ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಬೆಳಗಾವಿಯಲ್ಲಿ ಪೊಲೀಸರ ತನಿಖೆ ಚುರುಕುಗೊಂಡಿದೆ. ಇಂದು ಬೆಳಗಾವಿಗೆ ಆಗಮಿಸಿರುವ ಇನ್ಸ್‌ಪೆಕ್ಟರ್ ನೇತೃತ್ವದ ಆರು ಜನ ಪೊಲೀಸರ ತಂಡ ಮಫ್ತಿಯಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ.

ಬೆಳಗಾವಿ (ಏ.16): ಉಡುಪಿಯಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ್ (Santosh Patil) ಆತ್ಮಹತ್ಯೆ ಪ್ರಕರಣ (Suicide Case) ಸಂಬಂಧ ಬೆಳಗಾವಿಯಲ್ಲಿ (Belagavi) ಪೊಲೀಸರ (Police) ತನಿಖೆ ಚುರುಕುಗೊಂಡಿದೆ. ಇಂದು ಬೆಳಗಾವಿಗೆ ಆಗಮಿಸಿರುವ ಇನ್ಸ್‌ಪೆಕ್ಟರ್ ನೇತೃತ್ವದ ಆರು ಜನ ಪೊಲೀಸರ ತಂಡ ಮಫ್ತಿಯಲ್ಲಿ ತನಿಖೆ ಚುರುಕುಗೊಳಿಸಿದ್ದಾರೆ. ಸಂತೋಷ ಪಾಟೀಲ್ ವಾಸವಿದ್ದ ಸಮರ್ಥ ಕಾಲೋನಿ ಪ್ರದೇಶದಲ್ಲಿ ಮಫ್ತಿಯಲ್ಲಿ ಬಂದು ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ. ಅಷ್ಟೇ ಅಲ್ಲದೇ ಹಿಂಡಲಗಾ ಗ್ರಾಮದಲ್ಲಿ ಸಂತೋಷ ಪಾಟೀಲ್ ಮಾಡಿದ 108 ಕಾಮಗಾರಿಗಳ ಪರಿಶೀಲನೆ ನಡೆಸಿ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ. 

ಇನ್ನು ಬೆಳಗಾವಿ ತಾಲೂಕಿನ ಬಡಸ ಗ್ರಾಮಕ್ಕೆ ಮಫ್ತಿಯಲ್ಲಿ ಬೈಕ್‌‌ನಲ್ಲಿ ತೆರಳಿದ ನಾಲ್ವರು ಪೊಲೀಸ್ ಸಿಬ್ಬಂದಿ ಗ್ರಾಮದಲ್ಲಿ ಸುತ್ತಾಡಿ ಕೆಲವು ಗ್ದಾಮಸ್ಥರಿಂದ ಮಾಹಿತಿ ಪಡೆದಿದ್ದಾರೆ. ಇನ್ನು ಪ್ರಕರಣ ಸಂಬಂಧ ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷ ನಾಗೇಶ್ ಮನ್ನೋಳಕರ್ ಹಾಗೂ ಸಂತೋಷ ಪಾಟೀಲ್ ಕಾಮಗಾರಿ ನಡೆಸುವ ವೇಳೆ ಹಿಂಡಲಗಾ ಗ್ರಾ.ಪಂ. ಪಿಡಿಒ ಆಗಿದ್ದ ಗಂಗಾಧರ ವಿಚಾರಣೆ ನಡೆಸುವ ಸಾಧ್ಯತೆ‌ ಇದೆ. ಸದ್ಯ ಹಿಂಡಲಗಾ ಗ್ರಾ.ಪಂ.ಅಧ್ಯಕ್ಷ ನಾಗೇಶ್ ಮನ್ನೋಳಕರ್ ಕೊಲ್ಲಾಪುರಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಇದ್ದು, ಸೋಮವಾರದಂದು ನಾಗೇಶ್ ಮನ್ನೋಳಕರ್ ರಿಂದ ಮಾಹಿತಿ ಪಡೆಯುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈಶ್ವರಪ್ಪ ರಾಜೀನಾಮೆಗೂ ಮುನ್ನ PDOಗಳ ಟ್ರಾನ್ಸ್‌ಫರ್, ಚರ್ಚೆಗೆ ಗ್ರಾಸ..!

