Asianet Suvarna News Asianet Suvarna News

ಹಾವೇರಿ ಶಾಸಕ ನೆಹರು ಓಲೇಕಾರ್‌ಗೆ 2 ವರ್ಷ ಜೈಲು ಶಿಕ್ಷೆ: ಮಕ್ಕಳಿಬ್ಬರೂ ಜೈಲು ಪಾಲು

ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಶಿಕ್ಷೆ ಪ್ರಕರಣದಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ನೆಹರು ಓಲೆಕಾರ್ ಅವರಿಗೆ 2ವರ್ಷ ಜೈಲು‌ಶಿಕ್ಷೆಯನ್ನು ವಿಧಿಸಿ ಬೆಂಗಳೂರಿನ ‌91 ಸಿಸಿಹೆಚ್ ಕೋರ್ಟ್ ಆದೇಶವನ್ನು ಹೊರಡಿಸಿದೆ.

Two years jail to Haveri MLA Neharu Olekar and two chilren also sat
Author
First Published Feb 13, 2023, 7:47 PM IST | Last Updated Feb 13, 2023, 8:40 PM IST

ಬೆಂಗಳೂರು (ಫೆ.13): ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಶಿಕ್ಷೆ ಪ್ರಕರಣದಲ್ಲಿ ಹಾವೇರಿ ವಿಧಾನಸಭಾ ಕ್ಷೇತ್ರದ ಶಾಸಕ ನೆಹರು ಓಲೆಕಾರ್ ಅವರಿಗೆ 2ವರ್ಷ ಜೈಲು‌ಶಿಕ್ಷೆಯನ್ನು ವಿಧಿಸಿ ಬೆಂಗಳೂರಿನ ‌91 ಸಿಸಿಹೆಚ್ ಕೋರ್ಟ್ ಆದೇಶವನ್ನು ಹೊರಡಿಸಿದೆ.

ಇನ್ನು ಶಾಸಕ ನೆಹರು ಓಲೆಕಾರ್ ಅವರೊಂದಿಗೆ ಅವರ ಇಬ್ಬರು ಮಕ್ಕಳಿಗೂ 2ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಲಾಗಿದೆ. ನೆಹರು ಓಲೆಕಾರ್ ಮಕ್ಕಳಾದ‌ ದೇವರಾಜ್ ಓಲೆಕಾರ್ ಹಾಗೂ ಮಂಜುನಾಥ್ ಓಲೆಕಾರ್ ಅವರೂ ಜೈಲು ಸೇರಲಿದ್ದಾರೆ. ಬೆಂಗಳೂರಿನ ‌91 ಸಿಸಿಹೆಚ್ ಕೋರ್ಟ್ ನಿಂದ‌ ಆದೇಶ ಹೊರಡಿಸಲಾಗಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯಿದೆ ಅಡಿ ಶಿಕ್ಷೆ ಪ್ರಕಟ ಮಾಡಲಾಗಿದೆ. 2 ವರ್ಷ ಜೈಲು ಜೊತೆಗೆ 2ಸಾವಿರ ರೂ. ದಂಡವನ್ನು ನ್ಯಾಯಾಲಯ ವಿಧಿಸಿದೆ. 

ಸರ್ಕಾರಿ ಕಾಮಗಾರಿಗಳನ್ನು ಮಕ್ಕಳಿಗೆ ಗುತ್ತಿಗೆ ನೀಡಿದ್ದ ಶಾಸಕ: ಹಾವೇರಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದು, ಶಾಸಕರ ಅನುದಾನದಲ್ಲಿ 1 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದಾರೆ. ಶಾಸಕರ ಅನುದಾನವನ್ನು ಕಬಳಿಸುವ ಉದ್ದೇಶದಿಂದ 2010 ರಂದು ಜಿಲ್ಲಾಧಿಕಾರಿಗೆ ಪತ್ರ ಬರೆದು ತಮ್ಮ ಕ್ಷೇತ್ರದಲ್ಲಿ 50 ಲಕ್ಷ ರೂ.ಗಳ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಹಣ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು, ಅದರಂತೆ ಜಿಲ್ಲಾಧಿಕಾರಿ ಹಣವನ್ನು ಬಿಡುಗಡೆ ಮಾಡಿದ್ದಾರೆ. 10 ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಶಿಫಾರಸ್ಸು ಪತ್ರದಲ್ಲಿ ಪಟ್ಟಿ ಮಾಡಲಾಗಿದ್ದು, ಈ ಪೈಕಿ ನಾಲ್ಕು ಕಾಮಗಾರಿಗಳ ಗುತ್ತಿಗೆಗಳನ್ನು ಹಿರಿಯ ಮಗನಿಗೆ ಹಂಚಿಕೆ ಮಾಡಲಾಗಿತ್ತು. ಟೆಂಡರ್‌ ನೀಡುವ ವೇಳೆ ಶಾಸಕರು ಶಿಫಾರಸ್ಸಿನೊಂದಿಗೆ ತಮ್ಮ ಪ್ರಭಾವ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. 

