Bengaluru Crime: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ: ಪೊಲೀಸ್‌ ಠಾಣೆ ಶವವಿಟ್ಟು ಪ್ರತಿಭಟನೆ

ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದು, ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಮೃತ ಮಹಿಳೆಯ ಕುಟುಂಬ ಸದಸ್ಯರು ಶೇಷಾದ್ರಿಪುರ ಪೊಲೀಸ್‌ ಠಾಣೆ ಮುಂದೆ ಶವವನ್ನಿಟ್ಟು ಪ್ರತಿಭಟನೆ ಆರಂಭಿಸಿದ್ದಾರೆ. 

Woman death of Dowry Harassment Relatives Protest Against Police Station sat

ಬೆಂಗಳೂರು (ಫೆ.25): ಬೆಂಗಳೂರಿನ ಮೆಜೆಸ್ಟಿಕ್ ಬಳಿಯ ಲಕ್ಷ್ಮಣ್ ಪುರಿಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆರೋಪಿಗಳನ್ನು ಬಂಧಿಸುವಂತೆ ಪಟ್ಟು ಹಿಡಿದು ಶೇಷಾದ್ರಿಪುರ ಪೊಲೀಸ್‌ ಠಾಣೆಯ ಮುಂದೆ ಶವವನ್ನು ಇಟ್ಟು ಮೃತ ಮಹಿಳೆ ಕುಟುಂಬ ಸದಸ್ಯರು ಪ್ರತಿಭಟನೆ ಆರಂಭಿಸಿದ್ದಾರೆ.

ಬೆಂಗಳೂರಿನ ವಿಧಾನಸೌಧದಿಂದ ಅನತಿ ದೂರದಲ್ಲಿರುವ ಮೆಜೆಸ್ಟಿಕ್ ಬಳಿಯ ಲಕ್ಷ್ಮಣ್ ಪುರಿಯಲ್ಲಿ ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇನ್ನು ಮೃತ ಮಹಿಳೆಯನ್ನು ಸೌಂದರ್ಯ ಎಂದು ಗುರುತಿಸಲಾಗಿದೆ. ನಿನ್ನೆ ಮಧ್ಯಾಹ್ನ 3 ಗಂಟೆಗೆ ಆತ್ಮಹತ್ಯೆ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಗಂಡ ವಿಘ್ನೇಶ್, ಅತ್ತೆ ಇರ್ಚಮ್ಮ, ಸಂಬಂಧಿಕರಾದ ಯಳಿಲ್, ವಿಮಲಾ, ರೇವತಿ, ಶಿವು ಎಂಬುವರಿಂದ ವರದಕ್ಷಿಣೆಗಾಗಿ ಕಿರುಕುಳ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ವರದಕ್ಷಿಣೆಯಾಗಿ ವಧುವಿನ ಪೋಷಕರು ಕೊಟ್ಟ ಬೀರು ಕಳಪೆ, ಮಂಟಪದಲ್ಲೇ ಮದುವೆ ಕ್ಯಾನ್ಸಲ್ ಮಾಡಿದ ವರ!

ದೇಶದ ಸಾಮಾಜಿಕ ಪಿಡುಗು ಆಗಿರುವ ವರದಕ್ಷಿಣೆ ನಿಷೇಧ ಕಾಯ್ದೆ ಜಾರಿಗೊಂದು 50 ವರ್ಷಗಳು ಕಳೆದರೂ ನಿರಂತರವಾಗಿ ವರದಕ್ಷಿಣೆ ಕಿರುಕುಳಕ್ಕೆ ಮಹಿಳೆಯರ ಹತ್ಯೆಗಳು ನಡೆಯುತ್ತಿವೆ. ಇನ್ನು ಕಾನೂನುಗಳನ್ನು ಜಾರಿಗೆ ತರುವ ವಿಧಾನಸೌಧದ ಪಕ್ಕದಲ್ಲಿಯೇ ಮಹಿಳೆಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಮರ್ಪಕವಾಗಿ ಕಾನೂನು ಜಾರೊಗೊಳಿಸುವಲ್ಲಿ ಸರ್ಕಾರ ವಿಫಲವಾಗಿದ್ದರಿಂದಲೇ ಈ ಘಟನೆ ನಡೆದಿದೆ ಎಂದು ಮೃತ ಮಹಿಳೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Woman death of Dowry Harassment Relatives Protest Against Police Station sat

