ರಾಮನಗರದಲ್ಲಿ ಆಶ್ರಯ ನೀಡುವುದಾಗಿ ಕರೆದೊಯ್ದು ಯುವತಿ ಮೇಲೆ ಅತ್ಯಾಚಾರ, ಬಲವಂತದ ಮದುವೆ
ಆಶ್ರಯ ನೀಡುವುದಾಗಿ ಕರೆದೊಯ್ದು ಯುವತಿ ಮೇಲೆ ಅತ್ಯಾಚಾರ ಹಾಗೂ ಬಲವಂತದ ಮದುವೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೀತಿ ಎಂಬ ಮಹಿಳೆಯನ್ನು ಬಂಧಿಸಿದ್ದು, ಮತ್ತಿಬ್ಬರಿಗಾಗಿ ಪೊಲೀಸರು ಬಲೆಬೀಸಿದ್ದಾರೆ.
ರಾಮನಗರ (ಅ.23): ಆಶ್ರಯ ನೀಡುವುದಾಗಿ ಕರೆದೊಯ್ದು ಯುವತಿ ಮೇಲೆ ಅತ್ಯಾಚಾರ ಹಾಗೂ ಬಲವಂತದ ಮದುವೆ ಮಾಡಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೀತಿ ಎಂಬ ಮಹಿಳೆಯನ್ನು ಬಂಧಿಸಿದ್ದು, ಮತ್ತಿಬ್ಬರಿಗಾಗಿ ಪೊಲೀಸರು ಬಲೆಬೀಸಿದ್ದಾರೆ. ರಾಮನಗರದ ಪ್ರೀತಿ ಎಂಬ ಮಹಿಳೆಗೆ ಸೇರಿದ ಅನಾಥಾಶ್ರಮದಲ್ಲಿ ಯುವತಿಯನ್ನು ಗೃಹಬಂಧನದಲ್ಲಿಟ್ಟು ನಿರಂತರ ಅತ್ಯಾಚಾರ ಮಾಡಲಾಗಿದೆ. ಬಲವಂತದ ಅತ್ಯಾಚಾರಕ್ಕೆ ಯುವತಿ ಗರ್ಭಿಣಿಯಾಗಿದ್ದು, ಘಟನೆ ಬಗ್ಗೆ ಹೇಳಿದ್ರೆ ತನ್ನ ಅಣ್ಣನನ್ನು ಕೊಲೆ ಮಾಡುವುದಾಗಿ ಹೆದರಿಸಿ ಗರ್ಭಪಾತ ಮಾಡಿಸಿದ್ದಾರೆ.
ಈ ಬಗ್ಗೆ ರಾಮನಗರ ಮಹಿಳಾ ಠಾಣೆಗೆ ನೊಂದ ಯುವತಿಯಿಂದ ದೂರು ದಾಖಲಾಗಿದೆ. ಇನ್ನು ಮನೆಯವರ ಜೊತೆಗೆ ಯುವತಿ ಜಗಳವಾಡಿಕೊಂಡು ಬಂದಿದ್ದು, ಬಸ್ ನಿಲ್ದಾಣದಲ್ಲಿದ್ದರು. ಈ ವೇಳೆ ಆಶ್ರಯ ಕೊಡುವುದಾಗಿ ಯುವತಿಯನ್ನು ಪ್ರೀತಿ ನಂಬಿಸಿ ಕರೆದುಕೊಂಡು ಹೋಗಿದ್ದರು. ಬಳಿಕ ಯುವತಿ ಮೇಲೆ ಯೋಗೇಶ್ ಎಂಬಾತನಿಂದ ಅತ್ಯಾಚಾರವಾಗಿದ್ದು, ಆತ ಮಾನಸಿಕ ಹಿಂಸೆಯನ್ನು ಕೊಟ್ಟಿದ್ದ. ಮಾತ್ರವಲ್ಲದೇ ಬಲವಂತವಾಗಿ ಮತ್ತೊಬ್ಬನ ಜೊತೆಗೆ ಪಾಪಿಗಳು ಮದುವೆ ಮಾಡಿಸಿದ್ದರು. ಸದ್ಯ ರಾಮನಗರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bengaluru: ಸಿಲಿಕಾನ್ ಸಿಟಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು
ವೃದ್ಧೆಯ ಮೇಲೆ ಅತ್ಯಾಚಾರ ಖಂಡಿಸಿ ಆಕ್ರೋಶ: ಅಥಣಿ ತಾಲೂಕಿನ ಬೇವನೂರ ಗ್ರಾಮದಲ್ಲಿ ವೃದ್ಧ ಮಹಿಳೆಯ ಮೇಲೆ ಯುವಕನೋರ್ವ ಅತ್ಯಾಚಾರವೆಸಗಿ ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದ್ದು, ಅತ್ಯಾಚಾರ ಎಸಗಿರುವ ಆರೋಪಿಗೆ ಗಲ್ಲುಶಿಕ್ಷೆ ವಿಧಿಸಬೇಕು. ಗ್ರಾಮದಲ್ಲಿ ಮಹಿಳೆಯರಿಗೆ ಮತ್ತು ಶಾಲಾ ವಿದ್ಯಾರ್ಥಿನಿಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿ ಗ್ರಾಮದ ನೂರಾರು ಮಹಿಳೆಯರು ಗುಂಡೇವಾಡಿ ಗ್ರಾಮದ ಜತ್ತ ಜಾಂಬೋಟಿ ರಾಜ್ಯಹೆದ್ದಾರಿ ತಡೆದು ಪ್ರತಿಭಟಿಸಿದರು. ಕಳೆದ ಬುಧವಾರ ರಾತ್ರಿ ಅಥಣಿ ತಾಲೂಕಿನ ಬೇವನೂರ ಗ್ರಾಮದಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ವೃದ್ಧ ಮಹಿಳೆಯ ಶವ ಹಲವು ಅನುಮಾನಗಳಿಗೆ ಎಡೆ ಮಾಡಿತ್ತು.
ಅಥಣಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ ಅದೇ ಗ್ರಾಮದ ದುಷ್ಕರ್ಮಿ ವೃದ್ಧೆಯ ಮೇಲೆ ಅತ್ಯಾಚಾರವೆಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸುತ್ತಿರುವಾಗಲೇ ಗ್ರಾಮದ ಮಹಿಳೆಯರು ಮತ್ತು ಗ್ರಾಮಸ್ಥರು ಆರೋಪಿಗೆ ಗಲ್ಲುಶಿಕ್ಷೆ ವಿಧಿಸುವುದರ ಜೊತೆಗೆ ಆತನನ್ನು ಗ್ರಾಮದಿಂದ ಗಡಿಪಾರು ಮಾಡಬೇಕು. ಗ್ರಾಮದಲ್ಲಿ ಒಂಟಿ ಮಹಿಳೆಯರು ಮತ್ತು ಒಬ್ಬಂಟಿಯಾಗಿ ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿನಿಯರಿಗೆ ಆತಂಕ ಎದುರಾಗಿದೆ. ಇಂತಹ ವಿಕೃತಕಾಮಿಗಳಿಂದ ಗ್ರಾಮದ ಮಹಿಳೆಯರಿಗೆ ಸೂಕ್ತ ರಕ್ಷಣೆ ಇಲ್ಲದಂತಾಗಿದೆ ಎಂದು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು ವಿ.ವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿ ಆ್ಯಕ್ಸಿಡೆಂಟ್ ಪ್ರಕರಣ: ಚಿಕ್ಸಿತೆ ಫಲಕಾರಿಯಾಗದೆ ಶಿಲ್ಪ ಸಾವು
ನೂರಾರು ಮಹಿಳೆಯರು ಮತ್ತು ಗ್ರಾಮಸ್ಥರು ಪ್ರತಿಭಟನೆಯ ಮೂಲಕ ಅಥಣಿ ತಹಸೀಲ್ದಾರ ಕಾರ್ಯಾಲಯಕ್ಕೆ ಮುತ್ತಿಗೆ ಹಾಕಲು ತೆರಳುತ್ತಿದ್ದ ಮಾಹಿತಿ ಪಡೆದ ಅಥಣಿ ಪೊಲೀಸ್ ಅಧಿಕಾರಿಗಳು, ಗುಂಡೇವಾಡಿ ಗ್ರಾಮಕ್ಕೆ ತೆರಳಿ ಪ್ರತಿಭಟನಾಕಾರರನ್ನು ತಡೆದು ತಿಳುವಳಿಕೆ ನೀಡಲು ಪ್ರಯತ್ನಿಸಿದಾಗ ಕೆಲಹೊತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಯಿತು. ಅಥಣಿ ಸಿಪಿಐ ರವೀಂದ್ರ ನಾಯ್ಕೋಡಿ ಪ್ರತಿಭಟನಾಕಾರರೊಂದಿಗೆ ಮಾತನಾಡಿ, ನಿಮ್ಮೆಲ್ಲರ ಭಾವನೆ ಅರ್ಥವಾಗುತ್ತದೆ. ಬೇವನೂರು ಗ್ರಾಮದಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಕೊಲೆಯಾಗಿರುವ ವೃದ್ಧೆಯ ಕುರಿತು ಮಾಹಿತಿ ಪಡೆದು ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ತನಿಖೆ ನಡೆಸಲಾಗುತ್ತಿದೆ. ಆತನ ವಿರುದ್ಧ ಕಾನೂನು ರೀತಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಗ್ರಾಮದ ಮಹಿಳೆಯರು ಮತ್ತು ಮಕ್ಕಳು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿ ಗ್ರಾಮಸ್ಥರಿಗೆ ಕೆಲವು ಸಲಹೆ ಸೂಚನೆಗಳನ್ನು ತಿಳಿಸಿದ ನಂತರ ಪ್ರತಿಭಟನೆಯನ್ನು ಹಿಂಪಡೆಯಲಾಯಿತು. ಈ ವೇಳೆ ಪಿಎಸ್‌ಐ ಶಿವಶಂಕರ ಮುಕರಿ ಹಾಗೂ ಸಿಬ್ಬಂದಿ ಉದ್ವಿಗ್ನ ಪರಿಸ್ಥಿತಿಯನ್ನು ತಿಳಿಗೊಳಿಸಿದರು.