ತನ್ನ ಮದುವೆ ಇನ್ವಿಟೇಷನ್ ಕೊಡಲು ಬಂದ ಯುವತಿಯ ಗ್ಯಾಂಗ್‌ರೇಪ್‌ ಮಾಡಿ ಮಾರಿದ ಕಾಮುಕರು!

* ಮದುವೆಯ ಆಮಂತ್ರಣ ಪತ್ರಿಕೆಗಳನ್ನು ಹಂಚಲು ಹೋದ ಯುವತಿಯ ಅತ್ಯಾಚಾರ

* ಆರೋಪಿಗಳು ತನ್ನನ್ನು ರಾಜಕೀಯ ಪಕ್ಷದ ನಾಯಕರೊಬ್ಬರ ಬಳಿಗೆ ಕರೆದೊಯ್ದಿದ್ದರು

* ಪ್ರಕರಣದ ತನಿಖೆಗಿಳಿದ ಯುಪಿ ಪೊಲೀಸರು

UP woman kidnapped while distributing her wedding cards, gang raped and sold pod

ಝಾನ್ಸಿ(ಮೇ.10): ಝಾನ್ಸಿ ಜಿಲ್ಲೆಯ 18ರ ಹರೆಯದ ಯುವತಿಯೊಬ್ಬಳು ತನ್ನ ಮದುವೆಯ ಆಮಂತ್ರಣ ಪತ್ರಿಕೆಗಳನ್ನು ಹಂಚಲು ಹೋದ ಸಂದರ್ಭದಲ್ಲಿ ಮೂವರು  ತನ್ನನ್ನು ಅಪಹರಿಸಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಆರೋಪಿಗಳು ತನ್ನನ್ನು ರಾಜಕೀಯ ಪಕ್ಷದ ನಾಯಕರೊಬ್ಬರ ಬಳಿಗೆ ಕರೆದೊಯ್ದರು ಬಳಿಕ ಮಧ್ಯಪ್ರದೇಶದ ಪಕ್ಕದ ದಾತಿಯಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಬೇರೊಬ್ಬರೊಂದಿಗೆ ಇರುವಂತೆ ಒತ್ತಾಯಿಸಿದರು ಎಂದು ಮಹಿಳೆ ಆರೋಪಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಏಪ್ರಿಲ್ 21 ರಂದು ನಡೆಯಲಿರುವ ತನ್ನ ಮದುವೆಯ ಕಾರ್ಡ್‌ಗಳನ್ನು ವಿತರಿಸಲು ಹೋದಾಗ ಗ್ರಾಮದ ಮೂವರು ಯುವಕರು ಏಪ್ರಿಲ್ 18 ರಂದು ತನ್ನನ್ನು ಅಪಹರಿಸಿದ್ದಾರೆ ಎಂದು ಮಹಿಳೆ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ಕೆಲವು ದಿನಗಳ ಕಾಲ ಬೇರೆ ಬೇರೆ ಸ್ಥಳಗಳಲ್ಲಿ ತನ್ನನ್ನು ಇಟ್ಟುಕೊಂಡು ನಂತರ ಕೆಲವು ದಿನ ಝಾನ್ಸಿಯಲ್ಲಿ ತನ್ನನ್ನು ಓರ್ವ ನಾಯಕನಿಗೆ ಒಪ್ಪಿಸಿದ್ದಾರೆ ಎಂದೂ ಆಕೆ ಆರೋಪಿಸಿದ್ದಾರೆ. ನಂತರ ಮಹಿಳೆಯನ್ನು ಆಕೆಯ ಇಚ್ಛೆಗೆ ವಿರುದ್ಧವಾಗಿ ಬೇರೊಬ್ಬರೊಂದಿಗೆ ಇರಲು ಮಧ್ಯಪ್ರದೇಶದ ದಾತಿಯಾ ಗ್ರಾಮಕ್ಕೆ ಕಳುಹಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಈ ನಡುವೆ ಯುವತಿ ಅದೇಗೋ ತನ್ನ ತಂದೆಯನ್ನು ದಾತಿಯಾದಿಂದ ಕರೆಸುವಲ್ಲಿ ಯಶಸ್ವಿಯಾದಳು, ನಂತರ ಅಆಕೆಯನ್ನು ಪೊಲೀಸರ ಸಹಾಯದಿಂದ ಪಠಾರಿ ಗ್ರಾಮದಿಂದ ರಕ್ಷಿಸಲಾಯಿತು. ತನ್ನನ್ನು ಅಪಹರಿಸಿ, ಅತ್ಯಾಚಾರ ಮಾಡಿ ಮಾರಾಟ ಮಾಡಿದ ಆರೋಪದ ಮೇಲೆ ಕೆಲವರ ವಿರುದ್ಧ ಮಹಿಳೆ ನೀಡಿದ ದೂರಿನ ಮೇರೆಗೆ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ಮ್ಯಾಜಿಸ್ಟ್ರೇಟ್ ಮುಂದೆ ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ತೆಹ್ರಾಲಿ ಸರ್ಕಲ್ ಆಫೀಸರ್ (ಸಿಒ) ಅನುಜ್ ಸಿಂಗ್ ತಿಳಿಸಿದ್ದಾರೆ.

