*  ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರಿನಲ್ಲಿ ನಡೆದ ಘಟನೆ*  ಬೆಂಕಿ ನಂದಿಸಿದ ಸ್ಥಳೀಯರು*  ಮಂಗಳೂರಿನಿಂದ ಬಾಡಿಗೆ ಕಾರಿನಲ್ಲಿ ಬಂದಿದ್ದ ಯುವ ಜೋಡಿ 

ಉಡುಪಿ(ಮೇ.22): ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೆಗ್ಗುಂಜೆ ಗ್ರಾಮದಲ್ಲಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸುಟ್ಟುಹೋದ ಕಾರು ಹಾಗೂ ಎರಡು ಮೃತದೇಹ ಪತ್ತೆಯಾದ ಘಟನೆ ಇಂದು(ಭಾನುವಾರ) ನಡೆದಿದೆ. 

ಮೃತ ವ್ಯಕ್ತಿಗಳನ್ನು ಬೆಂಗಳೂರಿನ ಆರ್‌.ಟಿ. ನಗರದ ಯಶವಂತ್‌ ಯಾದವ್‌ ಮತ್ತು ಜ್ಯೋತಿ ಎಂದು ಗುರುತಿಸಲಾಗಿದೆ ಭಾನುವಾರ ಬೆಳಗಿನ ಜಾವ 3ಗಂಟೆ ಸುಮಾರಿಗೆ ಬೆಂಕಿ ಹೊತ್ತಿ ಉರಿಯುವುದನ್ನು ನೋಡಿದ ಸ್ಥಳೀಯರು ವಿದ್ಯುತ್ ಅವಘಡ ಆಗಿರಬಹುದೇ ಎಂದು ಎದ್ದು ಬಂದು ನೋಡಿದರೆ ಹೊತ್ತಿ ಉರಿಯುವ ಕಾರು ಪತ್ತೆಯಾಗಿದೆ. ಸ್ಥಳೀಯರ ನೆರವಿನಿಂದ ಬೆಂಕಿಯನ್ನು ನಂದಿಸಿದ್ದು ಈ ವೇಳೆ ಕಾರಿನಲ್ಲಿ ಎರಡು ಮೃತದೇಹಗಳು ಪತ್ತೆಯಾಗಿವೆ.

"

ಪತಿಯ ಕಳ್ಳತನ ಕೃತ್ಯಕ್ಕೆ ಬೆಂಬಲ ಕೊಟ್ಟ ಪತ್ನಿ, ಮೈದುನ ಜೈಲಿಗೆ

ಮೂರು ದಿನಗಳ ಹಿಂದೆ ಯಶವಂತ್‌ ಯಾದವ್‌ ಮತ್ತು ಜ್ಯೋತಿ ನಾಪತ್ತೆಯಾಗಿದ್ದ ಬಗ್ಗೆ ದೂರು ದಾಖಲಾಗಿದ್ದು ಶನಿವಾರ ಮಂಗಳೂರಿಗೆ ಬಂದ ಇವರು ಹುಸೇನ್‌ ಎಂಬವರಿಂದ ಕಾರನ್ನು ಬಾಡಿಗೆ ಪಡೆದುಕೊಂಡು ಬಂದಿದ್ದು ಬೆಳಗಿನ ಜಾವ ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಜೋಡಿ ಮೃತರಾದ ಜೋಡಿ ಕಾರಿನ ಹಿಂಬದಿ ಸೀಟಿನಲ್ಲಿ ಕುಳಿತಿದ್ದರು. ಒಬ್ಬರಿಗೊಬ್ಬರು ತಬ್ಬಿಕೊಂಡ ರೀತಿಯಲ್ಲಿ ಮೃತದೇಹ ಪತ್ತೆಯಾಗಿವೆ. ಹಿಂಬದಿ ಡೋರ್‌ನಿಂದ ಮೃತದೇಹಗಳು ಹೊರಗೆ ಬಿದ್ದಿವೆ. ಪೊಲೀಸರ ತನಿಖೆಯಿಂದಷ್ಟೇ ಘಟನೆಗೆ ನಿಖರವಾದ ಕಾರಣ ತಿಳಿದು ಬರಬೇಕಿದೆ.