Asianet Suvarna News Asianet Suvarna News

Belagavi: ಡಬಲ್ ಮರ್ಡರ್‌ಗೆ ಬೆಚ್ಚಿಬಿದ್ದ ಸುಳೇಭಾವಿ: ಪೊಲೀಸ್ ಬಿಗಿ ಬಂದೋಬಸ್ತ್!

• ಬೆಳಗಾವಿ ತಾಲೂಕಿನ ಸುಳೇಭಾವಿಯಲ್ಲಿ ಇಬ್ಬರ ಬರ್ಬರ ಹತ್ಯೆ
• ನೂರು ಮೀಟರ್ ಅಂತರದಲ್ಲೇ ಇಬ್ಬರನ್ನು ಕೊಚ್ಚಿ ಕೊಲೆಗೈದು ಪರಾರಿ
• ಕಣ್ಣಿಗೆ ಕಾರದಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರ ಕೊಲೆ

Two Youths Murdered At Sulebhavi In Belagavi gvd
Author
First Published Oct 7, 2022, 7:12 AM IST

ವರದಿ: ಮಹಾಂತೇಶ ಕುರಬೇಟ್, ಏಷ್ಯಾನೆಟ್ ಸುವರ್ಣನ್ಯೂಸ್, ಬೆಳಗಾವಿ

ಬೆಳಗಾವಿ (ಅ.07): ತಾಲೂಕಿನ ಸುಳೇಭಾವಿ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಇಬ್ಬರು ಯುವಕರ ಬರ್ಬರ ಹತ್ಯೆ ಮಾಡಲಾಗಿದೆ. ಸುಳೇಭಾವಿ ಗ್ರಾಮದ ಲಕ್ಷ್ಮೀ ಗಲ್ಲಿಯಲ್ಲಿ ರಣಧೀರ ಅಲಿಯಾಸ್ ಮಹೇಶ್ ರಾಮಚಂದ್ರ ಮುರಾರಿ (26), ಪ್ರಕಾಶ್ ಹುಂಕರಿ ಪಾಟೀಲ್ (24) ಹತ್ಯೆಗೈದು ಹಂತಕರು ಪರಾರಿಯಾಗಿದ್ದಾರೆ. 

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಬೋರಲಿಂಗಯ್ಯ, ಡಿಸಿಪಿ ರವೀಂದ್ರ ಗಡಾದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಕ್ಕಾ ಪ್ಲ್ಯಾನ್ ಮಾಡಿಯೇ ಇಬ್ಬರನ್ನು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಸುಳೇಭಾವಿಯ ಛತ್ರಪತಿ ಶಿವಾಜಿ ಮಹಾರಾಜರ ಪುತ್ಥಳಿಯ ಎದುರು ಓರ್ವನ ಮೃತದೇಹ ಬಿದ್ದಿದ್ರೆ ಗಣಪತಿ ಮಂದಿರ ಮುಂಭಾಗದಲ್ಲಿ ಮತ್ತೋರ್ವನ ಮೃತದೇಹ ಬಿದ್ದಿದೆ. ನೂರು ಮೀಟರ್ ಅಂತರದಲ್ಲೇ ಇಬ್ಬರ ಹತ್ಯೆಯಾಗಿದ್ದು, ಘಟನಾ ಸ್ಥಳದಲ್ಲಿ ಪತ್ತೆಯಾದ ಬೈಕ್‌ಗಳ ಮೇಲೆ ಖಾರದ ಪುಡಿ ಬಿದ್ದಿದೆ. 

ಕೋಲಾರ: ದಯವಿಟ್ಟು ಯಾರು ಲವ್ ಮಾಡಬೇಡಿ ಅಂತ ಸ್ಟೇಟಸ್ ಹಾಕಿ ಆತ್ಮಹತ್ಯೆ

ಎಲ್ಲೆಂದರಲ್ಲಿ ಚಪ್ಪಲಿಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದನ್ನು ನೋಡಿದ್ರೆ ಕಣ್ಣಿಗೆ ಖಾರದ ಪುಡಿ ಎರಚಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ಅನುಮಾನ ವ್ಯಕ್ತವಾಗುತ್ತಿದೆ. ಘಟನಾ ಸ್ಥಳದಲ್ಲಿ ಸಿಕ್ಕ ಬೈಕ್‌ಗಳನ್ನು ಪೊಲೀಸರು ಜಪ್ತಿ ಮಾಡಿದ್ದು ಎಫ್‌ಎಸ್‌ಎಲ್ ತಂಡದವರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸುಳೇಭಾವಿ ಗ್ರಾಮದಲ್ಲಿ ಒಂದು ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಿ ಬಿಗಿ ಭದ್ರತೆ ಒದಗಿಸಲಾಗಿದೆ.

ಚಾಮರಾಜನಗರ: ಕಾಡಿಗೆ ಅಕ್ರಮ ಪ್ರವೇಶಿಸಿದ್ದ ವೈದ್ಯ ಸೇರಿ ಮೂವರ ಬಂಧನ

ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಕೊಲೆಯಾದ ಮಹೇಶ್ ಮುರಾರಿ: ಇನ್ನು ದುಷ್ಕರ್ಮಿಗಳಿಂದ ಭೀಕರ ಹತ್ಯೆಗೀಡಾಗಿರುವ ಮಹೇಶ್ ಮುರಾರಿ 2019ರಲ್ಲಿ ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿದ್ದ. 2019ರ ಜನವರಿ ಒಂದರಂದು ಸುಳೇಭಾವಿ ಗ್ರಾಮದ ಬಜಾರ್ ಗಲ್ಲಿ ನಿವಾಸಿ ನಾಗೇಶ ಮ್ಯಾಕಲ್ಯಾಗೋಳ ಹತ್ಯೆಯಾಗಿತ್ತು. ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ನಾಗೇಶ್‌ನನ್ನು ಬೆಳಗಾವಿ ತಾಲೂಕಿನ ಹೊನ್ನಿಹಾಳ ಗ್ರಾಮದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಈ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಮಹೇಶ ಮುರಾರಿ ಇತ್ತೀಚೆಗೆ ಜಾಮೀನಿನ ಮೇಲೆ ಹೊರಬಂದಿದ್ದ ಎಂಬುದು ಗೊತ್ತಾಗಿದೆ. ಒಟ್ಟಾರೆ ಶಾಂತವಾಗಿದ್ದ ಸುಳೇಭಾವಿ ಗ್ರಾಮದಲ್ಲಿ ಜೋಡಿ ಕೊಲೆ ಬೆಚ್ಚಿ ಬೀಳುವಂತೆ ಮಾಡಿದ್ದು ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.

Follow Us:
Download App:
  • android
  • ios