ಬೆಳಗಾವಿ(ಜೂ.24): ಮನೆಯಲ್ಲಿ ಕೆಲಸ ಮಾಡು ಎಂದು ಪೋಷಕರು ಹೇಳಿದ್ದಕ್ಕೆ ಮನನೊಂದು ಯುವತಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ತಾಲೂಕಿನ ಕೆಕೆ ಕೊಪ್ಪ ಗ್ರಾಮದಲ್ಲಿ ಮಂಗಳವಾರ ನಡೆದಿದೆ. 

ಗ್ರಾಮದ ನೀಲಗಂಗಾ ಗುರುನಾಥ ನೇಸರಗಿ (23) ನೇಣಿಗೆ ಶರಣಾದ ಯುವತಿ. ಈಕೆ ಬಿಇ ವ್ಯಾಸಂಗ ಮಾಡಿ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಳು. ನಂತರ ಮಾಡುತ್ತಿರುವ ಕೆಲಸವನ್ನು ಬಿಟ್ಟು ಬೇರೆ ಕೆಲಸ ಹುಡುಕುತ್ತಾ ಅಲೆದಾಡುತ್ತಿದ್ದಳು. 

ಪದವಿ ಪರೀಕ್ಷೆ ನಡೆಯದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಇದರಿಂದ ಅಸಮಾಧಾನಗೊಂಡ ಪೋಷಕರು ಮನೆಯಲ್ಲಿ ಕೆಲಸ ಮಾಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಮನೆಯಲ್ಲಿನ ಪ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತ ಯುವತಿಯ ತಾಯಿ ಕಲಾವತಿ ನೇಸರಗಿ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.