ಉನ್ನಾವೋ ಗ್ಯಾಂಗ್‌ರೇಪ್ ಕೇಸ್ ಆರೋಪಿಗಳಿಗೆ ಜಾಮೀನು: ಸಂತ್ರಸ್ತೆ ಮನೆಗೆ ಬೆಂಕಿ ಹಚ್ಚಿ ಆಕ್ರೋಶ
ಮನೆಗೆ ಬೆಂಕಿ ಹಚ್ಚಿದ ಪರಿಣಾಮ ಮನೆಯಲ್ಲಿದ್ದ ಇಬ್ಬರು ಪುಟ್ಟ ಮಕ್ಕಳಿಗೆ ಗಂಭೀರ ಗಾಯಗಳಾಗಿದೆ ಎಂದು ವರದಿಯಾಗಿದೆ. ಇನ್ನು, ಸುಟ್ಟ ಗಾಯಕ್ಕೊಳಗಾದ ಶಿಶುಗಳಲ್ಲಿ ಅತ್ಯಾಚಾರ ಸಂತ್ರಸ್ತೆಯ 4 ತಿಂಗಳ ಮಗು ಹಾಗೂ ಆಕೆಯ 3 ತಿಂಗಳ ಸಹೋದರಿ ಸೇರಿದ್ದಾರೆ.
ಉನ್ನಾವೋ (ಏಪ್ರಿಲ್ 19, 2023): 2022 ರಲ್ಲಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ವ್ಯಕ್ತಿಗಳು ಆಕೆಯ ಮನೆಗೆ ಬೆಂಕಿ ಹಚ್ಚಿದ ಭೀಕರ ಬೆಳವಣಿಗೆಯೊಂದು ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. 2022 ರಲ್ಲಿ ಅಪ್ರಾಪ್ತ ದಲಿತ ಬಾಲಕಿಯ ಆರೋಪಿಗಳು ಸೋಮವಾರ ಉನ್ನಾವೋ ಜಿಲ್ಲೆಯ ಹಳ್ಳಿಯೊಂದರಲ್ಲಿ ತಮ್ಮ ಸಹಚರರ ಸಹಾಯದಿಂದ 14 ವರ್ಷದ ಸಂತ್ರಸ್ತೆಯ ಮನೆಗೆ ಬೆಂಕಿ ಹಚ್ಚಿದ್ದಾರೆ.
ಮನೆಗೆ ಬೆಂಕಿ ಹಚ್ಚಿದ ಪರಿಣಾಮ ಮನೆಯಲ್ಲಿದ್ದ ಇಬ್ಬರು ಪುಟ್ಟ ಮಕ್ಕಳಿಗೆ ಗಂಭೀರ ಗಾಯಗಳಾಗಿದೆ ಎಂದು ವರದಿಯಾಗಿದೆ. ಇನ್ನು, ಸುಟ್ಟ ಗಾಯಕ್ಕೊಳಗಾದ ಶಿಶುಗಳಲ್ಲಿ ಅತ್ಯಾಚಾರ ಸಂತ್ರಸ್ತೆಯ 4 ತಿಂಗಳ ಮಗು ಹಾಗೂ ಆಕೆಯ 3 ತಿಂಗಳ ಸಹೋದರಿ ಸೇರಿದ್ದಾರೆ. ಫೆಬ್ರವರಿ 13, 2022 ರಂದು ಅಪ್ರಾಪ್ತ ದಲಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿತ್ತು. ನಂತರ ಆಕೆ ಸೆಪ್ಟೆಂಬರ್ 2022 ರಲ್ಲಿ ಗಂಡು ಮಗುವಿಗೆ ಜನ್ಮ ನೀಡಿದರು.
