ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 45 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

ಉತ್ತರಪ್ರದೇಶ (ಮೇ 23): ಉತ್ತರ ಪ್ರದೇಶದ (Uttar Pradesh) ಬುಲಂದ್‌ಶಹರ್‌ನ ಛತಾರಿ ಪ್ರದೇಶದಲ್ಲಿ ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 45 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸಂತ್ರಸ್ತೆ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದ್ದು, ಆರೋಪಿ ನೆರೆ ಮನೆಯವ ಆಕೆಯನ್ನು ಅಪಹರಿಸಿ ಏಕಾಂತ ಸ್ಥಳಕ್ಕೆ ಕರೆದೊಯ್ದಿದ್ದ. ಆ ಸ್ಥಳದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

"ಸಂತ್ರಸ್ತೆಯ ವೈದ್ಯಕೀಯ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಏಳು ದಿನಗಳೊಳಗೆ ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಸಬೇಕು ಎಂಬುದು ನಮ್ಮ ಪ್ರಯತ್ನವಾಗಿದೆ" ಎಂದು ಬುಲಂದ್‌ಶಹರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಸಿಂಗ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಐಪಿಸಿಯ ಸಂಬಂಧಿತ ಸೆಕ್ಷನ್‌ಗಳ ಅನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ಹೆಚ್ಚಿನ ತನಿಖೆಗಳು ನಡೆಯುತ್ತಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ

ಇದನ್ನೂ ಓದಿ:ಡ್ರಗ್ಸ್ ನೀಡಿ ಅತ್ಯಾಚಾರವೆಸಗಿ ಬ್ಲ್ಯಾಕ್‌ಮೇಲ್: ಕಾಮುಕನ ಹೆಡೆಮುರಿ ಕಟ್ಟಿದ ಪೊಲೀಸರು