ನಾಲ್ಕು ವರ್ಷಗಳಿಂದ ಮಕ್ಕಳಿಲ್ಲ: ಕಳೆದ ನಾಲ್ಕು ವರ್ಷದ ಹಿಂದೆ ವಿವಾಹವಾಗಿದ್ದ ಸೌಂದರ್ಯಳನ್ನು ವಿಘ್ನೇಶ್ ಮದುವೆಯಾಗಿದ್ದರು. ಆದರೆ, ಮದುವೆಯಾಗಿ ನಾಲ್ಕು ವರ್ಷವಾದರೂ ದಂಪತಿಗೆ ಮಕ್ಕಳಾಗಿರಲಿಲ್ಲ. ಆದ್ದರಿಂದ ಕುಟುಂಬ ಸದಸ್ಯರು ತಮ್ಮ ಮಗನಿಗೆ ಬೇರೊಂದು ಮದುವೆ ಮಾಡಲು ಮುಂದಾಗಿದ್ದರು. ಇದಕ್ಕೆ ಒಪ್ಪದ ಸೌಂದರ್ಯಗೆ ಕುಟುಂಬಸ್ಥರು ಆಗಿಂದಾಗ್ಗೆ ವರದಕ್ಷಿಣೆ ಕೊಡುವಂತೆ ಕಿರುಕುಳ ನೀಡುತ್ತಿದ್ದರು. ಜೊತೆಗೆ, ಮಕ್ಕಳಾಗದಿರುವ ಮತ್ತು ವರದಕ್ಷಿಣೆ ವಿಚಾರಕ್ಕೆ ಆಗಾಗ ದಂಪತಿ ಮತ್ತು ಕುಟುಂಬದಲ್ಲಿ ಗಲಾಟೆ ನಡೆಯುತ್ತಿತ್ತು. ನಿನ್ನೆ ಕೂಡ ಅದೇ ರೀತಿ ಗಲಾಟೆಯಾಗಿದೆ. ಕುಟುಂಬಸ್ಥರೆಲ್ಲ ಸೇರಿ ಸೌಂದರ್ಯಗೆ ಥಳಿಸಿದ್ದಾರೆ ಎಂದು ಮೃತ ಮಹಿಳೆ ಕುಟುಂಬ ಸದಸ್ಯರು ಆರೋಪ ಮಾಡಿದ್ದಾರೆ. 

ಆಂಧ್ರದಲ್ಲಿ 'ಮರ್ಯಾದೆಗೇಡು ಹತ್ಯೆ', ಮಗಳ ರುಂಡ-ಮುಂಡ ಬೇರ್ಪಡಿಸಿದ ತಂದೆ!

ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ: ಈ ಘಟನೆ ಸಂಬಂಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಆಗಿದೆ. ಆರೋಪಿಗಳನ್ನು ಬಂಧಿಸಲೇಬೇಕು, ಇಲ್ಲ ಮೃತದೇಹ ತೆಗೆದುಕೊಳ್ಳುವುದಿಲ್ಲ ಎಂದು ಪಟ್ಟು ಹಿಡಿದು ಸ್ಥಳೀಯ ನಿವಾಸಿಗಳು ಹಾಗೂ ಮೃತ ಮಹಿಳೆ ಸಂಬಂಧಿಕರು ಪೊಲೀಸ್‌ ಠಾಣೆಯ ಮುಂದೆ ಪ್ರತಿಭಟನೆ ಆರಂಭಿಸಿದ್ದರು. ಆದರೆ, ಮಧ್ಯಾಹ್ನದ ವೇಳೆಗೆ ಆಸ್ಪತ್ರೆಯಿಂದ ಮೃತ ಮಹಿಳೆಯ ಶವವನ್ನು ತಂದು ಶೇಷಾದ್ರಿಪುರಂ ಪೊಲೀಸ್ ಠಾಣೆ ಮುಂದಿಟ್ಟು ಪ್ರತಿಭಟನೆ ಮುಂದುವರೆಸಿದ್ದಾರೆ. ಕೂಡಲೇ ಆರೋಪಿಗಳನ್ನ ಬಂಧಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಪೊಲೀಸ್‌ ಠಾಣೆಯ ಮುಂದೆ ಮಹಿಳೆ ಮೃತದೇಹ ಇಟ್ಟು ಪ್ರತಿಭಟನೆ ಮಾಡಲಾಗುತ್ತಿದ್ದು, ಆರೋಪಿಗಳನ್ನು ಬಂಧಿಸೋವರೆಗೂ ಮೃತದೇಹವನ್ನು ಕೊಂಡೊಯ್ಯುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದು ಕುಳಿತಿದ್ದಾರೆ. 

Latest Videos
Follow Us:
Download App:
  • android
  • ios