ಬದ್ರಿನಾಥ್ ಹೆದ್ದಾರಿಯಲ್ಲಿ ಭೀಕರ ಅಪಘಾತ, ಪ್ರಯಾಣಿಕರ ಬಸ್ ನದಿಗೆ ಉರುಳಿ 10 ಸಾವು!
ರಿಷಿಕೇಶ್-ಬದ್ರಿನಾಥ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. 23 ಮಂದಿ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್ ಪ್ರಪಾತಕ್ಕುರಳಿದೆ. ಪರಿಣಾಮ 10 ಮಂದಿ ಸ್ಥಳದಲ್ಲೆ ಮೃತಪಟ್ಟರೆ ಹಲವರು ಗಂಭೀರ ಗಾಯಗೊಂಡಿದ್ದಾರೆ.
ಬದ್ರಿನಾಥ್(ಜೂ.15) ರಿಷಿಕೇಶ್-ಬದ್ರಿನಾಥ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. 23 ಮಂದಿ ಪ್ರಯಾಣಿಕರ ಹೊತ್ತು ಸಾಗುತ್ತಿದ್ದ ಮಿನಿ ಬಸ್ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. ಇದರ ಪರಿಣಾಮ ಸ್ಥಳದಲ್ಲೆ 10 ಮಂದಿ ನಿಧನರಾಗಿದ್ದಾರೆ. ಹಲವರು ಗಂಭೀರ ಗಾಯಗೊಂಡಿದ್ದಾರೆ. ಘಟನೆಗೆ ಆಘಾತ ವ್ಯಕ್ತಪಡಿಸಿರುವ ಉತ್ತರ ಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಮಿ, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಇತ್ತ ಗಾಯಗೊಂಡವರಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಸ್ಥಳೀಯ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.
ರುದ್ರಪಯಾಗ್ ಜಿಲ್ಲೆಯ ಬದ್ರಿನಾಥ್ ಹೆದ್ದಾರಿಯ ರಾಯಿತೊಲಿ ಬಳಿ ಈ ಅಫಘಾತ ಸಂಭವಿಸಿದೆ. ಮಿನಿ ಬಸ್ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದೆ. ಕೆಳ ಭಾಗದಲ್ಲಿ ಹರಿಯುತ್ತಿದ್ದ ಅಲಕನಂದಾ ನದಿಗೆ ಬಸ್ ಬಿದ್ದಿದೆ. ಹೀಗಾಗಿ ಅಪಘಾತದ ತೀವ್ರತೆ ಹೆಚ್ಚಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು, ರಾಜ್ಯ ಎಸ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ನಡೆಸಿದೆ.
ಬೆಂಗಳೂರು-ಮೈಸೂರು ಎಕ್ಸಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಆಂಧ್ರ ಮೂಲದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ
ಸ್ಥಳೀಯರ ಪ್ರಕಾರ, ನಿಯಂತ್ರಣ ತಪ್ಪಿದ ಬಸ್, ರಸ್ತೆ ಪಕ್ಕದಲ್ಲಿ ನಿಂತಿದ್ದ ಜನರ ಮೇಲೂ ಹರಿದು ಪ್ರಪಾತಕ್ಕೆ ಉರುಳಿದೆ. ಬಸ್ ಅಪಘಾತಕ್ಕೆ ಕಾರಣವೇನು ಅನ್ನೋದು ಬಹಿರಂಗವಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮಿನಿ ಬಸ್‌ನಲ್ಲಿ ನಿಗದಿಗಿಂತ ಹೆಚ್ಚಿನ ಪ್ರಯಾಣಿಕರನ್ನು ತುಂಬಿಸಲಾಗಿತ್ತೆ? ಅತೀ ವೇಗ ಸೇರಿದಂತೆ ಇತರ ಕೆಲ ಪ್ರಮುಖ ಆಯಾಮಗಳಲ್ಲೂ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಉತ್ತರಖಂಡ ಮುಖ್ಯಮಂತ್ರಿ ಪಷ್ಕರ್ ಸಿಂಗ್ ಧಮಿ, ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ರುದ್ರಪಯಾಗ್ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತ ಮಾಹಿತಿ ತಿಳಿದು ತೀವ್ರ ನೋವಾಗಿದೆ. ಸ್ಥಳೀಯ ಜಿಲ್ಲಾಡಳಿ, ಎಸ್‌ಡಿಆರ್‌ಎಪ್ ತಂಡ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಗಾಯಗೊಂಡವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದೇ ವೇಳೆ ಮೃತಕುಟುಂಬಕ್ಕೆ ದುಖವನ್ನು ತಡೆಯುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲು ಕೇದಾರನಾಥನ ಬಳಿ ಪ್ರಾರ್ಥಿಸುತ್ತೇನೆ ಎಂದು ಧಮಿ ಹೇಳಿದ್ದಾರೆ.
ಪಲ್ಸರ್ ಬೈಕ್‌ಗೆ BMW ಕಾರು ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು
ಗಂಭೀರವಾಗಿ ಗಾಯಗೊಂಡಿರುವ ಪ್ರಯಾಣಿಕರನ್ನು ಹೆಲಿಕಾಪ್ಟರ್ ಮೂಲಕ ರಿಷಿಕೇಶದ ಏಮ್ಸ್ ಆಸ್ಪತ್ರೆಗೆ ರವಾನಿಸಲಾಗುತ್ತಿದೆ. ಗಾಯಗೊಂಡವರಿಗೆ ಎಲ್ಲಾ ರೀತಿಯ ಚಿಕಿತ್ಸೆ ನೀಡಲು ಸ್ಥಳೀಯ ಜಿಲ್ಲಾಡಳಿತ ಪ್ರಯತ್ನಿಸುತ್ತಿದೆ. ಇತ್ತ ಮೃತರ ಕುಟುಂಬಸ್ಥರು ಆಸ್ಪತ್ರೆ ದೌಡಾಯಿಸಿದ್ದಾರೆ.