ಈ ಕುರಿತು ಗಂಭೀರವಾಗಿ ತನಿಖೆ ನಡೆಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಒ ತಿಳಿಸಿದ್ದಾರೆ

ಗಾಯಕಿಯ ಸಾಮೂಹಿಕ ಅತ್ಯಾಚಾರ, ಮೂವರು ಅರೆಸ್ಟ್‌!

ಬಿಹಾರದ ಪಾಟ್ನಾದಲ್ಲಿ ಗಾಯಕಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ಘಟನೆ ಬೆಳಕಿಗೆ ಬಂದಿದೆ. ಬಳಿಕ ಸಂತ್ರಸ್ತೆಯ ದೂರಿನ ಮೇರೆಗೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ರಾಮಕೃಷ್ಣನಗರ ಪೊಲೀಸ್ ಠಾಣೆ ವ್ಯಾಪ್ತಿಯ ಜ್ಯೋತಿ ಬಾಬಾ ಪಥದಲ್ಲಿ ಈ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಮೂವರು ಆರೋಪಿಗಳು ಮೊದಲು ಇಲ್ಲಿನ ಯಾವುದೋ ಕಾರ್ಯಕ್ರಮಕ್ಕೆ ಹಾಡು ಹಾಡಲು ಗಾಯಕಿಯನ್ನು ಆಹ್ವಾನಿಸಿದ್ದರು.

ನಂತರ ಯಾವುದೋ ನೆಪದಲ್ಲಿ ಆತನನ್ನು ಕೋಣೆಗೆ ಕರೆದೊಯ್ದು ಮೂವರೂ ಸೇರಿ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಗಾಯಕಿ ಹೇಗೋ ಅವರ ಹಿಡಿತದಿಂದ ತಪ್ಪಿಸಿಕೊಂಡು ಮತ್ತೊಂದು ಕೋಣೆಗೆ ಹೋಗಿ ಪೊಲೀಸರಿಗೆ ಕರೆ ಮಾಡಿದ್ದಾಳೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಯಿಂದ ಒಂದು ಕಂಟ್ರಿಮೇಡ್ ಪಿಸ್ತೂಲ್ ಮತ್ತು ಮೂರು ಗುಂಡುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಸಂತ್ರಸ್ತೆಯನ್ನು ನ್ಯಾಯಾಲಯಕ್ಕೆ ಹಾಜರು

28 ವರ್ಷದ ಸಂತ್ರಸ್ತೆ ಜೆಹಾನಾಬಾದ್ ನಿವಾಸಿಯಾಗಿದ್ದು, ಗಾಯಕಿ ಮಿಥಾಪುರದಲ್ಲಿ ವಾಸಿಸುತ್ತಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹಾಡುತ್ತಿದ್ದಾರೆ. ಸಂತ್ರಸ್ತ ಯುವತಿಯ ಮಾಹಿತಿಯ ನಂತರ ಪೊಲೀಸರು ತಕ್ಷಣ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ಪಾಟ್ನಾ ಎಸ್‌ಎಸ್‌ಪಿ ಮಾನವಜಿತ್ ಸಿಂಗ್ ಧಿಲ್ಲೋನ್ ಹೇಳಿದ್ದಾರೆ. ಸಂತ್ರಸ್ತೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಆ ಬಳಿಕ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ನಮ್ಮನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದ ಆರೋಪಿಗಳು

ಅದೇ ಸಮಯದಲ್ಲಿ, ಮಹಿಳಾ ಗಾಯಕಿ ತನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಬಂಧಿತ ಯುವಕರಲ್ಲಿ ಒಬ್ಬರು ಹೇಳಿದರು. ಆರೋಪಿ, ‘‘ಗಾಯಕಿ ಹಾಗೂ ನನ್ನ ನಡುವೆ ಮೊದಲೇ ಸ್ನೇಹವಿತ್ತು. ನನ್ನಿಂದ ಹಲವು ಬಾರಿ ಹಣವನ್ನೂ ತೆಗೆದುಕೊಂಡಿದ್ದಾಳೆ. ನಾನು ಹಣವನ್ನು ಹಿಂತಿರುಗಿಸಲು ಕೇಳಿದಾಗ ಅವಳು ನಿರಾಕರಿಸುತ್ತಲೇ ಇದ್ದಳು. ನಾವು ನಮ್ಮ ಮೇಲೆ ಒತ್ತಡ ಹೇರಿದಾಗ ಅವರು ನಮ್ಮ ಮೇಲೆ ಸುಳ್ಳು ಆರೋಪ ಮಾಡುವ ಮೂಲಕ ನಮ್ಮನ್ನು ಸಿಲುಕಿಸಿದ್ದಾರೆ ಎಂದಿದ್ದಾರೆ. 

Latest Videos
Follow Us:
Download App:
  • android
  • ios