಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತರಾಗಿದ್ದಾರೆ. ಇನ್ನೂ ಮೂವರ ವಿದ್ಯಾರ್ಥಿಗಳ ಸ್ಥಿತಿ ಗಂಭೀರವಾಗಿದೆ. ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 40 ವಿದ್ಯಾರ್ಥಿಗಳ ಪೈಕಿ 17 ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಮೃತ ವಿದ್ಯಾರ್ಥಿಗಳ ಕುಟುಂಬಕ್ಕೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ. ಅದೇ ರೀತಿ ಅಪಘಾತದಲ್ಲಿ ಗಾಯಗೊಂಡಿರುವ ವಿದ್ಯಾರ್ಥಿಗಳಿಗೆ 3 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ ಜಿಲ್ಲಾಧಿಕಾರಿ. ಗಾಯಗೊಂಡ ಮಕ್ಕಳಿಗೆ ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ಎಲ್ಲ ರೀತಿಯಲ್ಲೂ ವೈದ್ಯರು ಚಿಕಿತ್ಸೆ ನೀಡಲಿದ್ದಾರೆ ಎಂದರು.

Latest Videos
Follow Us:
Download App:
  • android
  • ios