ಬೆಳಗಾವಿ, (ಮೇ.25): ಕಾರು ಹರಿದು ಮಹಿಳೆಯರಿಬ್ಬರು ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಮಾರಿಹಾಳ್ ಪೊಲೀಸ್ ಠಾಣೆ ವ್ಯಾಪ್ತಿಯ ಮುಥಗಾ ಗ್ರಾಮದ ಬಳಿ ನಡೆದಿದೆ.

ಮೃತರನ್ನು ಸವಿತಾ ಪಾಟೀಲ್ (43) ಮತ್ತು ವಿದ್ಯಾ ಪಾಟೀಲ್ (54) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಪಾದಚಾರಿ ಶಾಂತಾ ಚೌಗಲ್ ಮತ್ತು ಕಾರು ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾಸಕ ಸಿ.ಟಿ. ರವಿ ಕಾರು ಅಪಘಾತ : ಇಬ್ಬರು ದುರ್ಮರಣ 

ಮಹಿಳೆಯರು ನಿನ್ನೆ (ಭಾನುವಾರ) ರಾತ್ರಿ ಪಾದಚಾರಿ ಮಾರ್ಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ಅವರ ಮೇಲೆ ಹರಿದಿದೆ ಎಂದು ಪೊಲೀಸರು ಹೇಳಿದ್ದಾರೆ.

 ಬಿಜೆಪಿ ಯುವ ಮೋರ್ಚದ ಮುಖಂಡ ಯುವರಾಜ ಜಾಧವ್ ಅವರ ಕಾರು ವಾಕ್ ಮಾಡುತ್ತಿದ್ದವರಿಗೆ ಡಿಕ್ಕಿ ಹೊಡೆದು ಹಾಗೇ ಮುಂದೆ ಹೋಗಿ ಮನೆಗೆ ಗುದ್ದಿದೆ ಎಂದು ತಿಳಿದುಬಂದಿದೆ.

 ಸ್ಥಳಕ್ಕೆ ಗ್ರಾಮೀಣ ಎಸಿಪಿ ಶಿವಾರೆಡ್ಡಿ, ಇನ್ಸ್‌ಪೆಕ್ಟರ್ ವಿಜಯಕುಮಾರ ಶಿನ್ನೂರ ಭೇಟಿ ನೀಡಿ ಪರಿಶೀಲಿಸಿದರು. ಮಾರಿಹಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.