ಹೈದರಾಬಾದ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್‌ನಲ್ಲಿ ಯುವತಿಗೆ ಕಂಡಕ್ಟರ್ ಮತ್ತು ಚಾಲಕ ಲೈಂಗಿಕ ಕಿರುಕುಳ ನೀಡಿದ್ದಾರೆ. ಯುವತಿಯ ಕುಟುಂಬಸ್ಥರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಬೆಂಗಳೂರು(ಸೆ.11): ಹೈದರಾಬಾದ್‌ನಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳಿಗೆ ಟ್ರಾನ್ಸ್ ಇಂಡಿಯಾ ಖಾಸಗಿ ಸ್ಲೀಪರ್ ಬಸ್‌ನಲ್ಲಿ ಲೈಂಗಿಕ ಕಿರುಕುಳವೆಸಗಿದ ಘಟನೆ ನಿನ್ನೆ ರಾತ್ರಿ ನಡೆದಿದೆ. ಆರೋಪಿಗಳಾದ ಬಸ್ ಕಂಡಕ್ಟರ್ ಆರೀಫ್ ಮತ್ತು ಡ್ರೈವರ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಿಸ್ ಕೊಟ್ರೆ ಮೊಬೈಲ್ ವಾಪಸ್:
ನಿನ್ನೆ ರಾತ್ರಿ ಹೈದರಾಬಾದ್‌ನಿಂದ ಬೆಂಗಳೂರಿಗೆ ಸ್ಲೀಪರ್ ಬಸ್ ನಲ್ಲಿ ಪ್ರಯಾಣ ಮಾಡುತ್ತಿದ್ದ ಯುವತಿ.ರಾತ್ರಿಯ ಯುವತಿಯ ಮೊಬೈಲ್ ಕಸಿದುಕೊಂಡು ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. 'ಕಿಸ್ ಕೊಟ್ರೆ ಮೊಬೈಲ್ ವಾಪಸ್ ಕೊಡ್ತೇವೆ' ಎಂದು ಕಿರುಕುಳ ನೀಡಿರುವ ಕಾಮುಕರು. ಯುವತಿಯ ಮೊಬೈಲ್ ಫೋನ್‌ನನ್ನು ಕಂಡಕ್ಟರ್ ಆರೀಫ್ ಎಂಬುವವನು ಕಸಿದುಕೊಂಡು ಕಿಸ್ ಕೊಡುವಂತೆ ಯುವತಿಗೆ ಒತ್ತಾಯಿಸಿ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿರುವ ಯುವತಿ. ಈ ವೇಳೆ ಡ್ರೈವರ್ ಕೂಡ ಈ ಕೃತ್ಯದಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಘಟನೆಯಿಂದ ಆಘಾತಗೊಂಡ ಯುವತಿ, ಮೊಬೈಲ್ ವಾಪಸ್ ಪಡೆದ ಬಳಿಕ ತನ್ನ ಕುಟುಂಬಸ್ಥರಿಗೆ ಫೋನ್ ಮೂಲಕ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ವಿಜಯಪುರದಲ್ಲಿ5 ವರ್ಷದ ಮಗಳ ಮೇಲೆ ತಂದೆಯಿಂದಲೇ ಲೈಂಗಿಕ ದೌರ್ಜನ್ಯ, ಶಿವಮೊಗ್ಗದಲ್ಲಿ ಮಗು ಹೆತ್ತ 15ರ ಬಾಲೆ!
ಕಾಮುಕರ ಬಟ್ಟೆ ಬಿಚ್ಚಿಸಿ ಥಳಿಸಿದ ಯುವತಿಯ ಪೋಷಕರು:
ಈ ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಕೋಪಗೊಂಡ ಯುವತಿಯ ಕುಟುಂಬಸ್ಥರು ಚಾಲುಕ್ಯ ಸರ್ಕಲ್ ಬಳಿ ಬಸ್ ಅಡ್ಡಗಟ್ಟಿ ನಿಲ್ಲಿಸಿದ್ದಾರೆ. ಬಳಿಕ ಆರೋಪಿಗಳಾದ ಕಂಡಕ್ಟರ್ ಮತ್ತು ಡ್ರೈವರ್‌ಗಳನ್ನ ಹೊರಗೆಳೆದು ಬಟ್ಟೆ ಬಿಚ್ಚಿ ಥಳಿಸಿದ್ದಾರೆ. ಬಳಿಕ ಇಬ್ಬರನ್ನೂ ವಿಧಾನ ಸೌಧ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ.
ಆರೋಪಿಗಳನ್ನ ವಶಕ್ಕೆ ಪಡೆದ ವಿಧಾನಸೌಧ ಠಾಣೆ ಪೊಲೀಸರು:
ಪೊಲೀಸರು ಆರೀಫ್ ಮತ್ತು ಡ್ರೈವರ್‌ನನ್ನು ವಶಕ್ಕೆ ಪಡೆದು ವಿಧಾನಸೌಧ ಠಾಣೆಗೆ ಕರೆದೊಯ್ದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಈ ಘಟನೆಯು ಖಾಸಗಿ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆಯ ಕುರಿತು ಗಂಭೀರ ಪ್ರಶ್ನೆಗಳನ್ನು ಎತ್ತಿದೆ.
