ಬೆಂಗಳೂರು[ಫೆ.11]: ಸಾಫ್ಟ್‌ವೇರ್‌ ಉದ್ಯೋಗಿಯೊಬ್ಬರು ಸ್ನಾನ ಮಾಡುವಾಗ ದುಷ್ಕರ್ಮಿಯೊಬ್ಬ ವಿಡಿಯೋ ಚಿತ್ರೀಕರಣ ಮಾಡಿರುವ ಕೃತ್ಯ ಬೆಳಕಿಗೆ ಬಂದಿದ್ದು, ಆರೋಪಿಗಾಗಿ ವೈಟ್‌ಫೀಲ್ಡ್‌ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ.

ಆಂಧ್ರಪ್ರದೇಶ ಮೂಲದ ಮಹಿಳೆ ನಗರದ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್‌ ಉದ್ಯೋಗಿಯಾಗಿದ್ದು, ವೈಟ್‌ಫೀಲ್ಡ್‌ನಲ್ಲಿ ಸ್ವಂತ ನಿವಾಸ ಹೊಂದಿದ್ದಾರೆ. ಫೆ.7ರಂದು ಮಹಿಳೆ ಸ್ನಾನ ಮಾಡುವಾಗ ಕಿಟಕಿಯಿಂದ ಆರೋಪಿ ಮೊಬೈಲ್‌ನಲ್ಲಿ ವಿಡಿಯೋ ಮಾಡುತ್ತಿದ್ದ. ದುಷ್ಕರ್ಮಿ ವಿಡಿಯೋ ಮಾಡುವುದನ್ನು ನೋಡಿದ ಮಹಿಳೆ ಚೀರಿಕೊಂಡಿದ್ದು, ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ.

ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಹೂತಿಟ್ಟಿದ್ದ ಬ್ಯಾರಲ್‌ ಗನ್‌ ಪತ್ತೆ!

ಘಟನೆ ಸಂಬಂಧ ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ ಎಂದು ವೈಟ್‌ಫೀಲ್ಡ್‌ ಠಾಣೆ ಪೊಲೀಸರು ತಿಳಿಸಿದ್ದಾರೆ.