ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಕಾರಣಕ್ಕೆ ಪತ್ನಿಯೇ ಪ್ರಿಯಕರನ ಜತೆಗೂಡಿ ಪತಿಯನ್ನೇ ಕೊಲೆ ಮಾಡಿದ ಘಟನೆ ರಾಯಚೂರು ತಾಲೂಕಿನ ಸಿಂಗನೋಡಿ ತಾಂಡಾದಲ್ಲಿ ನಡೆದಿದೆ.  

ರಾಯಚೂರು(ಮಾ.22): ಅಕ್ರಮ ಸಂಬಂಧ ವಿಚಾರವಾಗಿ ದಂಪತಿ ನಡುವೆ ಉಂಟಾಗಿದ್ದ ಜಗಳ ಕೊಲೆಯಲ್ಲಿ ಅಂತ್ಯ ಕಂಡಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಕಾರಣಕ್ಕೆ ಪತ್ನಿಯೇ ಪ್ರಿಯಕರನ ಜತೆಗೂಡಿ ಪತಿಯನ್ನೇ ಕೊಲೆ ಮಾಡಿದ ಘಟನೆ ತಾಲೂಕಿನ ಸಿಂಗನೋಡಿ ತಾಂಡಾದಲ್ಲಿ ಬುಧವಾರ ರಾತ್ರಿ ನಡೆದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗ್ರಾಮದ ನಿವಾಸಿ, ಗ್ರಾಪಂ ಸದಸ್ಯ ರಾಜು ನಾಯ್ಕ್ (35) ಕೊಲೆಯಾದ ಪತಿಯಾಗಿದ್ದಾನೆ. ಪತ್ನಿ ಸ್ನೇಹ ಕೃತ್ಯವೆಸಗಿದ ಆರೋಪಿಯಾಗಿದ್ದಾಳೆ. ಕಳೆದ ಎರಡು ವರ್ಷಗಳ ಹಿಂದಿನಿಂದ ಅಕ್ರಮ ಸಂಬಂಧ ಹೊಂದಿದ್ದ ಪತ್ನಿ ಸ್ನೇಹ ಜೊತೆಗೆ ಪತಿ ರಾಜು ನಾಯ್ಕ್‌ ಜಗಳವಾಡುತ್ತಿದ್ದನು. 

ಮಂಡ್ಯ: ಕೊಟ್ಟ ಹಣ ಕೇಳಲು ಬಂದ ಮಹಿಳೆ, ಮಗು ಬರ್ಬರ ಹತ್ಯೆ..!

ಇದೇ ಸಿಟ್ಟಿನಿಂದ ಪತಿಗೆ ಕುಡಿಯುವ ಮದ್ಯದಲ್ಲಿ ನಿದ್ರೆ ಮಾತ್ರೆ ಹಾಕಿ ನಂತರ ಕತ್ತು ಹಸುಕಿ ಕೊಲೆ ಮಾಡಿದ್ದಾಳೆ ಎಂದು ದೂರಿನಲ್ಲಿ ತಿಳಿಸಿದ್ದು ಯಾಪಲದಿನ್ನಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಸ್ನೇಹಾಳನ್ನು ಬಂಧಿಸಿರುವ ಪೊಲೀಸರು ಆಕೆಯ ಪ್ರಿಯಕರನ ಶೋಧ ಕಾರ್ಯ ಮುಂದುವರಿಸಿದ್ದಾರೆ.