ಕೋಲಾರ(ಸೆ. 10)  ಮಗುವನ್ನು ಕೊಂದು ತಾಯಿ ನೇಣಿಗೆ ಶರಣಾಗಿದ್ದಾಳೆ. ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ಬಾಲಮುರಗನ್ ದೇವಸ್ಥಾನದ ಬಳಿ ಹೃದಯವಿದ್ರಾವಕ ಘಟನೆ ನಡೆದಿದೆ.

ತಾಯಿ ಸಾಯಿ ಸಿಂಧು (35), ತನ್ನ 5 ವರ್ಷದ ಮಗಳು ಕಿರಣಶ್ರೀ ಕೊಂದು ನೇಣಿಗೆ ಶರಣಾಗಿದ್ದಾಳೆ. ಬಾಲಮುರಗನ್ ದೇವಸ್ಥಾನದ ಅರ್ಚಕ ಸರವಣ ಅವರ  ಪತ್ನಿ ಹಾಗೂ ಮಗಳು ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಾರೆ.

ಪಬ್‌ಜಿ ಬ್ಯಾನ್‌ಗೆ 3 ದಿನ ಮುನ್ನ ಆತ್ಮಹತ್ಯೆ ಮಾಡಿಕೊಂಡ ಹಾವೇರಿ ಹುಡುಗ!

ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗಳನ್ನ ಕೊಂದು ನೇಣಿಗೆ ಹಾಕಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.  ಬಂಗಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.