ಮತ್ತೊಂದು ನಿರ್ಭಯ ಪ್ರಕರಣದಿಂದ ಬೆಚ್ಚಿ ಬಿದ್ದ ದೆಹಲಿ;ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆ ಮೇಲೆ ರೇಪ್!
- ದೆಹಲಿಯಲ್ಲಿ ಮತ್ತೊಂದು ಅತ್ಯಾಚಾರ ಪ್ರಕರಣ
- ನಿರ್ಭಯ ರೀತಿ ಚಲಿಸುತ್ತಿದ್ದ ವಾಹನದಲ್ಲಿ ರೇಪ್
- ಇಬ್ಬರ ಬಂಧಿಸಿದ ಪೊಲೀಸ್, ಗಂಭೀರ ಸ್ವರೂಪ ಪಡೆದ ಪ್ರಕರಣ
ದೆಹಲಿ(ಆ.19): ನಿರ್ಭಯ ಪ್ರಕರಣ ಭಾರತವನ್ನು ಅದೆಷ್ಟರ ಮಟ್ಟಿಗೆ ಕಂಗೆಡಿಸಿತ್ತು ಅನ್ನೋದು ಎಲ್ಲರಿಗೂ ತಿಳಿದಿದೆ. ಇದೀಗ ಇಂತದ್ದೆ ಮತ್ತೊಂದು ಪ್ರಕರಣ ದೆಹಲಿಯಲ್ಲಿ ನಡೆದಿದೆ. ದೆಹಲಿಯ ಶಾಸ್ತ್ರಿ ಪಾರ್ಕ್ ಬಳಿ ಚಲಿಸುತ್ತಿದ್ದ ಕಾರಿನನಲ್ಲಿ 35 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸೆಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಬಾಲಕಿಯ ನಂಬಿಸಿ ಗಂಡನ ಬಳಿ ಕರೆದುಕೊಂಡು ಹೋಗಿ ಬಿಟ್ಟಳು!
ಮಹಿಳೆ ಹಾಗೂ ಬಂಧಿತ ಇಬ್ಬರು ಉತ್ತರ ಪ್ರದೇಶದ ಸೂರಜ್‌ಪುರ ಮೂಲದವರಾಗಿದ್ದಾರೆ. ಕೊರೋನಾ ಕಾರಣ ಕೆಲಸವಿಲ್ಲದೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ಮಹಿಳೆಯನ್ನು ಕೆಲಸ ಕೊಡಿಸುವುದಾಗಿ ಸೂರಜ್‌ಪುರಿಂದ ದೆಹಲಿಗೆ ಕರೆತಂದಿದ್ದರು. ಆದರೆ ದೆಹಲಿಯ ಶಾಸ್ತ್ರಿ ಪಾರ್ಕ್ ಬಳಿ ಚಲಿಸುತ್ತಿದ್ದ ಕಾರಿನಲ್ಲೇ ಮಹಿಳೆ ಮೇಲೆ ಅತ್ಯಾಚಾರ ಎಸಗಲಾಗಿದೆ.
ಮದ್ವೆಗೂ ಮುನ್ನ ದೈಹಿಕ ಸಂಬಂಧ ಬಯಸುವವರು ಪರಿಣಾಮ ಎದುರಿಸಲು ಸಿದ್ಧರಿರಬೇಕು; ಹೈಕೋರ್ಟ್!
ಆಗಸ್ಟ್ 16 ರಂದು ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದಲ್ಲಿ ಅದೇ ದಿನ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಮಹಿಳೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ದೂರಿನಲ್ಲಿ ಮಹಿಳೆ ಕಾರಿನ ನಂಬರ್ ದಾಖಲಿಸಿದ್ದರು. ಹೀಗಾಗಿ ಪೊಲೀಸರು ಸುಲಭವಾಗಿ ಕಾರು ಟ್ರೇಸ್ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರಿಬ್ಬರನ್ನು ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ. ಇದೀಗ ಪ್ರಕರಣದ ತನಿಖೆ ನಡೆಯುತ್ತಿದೆ. ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ(376ಡಿ) ಹಾಗೂ ಸಕ್ಷನ್ 506ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.