ಕುಲರ್ಣಿಗೆ ಬಿಡುಗಡೆ ಭಾಗ್ಯವಿಲ್ಲ, ನ್ಯಾಯಾಂಗ ಬಂಧನ ವಿಸ್ತರಣೆ, ಎಲ್ಲಿವರೆಗೆ?

ಮಾಜಿ ಸಚಿವ ವಿನಯ ಕುಲಕರ್ಣಿ ನ್ಯಾಯಾಂಗ ಬಂಧನ ವಿಸ್ತರಣೆ/ ಧಾರವಾಡದ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ/  ಡಿ.7 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶ/ ವಿಡಿಯೋ‌ ಕಾನ್ಪರೆನ್ಸ್ ಮೂಲಕ ಬೆಳಗಾವಿ ಹಿಂಡಲಗಾ ಜೈಲಿನಲ್ಲಿರುವ ಕುಲಕರ್ಣಿ ವಿಚಾರಣೆ

Yogesh gowda murder case vinay kulkarni judicial custody extended till December 7th mah

ಹುಬ್ಬಳ್ಳಿ-ಧಾರವಾಡ(ನ. 23)  ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಸಿಬಿಐ ಪೊಲೀಸರಿಂದ ಬಂಧನಕ್ಕೊಳಗಾಗಿ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್​ ಕುಲಕರ್ಣಿಗೆ ಬಿಡುಗಡೆ ಭಾಗ್ಯ ಇಲ್ಲ.ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ.

ಡಿಸೆಂಬರ್ 7ರವರೆಗೆ ವಿನಯ್ ಕುಲಕರ್ಣಿ ನ್ಯಾಯಾಂಗ ಬಂಧನ ವಿಸ್ತರಿಸಿ ಧಾರವಾಡ 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಸೋಮವಾರ ಆದೇಶ ಹೊರಡಿಸಿದೆ.

ಯೋಗೇಶ್ ಗೌಡ ಪ್ರಕರಣದ ಸ್ಫೋಟಕ ಸತ್ಯಗಳ ಬೆನ್ನು ಹತ್ತಿದ ಸಿಬಿಐ

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ.9ರಂದು ಜಿಲ್ಲಾ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿತ್ತು. ಸೋಮವಾರ ನ್ಯಾಯಾಂಗ ಬಂಧನದ ಮೊದಲ ಅವಧಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಧಾರವಾಡ 3ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿ ಮತ್ತೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ. 

2016ರಲ್ಲಿ ಯೋಗೇಶ್ ಗೌಡ ಬರ್ಬರವಾಗಿ ಹತ್ಯೆಯಾಗಿದ್ದು ಮೊದಲು ಪೊಲೀಸರು ವಿಚಾರಣೆ ನಡೆಸುತ್ತಿದ್ದ ಪ್ರಕರಣ ಇದೀಗ ಸಿಬಿಐ   ಸಂಬಂಧ ಸಿಬಿಐ ವಿಚಾರಣೆ ಕೈಗೆತ್ತಿಕೊಂಡಿದ್ದು, ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಹಾಗೂ ತನ್ನ ಪ್ರಭಾವದಿಂದ ಪ್ರಕರಣ ಮುಚ್ಚಿ ಹಾಕಿರುವ ಆರೋಪದಲ್ಲಿ ನ.5ರಂದು ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿತ್ತು.

Latest Videos
Follow Us:
Download App:
  • android
  • ios