ಎರಡೂ ಪಕ್ಷಗಳಿಗೆ ಮಾತನಾಡುವ ನೈತಿಕತೆ ಇಲ್ಲ: ವಿಶ್ವಾಸ ಮೇಲೆ ಸಂತೋಷ್‌ ಪಾಟೀಲ್ ಕೆಲಸ ಮಾಡಿದ್ದರು. ಅವಮಾನ ಮಾಡಿ, ಕಾಯಿಸಿದ್ದು ಆತ್ಮಹತ್ಯೆಗೆ ಕಾರಣವಾಗಿದೆ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ. ಕಾಮಗಾರಿ ಪ್ರಾರಂಭವಾದ ಬಳಿಕವಾದ್ರೂ ಹಣ ಬಿಡುಗಡೆ ಮಾಡಿಸಬೇಕಿತ್ತು. ಎರಡೂ ಪಕ್ಷಗಳು ಮೊಸಳೆ ಕಣ್ಣೀರು ಹಾಕೋದು ಬಿಡಬೇಕು. ಆಪ್‌ಗೆ ಮಾತ್ರ ಈ ಬಗ್ಗೆ ಮಾತನಾಡಲು ನೈತಿಕ ಹಕ್ಕು ಇದೆ ಅಂತ ಆಪ್ ಮುಖಂಡ, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಹೇಳಿದ್ದಾರೆ. 

ಗುತ್ತಿಗೆದಾರ ಸಂತೋಷ್‌ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಶನಿವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲೂ ಎಎಪಿ ಸ್ಪರ್ಧೆ ಮಾಡಲಿದೆ. ಪ್ರಭಾವಿಗಳನ್ನು ಮುಟ್ಟೋಕೂ ಆಗಲ್ಲ ಎನ್ನುವ ಭ್ರಮೆಯನ್ನ ತಗೆದು ಹಾಕುತ್ತೇವೆ. ಪ್ರಚಾರನೂ ಮುಖ್ಯ ಅಲ್ಲ, ವ್ಯಕ್ತಿಗಳೂ ಮುಖ್ಯ ಅಲ್ಲ. ಪಕ್ಷಗಳ ದುರಾಡಳಿತ, ಭ್ರಷ್ಟಾಚಾರ ಬಗ್ಗೆ ಮಾತನಾಡಿದ್ದೇನೆ. ಭ್ರಷ್ಟಾಚಾರದಿಂದ ನೇರವಾಗಿ ಜನರ ಮೇಲೆ ಪರಿಣಾಮ ಬೀರಲಿದೆ ಅಂತ ತಿಳಿಸಿದ್ದಾರೆ. ಸಂತೋಷ್‌ ಪಾಟೀಲ್ ಮನವಿ ಕೊಟ್ಟಿದ್ದ ವೇಳೆ ಸರ್ಕಾರ ಎಚ್ಚೆತ್ತುಕೊಳ್ಳಬೇಕಿತ್ತು. 

ಸಿಡಿ ಕೇಸ್​​​​​​​​​​​​​​​​​​ನಲ್ಲಿದ್ದ ಮಹಾನಾಯಕನ ತಂಡ ಸಂತೋಷ್​ ಕೇಸ್​ನಲ್ಲೂ ಇದೆ, ಗಂಭೀರ ಆರೋಪ

ಪ್ರಕರಣ ಸಿಐಡಿ ತನಿಖೆಗೆ ಕೊಡ್ತಿವಿ ಅಂತ ಯಾರೊಬ್ಬರು ಹೇಳಿಲ್ಲ. ಸಾಮಾನ್ಯ ಜನ ಯಾರಾದ್ರು ಆತ್ಮಹತ್ಯೆಗೆ ಕಾರಣರಾಗಿದ್ದರೆ ಅವರನ್ನು ಬಂಧಿಸುತ್ತಿದ್ದರು‌. ಎಫ್‌ಐಆರ್‌ನಲ್ಲಿ ಇರುವ ಆರೋಪಿಗಳ ಬಂಧನ ಆಗಬೇಕು. ಇಂತಹ ಪ್ರಕರಣದಲ್ಲಿ ಸರ್ಕಾರವೇ ತನಿಖಾಧಿಕಾರಿ ಆಗುತ್ತೆ. ಆದರೆ ತನಿಖಾಧಿಕಾರಿಗಳಿಗೆ ಎಲ್ಲಾ ಸ್ವಾತಂತ್ರ್ಯ ಕೊಡಬೇಕು. ಕೋರ್ಟ್ ಕಣ್ಗಾವಲಿನಲ್ಲಿ ಪ್ರಕರಣ ತನಿಖೆ ಆಗಬೇಕು. ತನಿಖೆಯಲ್ಲಿ ಸರ್ಕಾರ ಹಸ್ತಕ್ಷೇಪ ಮಾಡೋ ಸಾಧ್ಯತೆ ಹೆಚ್ಚಿದೆ. ಪೊಲೀಸರು ಇಂತಹ ಪ್ರಕರಣಗಳಲ್ಲಿ ಹೇಳಿದ ಹಾಗೆ ಕೇಳುವವರಾಗಿ ಬಿಡುತ್ತಾರೆ. ಪೊಲೀಸ್ ತನಿಖೆ ಬಗ್ಗೆ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್‌ ರಾವ್ ಅನುಮಾನ ವ್ಯಕ್ತಪಡಿಸಿದ್ದಾರೆ.