ಅತಿಥಿ ಉಪನ್ಯಾಸಕರ ಅಕಾಲಿಕ ಸಾವು: ತನಿಖೆಗೆ ಆಗ್ರಹ

ಕೊರೋನ ಲಾಕ್‌ಡೌನ್‌ನಿಂದಾಗಿ ಕಳೆದ 3 ತಿಂಗಳಲ್ಲಿ ಉದ್ಯೋಗ ಭದ್ರತೆ, ನಿಗದಿತ ಸಮಯಕ್ಕೆ ವೇತನ ಸಿಗದೆ ಜೀವನದಲ್ಲಿ ಜಿಗುಪ್ಸೆ ಬಂದಿದೆ. ಹಲವರು ಸಂಕಷ್ಟಎದುರಿಸಲಾರದೆ ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಕೆಲವರು ಅನಾರೋಗ್ಯಕ್ಕೆ ಈಡಾಗಿದ್ದರೂ ಚಿಕಿತ್ಸೆ ಪಡೆಯಲು ಹಣವಿಲ್ಲದೆ ಪರದಾಡುತ್ತಿದ್ದಾರೆ ಎಂದು ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ ಬೇಸರ ವ್ಯಕ್ತಪಡಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

Urges Investigation On Guest Lecturers Premature Death in Shivamogga

ಶಿವಮೊಗ್ಗ(ಜೂ.20): ಅತಿಥಿ ಉಪನ್ಯಾಸಕರ ಸರಣಿ ಆತ್ಮಹತ್ಯೆ ಹಾಗೂ ಕುಟುಂಬ ಸದಸ್ಯರ ಅಕಾಲಿಕ ಸಾವಿನ ಕುರಿತು ಉನ್ನತ ಮಟ್ಟದ ನ್ಯಾಯಾಂಗ ತನಿಖೆ ಅಥವಾ ಸದನ ಸಮಿತಿ ರಚಿಸಬೇಕೆಂದು ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ನಂತರ ಜಿಲ್ಲಾ ಉಸ್ತುವಾರಿ ಕೆ.ಎಸ್‌.ಈಶ್ವರಪ್ಪ ಹಾಗೂ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

ರಾಜ್ಯದಲ್ಲಿ ಪ್ರತಿವರ್ಷ 3 ಲಕ್ಷ ವಿದ್ಯಾರ್ಥಗಳ ಜೀವನ ರೂಪಿಸುವಲ್ಲಿ ಮಹತ್ತರ ಪಾತ್ರ ವಹಿಸುವ ಉಪನ್ಯಾಸಕರುಗಳೇ ಇದೀಗ ಕತ್ತಲಲ್ಲಿ ಮುಳುಗುವಂತಾಗಿದೆ. ಲಾಕ್‌ಡೌನ್‌ನಿಂದಾಗಿ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅನೇಕ ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಸಾವಿರಾರು ಅತಿಥಿ ಉಪನ್ಯಾಸಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕೊರೋನ ಲಾಕ್‌ಡೌನ್‌ನಿಂದಾಗಿ ಕಳೆದ 3 ತಿಂಗಳಲ್ಲಿ ಉದ್ಯೋಗ ಭದ್ರತೆ, ನಿಗದಿತ ಸಮಯಕ್ಕೆ ವೇತನ ಸಿಗದೆ ಜೀವನದಲ್ಲಿ ಜಿಗುಪ್ಸೆ ಬಂದಿದೆ. ಹಲವರು ಸಂಕಷ್ಟಎದುರಿಸಲಾರದೆ ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಕೆಲವರು ಅನಾರೋಗ್ಯಕ್ಕೆ ಈಡಾಗಿದ್ದರೂ ಚಿಕಿತ್ಸೆ ಪಡೆಯಲು ಹಣವಿಲ್ಲದೆ ಪರದಾಡುತ್ತಿದ್ದಾರೆ ಎಂದು ಹೇಳಿದರು. ರಾಜ್ಯದಲ್ಲಿನ ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ ಬೇಡಿಕೆಯನ್ನು ಆದಷ್ಟು ಶೀರ್ಘದಲ್ಲೇ ಈಡೇರಿಸಬೇಕೆಂದು ಒತ್ತಾಯಿಸಿದರು. ಲಾಕ್‌ಡೌನ್‌ ಅವಧಿಯನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸಿ ಅತಿಥಿ ಉಪನ್ಯಾಸಕರಿಗೆ 12 ತಿಂಗಳ ವೇತನ ನೀಡಬೇಕು, ಸೇವೆಯಲ್ಲಿ ವಿಲೀನಗೊಳಿಸಿ ತಕ್ಷಣ ಉದ್ಯೋಗ ಭದ್ರತೆ ಘೋಷಿಸಿ ನಿಯಮಾನುಸಾರ ವೈದ್ಯಕೀಯ ಸೌಲಭ್ಯ ಮತ್ತು ಭವಿಷ್ಯನಿಧಿ ನೀಡಬೇಕೆಂದು ಆಗ್ರಹಿಸಿದರು.

ಅತಿಥಿ ಉಪನ್ಯಾಸಕರಿಗೆ ಸೇವಾ ಭದ್ರತೆ ನೀಡಿ; ಸರ್ಕಾರಕ್ಕೆ ಒತ್ತಾಯ

ಆತ್ಮಹತ್ಯೆ ಮಾಡಿಕೊಂಡ ಅತಿಥಿ ಉಪನ್ಯಾಸಕರ ಕುಟುಂಬಕ್ಕೆ 10 ಲಕ್ಷ ರು. ಪರಿಹಾರ ನೀಡಬೇಕು. 2020ನೇ ಸಾಲಿಗೆ ಅನಗತ್ಯವಾಗಿ ಬೇರೆ ಕಾಲೇಜುಗಳಿಂದ ಸಹಾಯಕ ಪ್ರಾಧ್ಯಾಪಕರನ್ನು ನಿಯೋಜನೆ ಮಾಡಲಾಗಿದ್ದು, ಇದನ್ನು ರದ್ದುಪಡಿಸಿ ಅತಿಥಿ ಉಪನ್ಯಾಸಕರನ್ನು ಸೇವೆಯಲ್ಲಿ ಮುಂದುವರೆಸಬೇಕೆಂದು ಆಗ್ರಹಿಸಿದರು. ಸಮಿತಿ ರಾಜ್ಯಾಧ್ಯಕ್ಷ ಡಾ.ಎಚ್‌. ಸೋಮಶೇಖರ್‌ ಶಿಮೊಗ್ಗಿ ಮತ್ತಿತರರು ಪಾಲ್ಗೊಂಡಿದ್ದರು.

 

Latest Videos
Follow Us:
Download App:
  • android
  • ios