ಆಟೋದಲ್ಲಿ ಮೂವರು ವ್ಯಕ್ತಿಗಳು ಡ್ರಮ್‌ ತಂದು ಬೈಯಪ್ಪನಹಳ್ಳಿ ರೈಲು ನಿಲ್ದಾಣದ ದ್ವಾರದ ಬಳಿ ಇರಿಸಿ ಪರಾರಿಯಾಗಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಹಿಳೆಯ ಮರಣೋತ್ತರ ಪರೀಕ್ಷೆ ಮುಗಿದಿದ್ದು, ವರದಿ ಶೀಘ್ರದಲ್ಲೇ ಕೈಸೇರಲಿದೆ. ಕೊಲೆಯಾದ ಮಹಿಳೆ ಚಹರೆ ಪತ್ತೆಯಾಗಿಲ್ಲ. 

ಬೆಂಗಳೂರು(ಮಾ.15): ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಡ್ರಮ್‌ನಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ ಪ್ರಕರಣ ಬೇಧಿಸಲು ಪೊಲೀಸರ ಮೂರು ವಿಶೇಷ ತಂಡಗಳನ್ನು ರಚಿಸಲಾಗಿದೆ.

ಸೋಮವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಆಟೋದಲ್ಲಿ ಮೂವರು ವ್ಯಕ್ತಿಗಳು ಡ್ರಮ್‌ ತಂದು ಬೈಯಪ್ಪನಹಳ್ಳಿ ರೈಲು ನಿಲ್ದಾಣದ ದ್ವಾರದ ಬಳಿ ಇರಿಸಿ ಪರಾರಿಯಾಗಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಮಹಿಳೆಯ ಮರಣೋತ್ತರ ಪರೀಕ್ಷೆ ಮುಗಿದಿದ್ದು, ವರದಿ ಶೀಘ್ರದಲ್ಲೇ ಕೈಸೇರಲಿದೆ. ಕೊಲೆಯಾದ ಮಹಿಳೆ ಚಹರೆ ಪತ್ತೆಯಾಗಿಲ್ಲ. ಮಹಿಳೆಗೆ 30 ರಿಂದ 35 ವರ್ಷ ವಯಸ್ಸಾಗಿರಬಹುದು. ದುಷ್ಕರ್ಮಿಗಳ ಪತ್ತೆಗೆ ಪೊಲೀಸರ ಮೂರು ವಿಶೇಷ ತಂಡ ರಚಿಸಿದ್ದು, ಈಗಾಗಲೇ ತಂಡಗಳು ಪತ್ತೆ ಕಾರ್ಯದಲ್ಲಿ ಸಕ್ರಿಯವಾಗಿವೆ ಎಂದು ರೈಲ್ವೆ ವಿಭಾಗದ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಗಗನಸಖಿ ಸಾವು ಆತ್ಮಹತ್ಯೆಯಲ್ಲ, ಅಪಾರ್ಟ್‌ಮೆಂಟ್‌ನಿಂದ ನೂಕಿ ಕೊಂದ ಪ್ರಿಯಕರ

ಜ.4ರಂದು ಯಶವಂತಪುರ ರೈಲು ನಿಲ್ದಾಣದಲ್ಲಿ ಸಹ ಡ್ರಮ್‌ನಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿತ್ತು. ಆದರೆ, ಈವರೆಗೂ ಕೊಲೆಯಾದ ಮಹಿಳೆ ಹಾಗೂ ದುಷ್ಕರ್ಮಿಗಳ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಇದೀಗ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಡ್ರಮ್‌ನಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ. ಈ ಎರಡೂ ಪ್ರಕರಣಗಳಿಗೆ ಯಾವುದೇ ಸಾಮ್ಯತೆ ಇಲ್ಲ. ಬೇರೆ ಬೇರೆ ಗ್ಯಾಂಗ್‌ಗಳು ಹತ್ಯೆ ಮಾಡಿರುವ ಸಾಧ್ಯತೆಯಿದೆ. ದುಷ್ಕರ್ಮಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿದ್ದು, ಶೀಘ್ರದಲ್ಲೇ ಬಂಧಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.