ತ್ರಿಪಲ್ ತಲಾಖ್ ಕೊಟ್ಟು ತಮ್ಮನೊಂದಿಗೆ ಮದುವೆಯಾಗು ಎಂದ ಪತಿ: ಇಬ್ಬರಿಂದಲೂ ಸಾಮೂಹಿಕ ಅತ್ಯಾಚಾರ

Crime News: ತ್ರಿಪಲ್‌ ತಲಾಖ್‌ ನೀಡಿದ ಬಳಿಕ ಪತಿ ಹಾಗೂ ಪತಿಯ ಸಹೋದರ ತನ್ನ ಮೇಲೆ ನಿರಂತರ ಅತ್ಯಾಚಾರವೆಸಗಿದ್ದಾರೆ ಎಂದು ಉತ್ತರಪ್ರದೇಶದ ಮಹಿಳೆಯೊಬ್ಬರು ಆರೋಪಿಸಿದ್ದಾರೆ. 

Woman forced to marry husband brother after triple talaq gang raped by both in Uttar Pradesh mnj

ಉತ್ತರಪ್ರದೇಶ (ನ. 14): ತ್ರಿಪಲ್‌ ತಲಾಖ್‌ ನೀಡಿದ ಬಳಿಕ ಪತಿ ಹಾಗೂ ಪತಿಯ ಸಹೋದರ ತನ್ನ ಮೇಲೆ ನಿರಂತರ ಅತ್ಯಾಚಾರವೆಸಗಿದ್ದಾರೆ ಎಂದು ಉತ್ತರಪ್ರದೇಶದ ಮಹಿಳೆಯೊಬ್ಬರು ಆರೋಪಿಸಿದ್ದಾರೆ. ಈ ಸಂಬಂಧ ಮಹಿಳೆ ದೂರಿನೊಂದಿಗೆ ಸ್ಥಳೀಯ ನ್ಯಾಯಾಲಯಕ್ಕೆ ಹೋಗಿದ್ದು,  ನ್ಯಾಯಾಲಯದ ಆದೇಶದ ನಂತರ ಎಫ್‌ಐಆರ್ ದಾಖಲಿಸಲಾಗಿದೆ. ಇಸ್ಲಾಂನ ತ್ರಿಪಲ್‌ ತಲಾಖ್‌ ನಿಯಮದಂತೆ ಕೆಲವು ತಿಂಗಳ ಹಿಂದೆ ವಿಚ್ಛೇದನ ನೀಡಿರುವ ಪತಿ ತನ್ನ ಕಿರಿಯ ಸಹೋದರನನ್ನು ಮದುವೆಯಾಗುವಂತೆ ಒತ್ತಾಯಿಸಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ.  ತನ್ನ ಕಿರಿಯ ಸಹೋದರನನ್ನು ಮದುವೆಯಾಗಿ ವಿಚ್ಛೇದನ ನೀಡಿದರೆ ಮತ್ತೆ ಒಪ್ಪಿಕೊಳ್ಳುವುದಾಗಿ ಪತಿ ಭರವಸೆ ನೀಡಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾರೆ. 

ಈ ಕೃತ್ಯದಲ್ಲಿ ಧರ್ಮಗುರು ಸೇರಿದಂತೆ ಹಲವರು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಡ್ಡು ಹಾಜಿ ಎಂಬ ಧರ್ಮಗುರುವಿನ ಸಲಹೆಯ ಮೇರೆಗೆ ಪತಿ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಇನ್ನು ಕಿರಿಯ ಸಹೋದರ ಆಕೆಗೆ ವಿಚ್ಛೇದನ ನೀಡಲು ನಿರಾಕರಿಸಿದ್ದು,  ಸಹೋದರರಿಬ್ಬರೂ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರುತಿಳಿಸಿದ್ದಾರೆ.

ಪತಿ ಸಹೋದರನೊಂದಿಗೆ ಮದುವೆ: ಪತಿ ಸಲ್ಮಾನ್ ಭರವಸೆ ಮೇರೆಗೆ ಮಹಿಳೆ ಆತನ ಸಹೋದರ ಇಸ್ಲಾಂನನ್ನು ಮದುವೆಯಾಗಿದ್ದಳು, ಆದರೆ ಇಸ್ಲಾಂ ಆಕೆಗೆ ವಿಚ್ಛೇದನ ನೀಡಲು ನಿರಾಕರಿಸಿದ್ದ. ಅಂದಿನಿಂದ, ಸಲ್ಮಾನ್ ಮತ್ತು ಇಸ್ಲಾಂ ಇಬ್ಬರೂ ಹಲವಾರು ಸಂದರ್ಭಗಳಲ್ಲಿ ತನ್ನ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಇದನ್ನೂ ಓದಿ: ತೀವ್ರ ರಕ್ತಸ್ರಾವದಿಂದ ಮೃತಪಟ್ಟ ಅತ್ಯಾಚಾರಕ್ಕೊಳಗಾದ ಸಂತ್ರಸ್ಥೆ: ಎನರ್ಜಿ ಮಾತ್ರೆ ತೆಗೆದುಕೊಂಡಿದ್ದ ಆರೋಪಿ..!

ಪ್ರಕರಣಕ್ಕೆ ಸಂಬಂಧಿಸಿದಂತೆ  ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ದೂರಿನ ಆಧಾರದ ಮೇಲೆ ಗುಡ್ಡು ಹಾಜಿ, ಸಲ್ಮಾನ್, ಇಸ್ಲಾಂ ಮತ್ತು ಅವರ ಕುಟುಂಬದ ಮೂವರ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಅಸ್ವಾಭಾವಿಕ ಲೈಂಗಿಕತೆಯ ಸೆಕ್ಷನ್‌ಗಳ ಅನ್ವಯ ಮುಸ್ಲಿಂ ಮಹಿಳೆಯರ (ವಿವಾಹ ಹಕ್ಕುಗಳ ರಕ್ಷಣೆ) ಕಾಯಿದೆ, 2019 ರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಾಗಿದೆ.  ಮಹಿಳೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆಯ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿದೆ.

Latest Videos
Follow Us:
Download App:
  • android
  • ios