ಗಂಗಾವತಿ(ಜೂ.07): ನಗರದ ಕೋವಿಡ್‌ ಆಸ್ಪತ್ರೆಯಲ್ಲಿ ಸೋಂಕಿತ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಗ್ಗೆ ನಡೆದಿದೆ. ರೋಹಿಣಿ ಸಂಗಮೇಶ್ವರಯ್ಯ (48) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.

ಗದಗ ನಗರದ ರೋಹಿಣಿ ಅವರಿಗೆ 2ನೇ ಬಾರಿಗೆ ಕೊರೋನಾ ಸೋಂಕು ತಗಲಿತ್ತು. ಜತೆಗೆ ಪತಿ, ಮಗನಿಗೂ ಸೋಂಕು ತಗುಲಿತ್ತು. ಆನೆಗೊಂದಿ ರಸ್ತೆಯ ಮಾರ್ಗದಲ್ಲಿರುವ ಎಂಸಿಎಚ್‌ ಆಸ್ಪತ್ರೆಯಲ್ಲಿ ಮೂವರು ದಾಖಲಾಗಿದ್ದರು. 

ಹುಲಿಗೆಮ್ಮ ದೇವಿ ಜಾತ್ರೆ: ಕೊಪ್ಪಳ ಜಿಲ್ಲಾಡಳಿತದಿಂದಲೇ ಕೋವಿಡ್‌ ನಿಯಮ ಉಲ್ಲಂಘನೆ?

ಪತಿ, ಮಗ ಗುಣಮುಖರಾಗಿ ಶನಿವಾರ ಬಿಡುಗಡೆಯಾಗಿದ್ದರು. ಈ ಮಹಿಳೆ ಸಹ ಗುಣಮುಖರಾಗಿದ್ದು, ಸೋಮವಾರ ಬಿಡುಗಡೆಯಾಗಬೇಕಿತ್ತು. ಆದರೂ ಮನನೊಂದು ಆಸ್ಪತ್ರೆಯ ಕಿಟಕಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona