Vijayanagara school theft news: ವಿಜಯನಗರ ಜಿಲ್ಲೆ ಹೂವಿನಹಡಗಲಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಕಳ್ಳತನ ನಡೆದಿದೆ. ಖದೀಮರು ಕಂಪ್ಯೂಟರ್ ಕೊಠಡಿಯಲ್ಲಿದ್ದ 16 ಬ್ಯಾಟರಿ ಕದ್ದೊಯ್ದಿದ್ದು, ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೊಲೀಸರು ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ನಡೆಸುತ್ತಿದ್ದಾರೆ.

ವಿಜಯನಗರ (ಅ.8): ಕಂಪ್ಯೂಟರ್ ತರಬೇತಿ ಕೊಠಡಿಯಲ್ಲಿದ್ದ ಬ್ಯಾಟರಿಗಳನ್ನ ರಾತ್ರೋರಾತ್ರಿ ಕಳ್ಳತನ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೀರಾಕೊರನಹಳ್ಳಿ ಗ್ರಾಮದ ಶರಣಬಸವೇಶ್ವರ ಸರ್ಕಾರಿ ಪ್ರೌಢಶಾಲೆಯಲ್ಲಿ ಕಳ್ಳತನದ ಘಟನೆ ನಡೆದಿದೆ. ಖದೀಮರು ಶಾಲೆಯ ಬಾಗಿಲು ಮುರಿದು ಕಂಪ್ಯೂಟರ್ ತರಬೇತಿ ಕೊಠಡಿಯಿಂದ 16 ಬ್ಯಾಟರಿಗಳನ್ನು ಕಳ್ಳತನ ಮಾಡಿದ್ದಾರೆ. ಗ್ರಾಮಸ್ಥರು ವಾಯುವಿಹಾರಕ್ಕೆ ತೆರಳಿದ ಸಂದರ್ಭದಲ್ಲಿ ಶಾಲೆಯ ಬೀಗ ಮುರಿದ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಕೊಪ್ಪಳದ ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಬರ್ಬರ ಕೊಲೆ!

ಸಿಸಿ ಕ್ಯಾಮೆರಾದಲ್ಲಿ ಸೆರೆ:

ಹಡಗಲಿ ಪೊಲೀಸರು ಸ್ಥಳಕ್ಕೆ ಆಗಮಿಸಿ, ಶಾಲೆಯ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ, ಇಬ್ಬರು ಯುವಕರು ಬ್ಯಾಟರಿಗಳನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸೆರೆಯಾಗಿದೆ. ಈ ದೃಶ್ಯಾವಳಿಗಳ ಆಧಾರದ ಮೇಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ: ಅರಮನೆ ಮೈದಾನ ಎದುರಲ್ಲೇ ಭೀಕರ ಕೊಲೆ; ಹಾಡಹಗಲೇ ಕಾರು ಅಡ್ಡಗಟ್ಟಿ, ಖಾರದಪುಡಿ ಎರಚಿ ಹತ್ಯೆ!

ಕಳ್ಳತನದ ಕೃತ್ಯವು ಶಾಲೆಯ ಭದ್ರತೆಯ ಕೊರತೆಯನ್ನು ಎತ್ತಿ ತೋರಿಸಿದ್ದಲ್ಲದೇ ಗ್ರಾಮಸ್ಥರಲ್ಲಿ ಕಳ್ಳರ ಬಗ್ಗೆ ಆತಂಕ ಮೂಡಿಸಿದೆ. ಪೊಲೀಸರು ಆರೋಪಿಗಳನ್ನು ಶೀಘ್ರವೇ ಬಂಧಿಸುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ಶಾಲಾ ಆಡಳಿತವು ಭದ್ರತಾ ಕ್ರಮಗಳನ್ನು ಇನ್ನಷ್ಟು ಬಿಗಿಗೊಳಿಸಲು ಮುಂದಾಗಿದೆ