Bengaluru: ಹಳ್ಳಿ ಹುಡುಗಿ ಬೇಕು ಅಂತ ಮದ್ವೆಯಾಗಿ, ಆರೇ ತಿಂಗಳಿಗೆ ಕೊಲೆ ಮಾಡಿದ ಕಿತಾ'ಪತಿ'
ಕಳೆದ ಆರು ತಿಂಗಳ ಹಿಂದಷ್ಟೇ ಹಳ್ಳಿ ಹುಡುಗಿಯನ್ನು ಮದುವೆ ಮಾಡಿಕೊಂಡು ಬೆಂಗಳೂರಿಗೆ ಕರೆದುಕೊಂಡ ಬಂದ ಪತಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಬೆಂಗಳೂರು (ಜು.26): ಕಳೆದ ಆರು ತಿಂಗಳ ಹಿಂದಷ್ಟೇ ಹಳ್ಳಿ ಹುಡುಗಿಯನ್ನು ಮದುವೆಯಾಗಿ ಬೆಂಗಳೂರಿಗೆ ಕರೆತಂದಿದ್ದ ನವ ವಿವಾಹಿತ, ನಿನ್ನೆ ತಡರಾತ್ರಿ ವೇಳೆ ಹೆಂಡತಿಯ ಕತ್ತು ಹಿಸುಕಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕಥೆ ಕಟ್ಟಿದ್ದಾನೆ. ಪೊಲೀಸರು ವಿಚಾರಣೆ ನಡೆಸಿದ ಬೆನ್ನಲ್ಲೇ ಸತ್ಯವನ್ನು ಬಾಯಿಬಿಟ್ಟಿದ್ದಾನೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜೀವನ ಕಟ್ಟಿಕೊಳ್ಳುವುದಕ್ಕಾಗಿ ಬರುವ ಉದ್ಯೋಗಿಗಳು ತಾವಾಯ್ತು, ತಮ್ಮ ಕೆಲಸವಾಯ್ತು ಎಂದು ಮಾಡಿಕೊಂಡು ಸುಖ ಸಂಸಾರ ಮಾಡಿಕೊಂಡಿರದೇ ಅನೈತಿಕ ಚಟುವಟಿಕೆ ಹಾಗೂ ಅಪರಾಧ ಪ್ರಕರಣಗಳಲ್ಲಿ ಹೆಚ್ಚಾಗಿ ಭಾಗವಹಿಸುತ್ತಿದ್ದಾರೆ. ಇನ್ನು ಬಾಣಸವಾಡಿಯಲ್ಲಿಯೂ ಕೂಡ ಇಂತಹದ್ದೇ ಘಟನೆ ನಡೆದಿದೆ. ನನಗೆ ಹಳ್ಳಿ ಹುಡುಗಿಯೇ ಇಷ್ಟವೆಂದು ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿ, ಪತ್ನಿಯನ್ನು ತನ್ನೊಂದಿಗೆ ಕರೆದುಕೊಂಡು ಬಂದು ಬೆಂಗಳೂರಿನಲ್ಲಿ ವಾಸವಿದ್ದ ಆರೋಪಿ, ಈಗ ತನ್ನ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ.
ಉಡುಪಿ ಕಾಲೇಜು ಶೌಚಗೃಹದಲ್ಲಿ ಹಿಂದೂ ಹುಡ್ಗೀರ ವಿಡಿಯೋ: 3 ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್
ಆರು ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ಜೋಡಿ: ಕೆಂಚಮ್ಮ (19) ಕೊಲೆಯಾದ ಮಹಿಳೆ ಆಗಿದ್ದಾಳೆ. ಕಳೆದ ಆರು ತಿಂಗಳ ಹಿಂದೆ ಸಿದ್ದಪ್ಪ ಬಸವರಾಜ್ ಬೆನ್ನೂರು ಜೊತೆ ಕೆಂಚಮ್ಮನ ವಿವಾಹವಾಗಿತ್ತು. ಮದುವೆಯಾದಾಗಿನಿಂದ ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ನಿನ್ನೆ ತಡರಾತ್ರಿ 2 ಗಂಟೆಗೆ ಗಲಾಟೆ ವಿಕೋಪಕ್ಕೆ ತಿರುಗಿದ್ದು ಕೊಲೆ ನಡೆದಿದೆ. ಗಂಡನೇ ಹೆಂಡತಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಅವಳು ಸತ್ತುಹೋದ ನಂತರ ತಪ್ಪಿಸಿಕೊಳ್ಳುವುದಕ್ಕಾಗಿ ನೇಣು ಬಿಗಿದುಕೊಮಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸಿದ್ದಪ್ಪ ಹೈಡ್ರಾಮ ಮಾಡಿದ್ದಾನೆ. ಬೆಳಗ್ಗೆ ಎದ್ದ ತಕ್ಷಣ ಕೆಂಚಮ್ಮ ನೇಣುಬಿಗಿದುಕೊಂಡಿದ್ದಾಳೆ ಎಂದು ಸಂಬಂಧಿಕರಿಗೆ ಕರೆ ಮಾಡಿದ್ದನು.
ಪೊಲೀಸರ ವಿಚಾರಣೆ ವೇಳೆ ಸತ್ಯ ಬಾಯ್ಬಿಟ್ಟ ಆರೋಪಿ: ಇನ್ನು ಘಟನೆಯ ಬಗ್ಗೆ ಸಂಬಂಧಿಕರು ಬಂದು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿದ ಪೊಲೀಸರಿಗೆ ಅನುಮಾನ ಬಂದಿತ್ತು. ಆದ್ದರಿಂದ ಸಿದ್ದಪ್ಪನನ್ನು ವಿಚಾರಣೆ ನಡೆಸಿದಾಗ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹೆಚ್ ಬಿಆರ್ ಲೇಔಟಲ್ಲಿ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಬಾಣಸವಾಡಿ ಪೊಲೀಸರು ಸಿದ್ದಪ್ಪನನ್ನು ವಶಕ್ಕೆ ಪಡೆದಿದ್ದಾರೆ.