Cabinet Reshuffle: ಅಸಮರ್ಥರು, ಹಿರಿಯ ಸಚಿವರನ್ನು ಕ್ಯಾಬಿನೆಟ್‌ನಿಂದ ಕೈ ಬಿಡಿ: ಓಲೇಕಾರ್ ಆಗ್ರಹ

ಭ್ರಷ್ಟಾಚಾರದ ಆರೋಪ: ಹಲವಾರು ಲೋಕೋಪಯೋಗಿ ಗುತ್ತಿಗೆಗಳನ್ನು ಶಾಸಕರ ಕುಟುಂಬದವರೇ ಪಡೆದುಕೊಂಡಿದ್ದಾರೆ. ಎಂ.ಜಿ.ತಿಮ್ಮಾಪುರ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ 5 ಲಕ್ಷ ರೂ.ಗಳ ಅಂದಾಜು ವೆಚ್ಚದಲ್ಲಿ ಗುತ್ತಿಗೆ ಪಡೆದಿದ್ದಾರೆ ಮತ್ತು ನೆಲೋಗಲ್ ಗ್ರಾಮ ಮತ್ತು ತೋಟದ ಯಲ್ಲಾಪುರದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಗುತ್ತಿಗೆಯನ್ನು ಸಹ ಪಡೆದುಕೊಂಡಿದ್ದಾರೆ. ಹಾವೇರಿ ತಾಲೂಕಿನ ಗ್ರಾಮ ಹಾಗೂ ಸವಣೂರು ತಾಲೂಕಿನ ಹೊನ್ನಿಕೊಪ್ಪ ಗ್ರಾಮಗಳಲ್ಲಿ ಪ್ರತಿ ಗುತ್ತಿಗೆ ಅಂದಾಜು 5 ಲಕ್ಷ ರೂ.ನಂತೆ ಗುತ್ತಿಗೆ ಪಡೆದಿದ್ದಾರೆ. ಜೊತೆಗೆ, ಬೇರೊಬ್ಬರು ಯಾರೂ ಟೆಂಡರ್‌ನಲ್ಲಿ ಭಾಗವಹಿಸದಂತೆ ಬೆದರಿಕೆ ಹಾಕಿದ್ದಾರೆ. ಕಾನೂನಿಗೆ ತಿಳಿದಿಲ್ಲದ ಇತರ ಯಾವುದೇ ವ್ಯಕ್ತಿಗೆ ಗುತ್ತಿಗೆಗಳನ್ನು ಪಡೆಯಲು ಅವಕಾಶ ನೀಡದೆ ಎಲ್ಲಾ ಸರ್ಕಾರಿ ಗುತ್ತಿಗೆಗಳನ್ನು ತಮ್ಮ ಮನೆಯವರೇ ಪಡೆದುಕೊಂಡು ನಿರ್ವಹಣೆ ಮಾಡಿದ್ದರು. ಇದರಲ್ಲಿ ಭಾರಿ ಪ್ರಮಾಣದ ಅಕ್ರಮ ಎಸಗಿದ್ದು, ಭ್ರಷ್ಟಾಚಾರದ ಆರೋಪ ಕೂಡ ಎದುರಾಗಿತ್ತು. 

ಭ್ರಷ್ಟಾಚಾರ ಆರೋಪ ಕುರಿತಂತೆ ಈ ಬಗ್ಗೆ ಹಾವೇರಿ ಜಿಲ್ಲಾ ಪೊಲೀಸರು ತನಿಖೆ ಕೈಗೊಂಡು ಆರೋಪ ಪಟ್ಟಿಯನ್ನು ಸಿದ್ಧಪಡಿಸಿದ್ದರು. ಇದಕ್ಕೆ ಸಂಬಂಧಿಸದಂತೆ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ಮಾಡಿದಾಗ ಭ್ರಷ್ಟಾಚಾರದ ಆರೋಪ ಸಾಬೀತಾಗಿದೆ. ೀ ಹಿನ್ನೆಲೆಯಲ್ಲಿ ಸಾರ್ವಜನಿಕ ಹಣದ ದುರುಪಯೋಗ ಹಾಗೂ ಅಧಿಕಾರ ದುರ್ಬಳಕೆ ಹಿನ್ನೆಲೆಯಲ್ಲಿ ಅವರಿಗೆ ಶಿಕ್ಷೆಯನ್ನು ಪ್ರಕಟಿಸಲಾಗಿದೆ.

Latest Videos
Follow Us:
Download App:
  • android
  • ios