Asianet Suvarna News Asianet Suvarna News

ಮಂಗಳೂರು: ಫ್ಲೈಟ್‌ನಲ್ಲಿ ಆಗಮಿಸಿ ರೈಲಿನಲ್ಲಿ ಚಿನ್ನ ಕದಿಯುತ್ತಿದ್ದ ಯುಪಿ ಕಳ್ಳರ ಸೆರೆ

ಆರೋಪಿಗಳು ಉತ್ತರ ಪ್ರದೇಶದಿಂದ ವಿಮಾನದಲ್ಲಿ ಬಂದು ರಾತ್ರಿ ವೇಳೆ ಸಂಚರಿಸುವ ರೈಲುಗಳನ್ನು ಕಳ್ಳತನಕ್ಕೆ ಆಯ್ಕೆ ಮಾಡಿಕೊಳ್ಳುತ್ತಿದ್ದರು. ರೈಲಿನಲ್ಲಿ ಚಿನ್ನಾಭರಣ ಧರಿಸಿರುವ ವೃದ್ಧರು ಹಾಗೂ ಮಹಿಳಾ ಪ್ರಯಾಣಿಕರನ್ನು ಗುರುತಿಸುತ್ತಿದ್ದರು. ರೈಲಿನ ವೇಗ ಕಡಿಮೆ ಆದ ಸಂದರ್ಭ ಅವರ ಚಿನ್ನಾಭರಣಗಳನ್ನು ಕಿತ್ತುಕೊಂಡು, ಬೋಗಿಗಳಿಂದ ಜಿಗಿದು ಪರಾರಿಯಾಗುತ್ತಿದ್ದರು. 

Uttar Pradesh Based Thieves Arrested For Gold Theft Cases in Mangaluru grg
Author
First Published Oct 6, 2023, 4:09 AM IST

ಮಂಗಳೂರು(ಅ.06):  ಕಳ್ಳತನಕ್ಕಾಗಿ ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ವಾರಾಂತ್ಯದ ರೈಲುಗಳಲ್ಲಿ ಪ್ರಯಾಣಿಕರ ಚಿನ್ನಾಭರಣ ಎಗರಿಸುತ್ತಿದ್ದ ಇಬ್ಬರು ಹೈಟೆಕ್‌ ಕಳ್ಳರನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಉತ್ತರ ಪ್ರದೇಶದ ಮಿರ್ಜಾಪುರದ ಧೋರುಪುರದ ಅಭಯ್‌ರಾಜ್​ ಸಿಂಗ್ (26) ಮತ್ತು ರಾಜ್‌ಪುರದ ಹರಿಶಂಕರ್​ ಗಿರಿ (25) ಎಂದು ಗುರುತಿಸಲಾಗಿದೆ. ಆರೋಪಿಗಳು ಉತ್ತರ ಪ್ರದೇಶದಿಂದ ವಿಮಾನದಲ್ಲಿ ಬಂದು ರಾತ್ರಿ ವೇಳೆ ಸಂಚರಿಸುವ ರೈಲುಗಳನ್ನು ಕಳ್ಳತನಕ್ಕೆ ಆಯ್ಕೆ ಮಾಡಿಕೊಳ್ಳುತ್ತಿದ್ದರು. ರೈಲಿನಲ್ಲಿ ಚಿನ್ನಾಭರಣ ಧರಿಸಿರುವ ವೃದ್ಧರು ಹಾಗೂ ಮಹಿಳಾ ಪ್ರಯಾಣಿಕರನ್ನು ಗುರುತಿಸುತ್ತಿದ್ದರು. ರೈಲಿನ ವೇಗ ಕಡಿಮೆ ಆದ ಸಂದರ್ಭ ಅವರ ಚಿನ್ನಾಭರಣಗಳನ್ನು ಕಿತ್ತುಕೊಂಡು, ಬೋಗಿಗಳಿಂದ ಜಿಗಿದು ಪರಾರಿಯಾಗುತ್ತಿದ್ದರು. ಮಂಗಳೂರು ಮತ್ತು ಸುರತ್ಕಲ್​ ನಡುವೆ ಸೆಪ್ಟೆಂಬರ್ 28ರಂದು ಸಂಚರಿಸಿದ್ದ ರೈಲಿನಲ್ಲಿ ಪ್ರಯಾಣಿಕರೊಬ್ಬರ ಚಿನ್ನಾಭರಣ ಕಳುವಾಗಿದ್ದು, ಈ ಬಗ್ಗೆ ದೂರು ದಾಖಲಾಗಿತ್ತು. ಇಬ್ಬರು ಯುವಕರ ವರ್ತನೆ ಬಗ್ಗೆ ಸಂದೇಹ ಮೂಡಿದ್ದರಿಂದ ಆರ್​ಪಿಎಫ್ ಪೊಲೀಸರು ಅ. 2ರಂದು ಅವರನ್ನು ವಶಕ್ಕೆ ಪಡೆದದ್ದರು. ಈ ವೇಳೆ ಕಳವು ಮಾಡಿದನ್ನು ಅವರು ಒಪ್ಪಿಕೊಂಡರು.

ಬೆಂಗಳೂರಿನಲ್ಲಿ ಪ್ರೀತಿಸಿ ಮದುವೆಯಾಗಿ ವರದಕ್ಷಿಣೆಗೋಸ್ಕರ ಮಡದಿಯನ್ನೇ ಕೊಲೆಗೈದ ಪಾಪಿ ಗಂಡ

ಬಳಿಕ, ಆರೋಪಿಗಳನ್ನು ಮಂಗಳೂರು ರೈಲ್ವೆ ಪೊಲೀಸರ ವಶಕ್ಕೆ ಒಪ್ಪಿಸಲಾಗಿದೆ. ರೈಲ್ವೆಯ ಪಾಲಕ್ಕಾಡ್, ತಿರುವನಂತಪುರ ವಲಯಗಳಲ್ಲಿ ಹಾಗೂ ಕೊಂಕಣ ರೈಲ್ವೆಯ ವ್ಯಾಪ್ತಿಯಲ್ಲಿ ಸಂಚರಿಸುವ ರೈಲುಗಳಲ್ಲಿ ಪ್ರಯಾಣಿಕರಿಂದ ಕದ್ದಿರುವ ಚಿನ್ನಾಭರಣಗಳು ಸೇರಿ ಒಟ್ಟು 125 ಗ್ರಾಂ ತೂಕದ ಚಿನ್ನವನ್ನು ಅವರಿಂದ ವಶಪಡಿಸಿಕೊಳ್ಳಲಾಗಿದೆ.

Follow Us:
Download App:
  • android
  • ios