ಇದನ್ನು ಓದಿ: Crime: ಮೃಗದಂತೆ ಹೆತ್ತ ತಾಯಿ ಮೇಲೆ ಅತ್ಯಾಚಾರ ಮಾಡಿದ ಪಾಪಿ: ಆತ್ಮಹತ್ಯೆ ಮಾಡಿಕೊಂಡ ಸಂತ್ರಸ್ತೆ
ಗಂಭೀರ ಸ್ಥಿತಿಯಲ್ಲಿ ಗಾಯಾಳು ಮಕ್ಕಳು
ಇಬ್ಬರು ಮಕ್ಕಳ ಪೈಕಿ ಒಬ್ಬರಿಗೆ 30 ಶೇಕಡಾ ಸುಟ್ಟ ಗಾಯಗಳಾಗಿದ್ದು, ಮತ್ತು ಇನ್ನೊಂದು ಮಗುವಿಗೆ 40 ಶೇಕಡಾ ಸುಟ್ಟ ಗಾಯವಾಗಿದೆ. ಈ ಹಿನ್ನೆಲೆ ಇಬ್ಬರೂ ಮಕ್ಕಳು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ವರದಿಯಾಗಿದೆ. ಹದಿಹರೆಯದ ಗ್ಯಾಂಗ್‌ರೇಪ್ ಸಂತ್ರಸ್ತೆಯ ಕುಟುಂಬವು ಪ್ರಕರಣವನ್ನು ಹಿಂಪಡೆಯುವಂತೆ ಸಾಮೂಹಿಕ ಅತ್ಯಾಚಾರದ ಆರೋಪಿಗಳ ಕುಟುಂಬದಿಂದ ಒತ್ತಡ ಹೇರಲಾಗುತ್ತಿದೆ ಎಂದು ಹೇಳಿದ್ದಾರೆ. ಬಾಲಕಿ ಮತ್ತು ಆರೋಪಿ ಇಬ್ಬರೂ ದಲಿತರು ಎಂದೂ ತಿಳಿದುಬಂದಿದೆ.
"ನಮ್ಮ ಮಾಹಿತಿಯ ಪ್ರಕಾರ, ಘಟನೆಯು ಫೆಬ್ರವರಿ 13, 2022 ರಂದು ನಡೆದ ಸಾಮೂಹಿಕ ಅತ್ಯಾಚಾರ ಘಟನೆಗೆ ಸಂಬಂಧಿಸಿದೆ. ಮೂವರನ್ನು - ಅಮನ್, ಸತೀಶ್ ಮತ್ತು ಅರುಣ್ - ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. ಅವರಲ್ಲಿ ಇಬ್ಬರು ಸತೀಶ್ ಮತ್ತು ಅರುಣ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ ಎಂದು ಉನ್ನಾವೋ ಹೆಚ್ಚುವರಿ ಜಿಲ್ಲಾಧಿಕಾರಿ ನರೇಂದ್ರ ಕುಮಾರ್ ಪ್ರಕಟಣೆಗೆ ತಿಳಿಸಿದ್ದಾರೆ.
