ವೈದ್ಯಾಧಿಕಾರಿ ನಿರ್ಲಕ್ಷ್ಯ ದಿಂದ ಹೆರಿಗೆ ಬಳಿಕ ತೀವ್ರ ರಕ್ತಸ್ರಾವದಿಂದ ಮಹಿಳೆ ಸಾವು!

ವೈದ್ಯಾಧಿಕಾರಿ ನಿರ್ಲಕ್ಷ್ಯದಿಂದ ಹೆರಿಗೆ ಮಹಿಳೆ ಸಿಜೆರಿನ್ ಮಾಡಿ ಕೆಲವೇ ಹೊತ್ತಿನಲ್ಲಿ ತೀವ್ರ ರಕ್ತಸ್ರಾವದಿಂದ ದುರ್ಮರಣಕ್ಕೀಡಾದ ಘಟನೆ ಬಳ್ಳಾರಿ ತಾಲೂಕಿನ ಮೋಕಾ ಗ್ರಾಮದಲ್ಲಿ ನಡೆದಿದೆ.

Woman dies after delivery due to doctors negligence in moka village at ballari rav

ಬಳ್ಳಾರಿ (ಮಾ.7): ವೈದ್ಯಾಧಿಕಾರಿ ನಿರ್ಲಕ್ಷ್ಯದಿಂದ ಹೆರಿಗೆ ಮಹಿಳೆ ಸಿಜೆರಿನ್ ಮಾಡಿ ಕೆಲವೇ ಹೊತ್ತಿನಲ್ಲಿ ತೀವ್ರ ರಕ್ತಸ್ರಾವದಿಂದ ದುರ್ಮರಣಕ್ಕೀಡಾದ ಘಟನೆ ಬಳ್ಳಾರಿ ತಾಲೂಕಿನ ಮೋಕಾ ಗ್ರಾಮದಲ್ಲಿ ನಡೆದಿದೆ.

ಭಾಗ್ಯ (24) ಮೃತಪಟ್ಟ ದುರ್ದೈವಿ. ಮೋಕಾ ಗ್ರಾಮದವರಾದ ಮಹಿಳೆ ಹೆರಿಗೆಗೆ ಅದೇ ಗ್ರಾಮದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಮಧ್ಯಾಹ್ನ ಆಸ್ಪತ್ರೆಯಲ್ಲಿ ಸಿಜರಿನ್ ಮಾಡಿದ್ದ ವೈದ್ಯಾಧಿಕಾರಿ ಡಾ. ಪರಿಮಳ. ಗಂಡುಮಗುವಿಗೆ ಜನ್ಮ ನೀಡಿದ್ದ ಮೃತ ಮಹಿಳೆ ಭಾಗ್ಯ. ಆದರೆ ಸಿಜೇರಿಯನ್ ಮಾಡಿ ಕೆಲವೇ ಹೊತ್ತಿನಲ್ಲಿ ಆಸ್ಪತ್ರೆಯಲ್ಲಿರದೇ ಬಳ್ಳಾರಿಯ ತಮ್ಮ ನಿವಾಸಕ್ಕೆ ತೆರಳಿದ್ದ ವೈದ್ಯೆ ಪರಿಮಳ. ಈ ವೇಳೆ ಮಹಿಳೆಗೆ ತೀವ್ರ ರಕ್ತಸ್ರಾವವಾಗಿ ಆರೋಗ್ಯದಲ್ಲಿ ಏರುಪೇರಾಗಿದೆ. ಆ ಕ್ಷಣಕ್ಕೆ ವೈದ್ಯೆ ನಿರ್ಲಕ್ಷ್ಯ ಬೇಜವಾಬ್ದಾರಿತನದಿಂದ ಬಳ್ಳಾರಿಯ ನಿವಾಸಕ್ಕೆ ತೆರಳಿದ್ದಾರೆ. ಹೀಗಾಗಿ ಮಹಿಳೆಗೆ ತಕ್ಷಣಕ್ಕೆ ಚಿಕಿತ್ಸೆ ಸಿಕ್ಕಿಲ್ಲ. ಅಲ್ಲಿ ಆಂಬುಲೆನ್ಸ್ ಮೂಲಕ ಬಳ್ಳಾರಿ ವಿಮ್ಸ್ ಗೆ ಕರೆತರಲು ಕುಟುಂಬಸ್ಥರು ಯತ್ನಿಸಿದ್ದಾರೆ. ಆದರೆ ವಿಮ್ಸ್‌ಗೆ ಬರುತ್ತಿದ್ದಂತೆ ಕೊನೆಯುಸಿರು ಎಳೆದಿರುವ ಮಹಿಳೆ.

ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಅವಳಿ ಮಕ್ಕಳು ಸಾವು ಆರೋಪ; ಆಸ್ಪತ್ರೆ ಎದುರು ಕುಟುಂಬಸ್ಥರು ಪ್ರತಿಭಟನೆ

ವೈದ್ಯ ಪರಿಮಳ ನಿರ್ಲಕ್ಷ್ಯದಿಂದಲೇ ಭಾಗ್ಯ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ತೀವ್ರ ರಕ್ತಸ್ರಾವ ಆಗುತ್ತಿದ್ದರು ಸರಿಯಾಗಿ ಚಿಕಿತ್ಸೆ ನೀಡದೆ ವೈದ್ಯೆ ಮನೆಗೆ ತೆರಳಿದ್ದರು ಎಂದು ಆರೋಪಿಸಿದ್ದಾರೆ. 

ವಿಮ್ಸ್ ಆಸ್ಪತ್ರೆ ಮುಂದೆ ಭಾಗ್ಯ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತು. ಡಾ ಪರಿಮಳ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಪೊಲೀಸರ ಮಧ್ಯಸ್ಥಿಕೆವಹಿಸಿ ಮೃತ‌ ಮಹಿಳೆಯನ್ನ ಗ್ರಾಮಕ್ಕೆ ತೆಗೆದುಕೊಂಡು‌ ಹೋಗುವಂತೆ ಮನವಿ ಮಾಡಿದರು.

 

ಮಲ್ಲೇಶ್ವರಂ ಕೆಸಿ ಜನರಲ್ ಆಸ್ಪತ್ರೆ ಎಡವಟ್ಟು; ಜಗತ್ತಿಗೆ ಬರುವ ಮುಂಚೆಯೇ ಕಣ್ಣು ಮುಚ್ಚಿದ ಕಂದಮ್ಮ!

Latest Videos
Follow Us:
Download App:
  • android
  • ios