ಮಹಿಳಾ ಪೊಲೀಸ್ ಪೇದೆ ಬಾವಿಯಲ್ಲಿ ಶವವಾಗಿ ಪತ್ತೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಸುಂಬಡ ಗ್ರಾಮದಲ್ಲಿ ಘಟನೆ/ ಸುರೇಖಾ, 34 ಶವವಾಗಿ ಪತ್ತೆಯಾದ ಮಹಿಳಾ ಪೇದೆ/ ಜೇವರ್ಗಿ ತಾಲೂಕಿನ ಯಡ್ರಾಮಿ ಪೊಲೀಸ್ ಸ್ಟೇಷನಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದರು.

ಕಲಬುರಗಿ(ಆ. 30) ಜಿಲ್ಲೆಯ ಯಡ್ರಾಮಿ ತಾಲೂಕಿನ ಸುಂಬಡ ಗ್ರಾಮದಲ್ಲಿ ಮಹಿಳಾ ಪೊಲೀಸ್ ಪೇದೆ ಶವ ಬಾವಿಯಲ್ಲಿ ಪತ್ತೆಯಾಗಿದೆ. ಸುರೇಖಾ, 34 ಶವವಾಗಿ ಪತ್ತೆಯಾದ ಮಹಿಳಾ ಪೇದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಜೇವರ್ಗಿ ತಾಲೂಕಿನ ಯಡ್ರಾಮಿ ಪೊಲೀಸ್ ಸ್ಟೇಷನಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆ ನಿಗೂಢ ಸಾವಿಗೆ ಗುರಿಯಾಗಿದ್ದಾರೆ. ಎರಡು ತಿಂಗಳ ಹಿಂದೆ ಈಕೆಯ ಪತಿ ಆತ್ಮಹತ್ಯೆಗೆ ಶರಣಾಗಿದ್ದ. ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ವೀಟ್ ವಾಯ್ಸ್ ಕೇಳಿ ವಿಡಿಯೋ ಕಾಲ್‌ನಲ್ಲಿ ಬೆತ್ತಲಾದವನ ಕತೆ ಏನಾಯ್ತು?

ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ತನಿಖೆ ನಡೆಯುತ್ತಿದ್ದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದ್ದು ವರದಿ ಬಂದ ನಂತರ ಒಂದು ಚಿತ್ರಣ ಸಿಗಲಿದೆ.