ಇದನ್ನೂ ಓದಿ: Crime: ರೇಪ್ ಮಾಡಿ ಮಹಿಳೆಗೆ ಬೆಂಕಿ ಹಚ್ಚಿದ ರಾಕ್ಷಸ: ಆಸ್ಪತ್ರೆಯಲ್ಲಿ ಬಲಿಯಾದ ಸಂತ್ರಸ್ತೆ
2 ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದ ಆರೋಪಿಗಳು
ಇನ್ನು, ಉತ್ತರ ಪ್ರದೇಶ ಪೊಲೀಸರ ಮಾಹಿತಿ ಮೇರೆಗೆ ಆರೋಪಿಗಳಾದ ಅಮನ್ (18) ಮತ್ತು ಸತೀಶ್ (26) ಎರಡು ತಿಂಗಳ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದರು. “ರೋಷನ್, ಸತೀಶ್, ರಂಜಿತ್, ರಾಜ್ ಬಹದ್ದೂರ್, ಚಂದನ್ ಮತ್ತು ಸುಖದೀನ್ ಅವರು ನನಗೆ ಮತ್ತು ನನ್ನ ಮಗಳಿಗೆ ಹೊಡೆದು ನಮ್ಮ ಮನೆಗೆ ಬೆಂಕಿ ಹಚ್ಚಿದರು, ಇಬ್ಬರು ಮಕ್ಕಳಿಗೆ ಸುಟ್ಟ ಗಾಯಗಳಾಗಿವೆ. ಅಮನ್ ಎಂಬ ವ್ಯಕ್ತಿ ಕೂಡ ಇದರಲ್ಲಿ ಭಾಗಿಯಾಗಿದ್ದಾನೆ’’ ಎಂದು ಈ ಪ್ರಕರಣ ಸಂಬಂಧ ಬಾಲಕಿಯ ತಂದೆ ಸೋಮವಾರ ಸಂಜೆ ದೂರು ನೀಡಿದ್ದಾರೆ.
ಅಲ್ಲದೆ, ಪ್ರಕರಣವನ್ನು ಹಿಂಪಡೆಯುವಂತೆ ಅವರು ನಮಗೆ ಬೆದರಿಕೆ ಹಾಕುತ್ತಿದ್ದರು. ಅವರು ನಮ್ಮನ್ನು ಹೊಡೆದು ನಂತರ ಮಕ್ಕಳನ್ನು ಬೆಂಕಿಯಲ್ಲಿ ಎಸೆದರು. ನನ್ನ ಮತ್ತು ನನ್ನ ಮಗಳ ಮಕ್ಕಳು ಸುಟ್ಟುಹೋದರು ಎಂದು ಸಂತ್ರಸ್ತೆಯ ತಾಯಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ ಇರುವಾಗ ಆರೋಪಿಸಿದ್ದಾರೆ.
ಇದನ್ನೂ ಓದಿ: ಹತ್ರಾಸ್ ಗ್ಯಾಂಗ್‌ರೇಪ್, ಕೊಲೆ ಕೇಸ್: ಮೂವರನ್ನು ಖುಲಾಸೆಗೊಳಿಸಿದ ಕೋರ್ಟ್; ಒಬ್ಬರು ಮಾತ್ರ ದೋಷಿ
ಇನ್ನು, ಈ ದೂರಿನ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಹಾಗೂ, ಎಫ್‌ಐಆರ್‌ನಲ್ಲಿ ಹೆಸರಿಸಲಾದ ವ್ಯಕ್ತಿಗಳಲ್ಲಿ ಒಬ್ಬರಾದ ರಾಜ್ ಬಹದ್ದೂರ್ ಅವರನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಸ್ಥಳೀಯ ಸರ್ಕಲ್ ಆಫೀಸರ್ ಮಾಹಿತಿ ನೀಡಿದ್ದಾರೆ. ಅಲ್ಲದೆ, ಗ್ಯಾಂಗ್‌ರೇಪ್ ಆರೋಪಿಗಳು ಥಳಿಸಿದ್ದಾರೆ ಎಂದು ಕೆಲವು ದಿನಗಳ ಹಿಂದೆ ಬಾಲಕಿಯ ತಂದೆ ನೀಡಿದ ದೂರನ್ನು ಸಹ ಪರಿಶೀಲಿಸುತ್ತಿದ್ದೇವೆ ಎಂದು ಎಡಿಎಂ ಕುಮಾರ್ ತಿಳಿಸಿದ್ದಾರೆ.
ಇದನ್ನೂ ಓದಿ: 5 ವರ್ಷದ ನಿರಂತರ ಸಮ್ಮತಿ ಲೈಂಗಿಕ ಕ್ರಿಯೆ ಅತ್ಯಾಚಾರವಲ್ಲ: ಕರ್ನಾಟಕ ಹೈಕೋರ್ಟ್