Asianet Suvarna News Asianet Suvarna News

ಬಸ್ಸಲ್ಲಿ ಮಲಗಿದ್ದ ವಿದ್ಯಾರ್ಥಿನಿಗೆ ಕಿಸ್‌ ಕೊಟ್ಟ ಅಪರಿಚಿತ

*   ಬೆಂಗಳೂರಿನ ಪೀಣ್ಯ ಸಮೀಪ ನಡೆದ ಘಟನೆ
*  ವಿದ್ಯಾರ್ಥಿನಿಗೆ ಚುಂಬಿಸಿ ಅಪರಿಚಿತ ಪ್ರಯಾಣಿಕ ಪರಾರಿ
*  ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ 

Unknown Man Kiss to Student while Sleep on KSRTC in Bengaluru grg
Author
Bengaluru, First Published Sep 17, 2021, 7:58 AM IST
  • Facebook
  • Twitter
  • Whatsapp

ಬೆಂಗಳೂರು(ಸೆ.17): ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿಯೊಬ್ಬಳಿಗೆ ಅಪರಿಚಿತ ಪ್ರಯಾಣಿಕ ಮುತ್ತು ಕೊಟ್ಟು ಪರಾರಿಯಾಗಿರುವ ಘಟನೆ ಪೀಣ್ಯ ಸಮೀಪ ನಡೆದಿದೆ.

ಮೂರು ದಿನಗಳ ಹಿಂದೆ ಬಳ್ಳಾರಿಯಿಂದ ನಗರಕ್ಕೆ ಆಗಮಿಸಿದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಈ ಘಟನೆ ನಡೆದಿದ್ದು, ಮುಂಜಾನೆ 5 ಗಂಟೆಯಲ್ಲಿ ಬಸ್ಸಿನಲ್ಲಿ ನಿದ್ರೆ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಚುಂಬಿಸಿ ಅಪರಿಚಿತ ಪ್ರಯಾಣಿಕ ಪರಾರಿಯಾಗಿದ್ದಾನೆ. ಈ ಘಟನೆ ಸಂಬಂಧ ಪೀಣ್ಯ ಪೊಲೀಸ್‌ ಠಾಣೆಗೆ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಆರೋಪಿ ಪತ್ತೆಗೆ ತನಿಖೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಪತ್ನಿಯನ್ನು ತುಂಡು ತುಂಡಾಗಿ ಕತ್ತರಿಸಿ ಕಾಲುವೆಗೆ ಎಸೆದ ಕವಿ

ಬಳ್ಳಾರಿ ಜಿಲ್ಲೆಯ ವಿದ್ಯಾರ್ಥಿನಿ, ನಗರದ ಖಾಸಗಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ. ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗಿದ್ದ ಆಕೆ, ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ನಗರಕ್ಕೆ ಮರಳಿದ್ದರು. ಆಗ ಪೀಣ್ಯ ಸಮೀಪ ಪ್ರಯಾಣಿಕರನ್ನು ಇಳಿಸಲು ಬಸ್‌ ನಿಂತಾಗ ಈ ಕೃತ್ಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 

Follow Us:
Download App:
  • android
  • ios