* ಕೊರೋನಾಗೆ ಅಂಜಿ ಮಹಿಳೆ ಆತ್ಮಹತ್ಯೆ* ಗದಗ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದ ಘಟನೆ* ಕಳೆದ ಹದಿನೈದು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ

ಗದಗ(ಮೇ.23): ಮಹಾಮಾರಿ ಕೊರೋನಾ ವೈರಸ್‌ಗೆ ಹೆದರಿದ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು(ಭಾನುವಾರ) ಗದಗ ತಾಲೂಕಿನ ಕದಡಿ ಗ್ರಾಮದಲ್ಲಿ ನಡೆದಿದೆ. ಸುಮಾರು 45 ವರ್ಷದ ಮಹಿಳೆ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ಮಹಿಳೆಯ ಹೆಸರು ತಿಳಿದು ಬಂದಿಲ್ಲ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದ ಹದಿನೈದು ದಿನಗಳಿಂದ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಕೊರೋನಾ ಟೆಸ್ಟ್ ಮಾಡಿಸುವಂತ‌ ಸಲಹೆ ನೀಡಲಾಗಿತ್ತು ಎಂದು ಹೇಳಲಾಗುತ್ತಿದೆ. 

"

ಮೈಸೂರು : ಆತ್ಮಹತ್ಯೆಗೆ ಶರಣಾದ ಕೋವಿಡ್ ಸೆಂಟರ್ ಸ್ಟಾಫ್ ನರ್ಸ್

ಹೀಗಾಗಿ ಕೊರೋನಾ ಬಂದಿರಬಹುದೆಂದು ಹೆದರಿದ ಮಹಿಳೆ ಗ್ರಾಮ ಹೊರವಲಯದ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಗದಗ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ನ್ಯೂಸ್‌ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona