Asianet Suvarna News Asianet Suvarna News

ನಂಜನಗೂಡು: ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ

ಯುವಕ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ನಡೆಸಿದ್ದು, ಸ್ಥಳೀಯರು ಆತನನ್ನು ರಕ್ಷಿಸಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ.
 

Young Man Committed Suicide at Nanjangud in Mysuru grg
Author
First Published Nov 15, 2023, 10:30 PM IST

ನಂಜನಗೂಡು(ನ.15):  ತಾಲೂಕಿನ ನಗರ್ಲೆ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಯುವಕನೊಬ್ಬ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಯತ್ನ ನಡೆಸಿದ್ದು, ಸ್ಥಳೀಯರು ಆತನನ್ನು ರಕ್ಷಿಸಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಗ್ರಾಮದ ಕಿರಣ್ ಕುಮಾರ್ (22) ಮೃತ ಯುವಕ. 

ಈ ಬಗ್ಗೆ ಮಾಹಿತಿ ನೀಡಿರುವ ಬಿಳಿಗೆರೆ ಪೊಲೀಸ್ ಠಾಣೆಯ ಎಸ್ಐ ಕರಿಬಸಪ್ಪ, ಕಳೆದ ಎರಡು ದಿನಗಳ ಹಿಂದೆ ಕಿರಣ್ ಕುಮಾರ್ ತಾಲೂಕಿನ ಸರಗೂರು ಗ್ರಾಮದ ಯುವಕರೊಂದಿಗೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ಮಾಡಿಕೊಂಡಿದ್ದು, ಈ ಬಗ್ಗೆ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಭಾನುವಾರ ಕಿರಣ್ ಕುಮಾರ್ ನನ್ನು ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆಸಿಕೊಂಡಿದ್ದಾರೆ. ಈ ವೇಳೆ ಮಲಮೂತ್ರ ವಿಸರ್ಜನೆ ಮಾಡಿ ಬರುವುದಾಗಿ ಠಾಣೆಯಿಂದ ಹೊರಗಡೆ ಬಂದ ಕಿರಣ್ ಕುಮಾರ್ ಮತ್ತೆ ಠಾಣೆಗೆ ತೆರಳದೇ ನೇರವಾಗಿ ನಗರ್ಲೆ ಗ್ರಾಮಕ್ಕೆ ಬಂದಿದ್ದಾನೆ.

ಜಿ.ಟಿ. ದೇವೇಗೌಡ ಪ್ರಾಭಲ್ಯ ಕುಗ್ಗಿಸಲು ಚಕ್ರವ್ಯೂಹ ಹೆಣೆದ ಸಿದ್ದರಾಮಯ್ಯ: ಮೊದಲ ಬಾಣಕ್ಕೇ ಜಿಟಿಡಿ ಕಕ್ಕಾಬಿಕ್ಕಿ!

ಗ್ರಾಮಕ್ಕೆ ಬಂದ ಕಿರಣ್ ಕುಮಾರ್ ಭಾನುವಾರ ತಡರಾತ್ರಿ ತಾನು ಪ್ರೀತಿಸುತ್ತಿದ್ದ ಯುವತಿಯ ಮನೆ ಮುಂದೆ ಕ್ಯಾತೆ ತೆಗೆದಿದ್ದಾನೆ. ಈ ವೇಳೆ ಆತ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನ ಮಾಡಿದ್ದಾನೆ ಎನ್ನಲಾಗಿದೆ. ಕೂಡಲೇ ಸ್ಥಳೀಯರು ಆತನನ್ನು ರಕ್ಷಣೆ ಮಾಡಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಇನ್ನು ಮನೆ ಮುಂದೆ ಬಂದು ಗಲಾಟೆ ಮಾಡುತ್ತಿದ್ದಾಗಿ ಯುವತಿಯ ಕುಟುಂಬದವರು ಕಿರಣ್ ಕುಮಾರ್ ವಿರುದ್ಧ ದೂರು ನೀಡಿದ್ದಾರೆ ಎಂದು ಬಿಳಿಗೆರೆ ಪೊಲೀಸ್ ಠಾಣೆಯ ಎಸ್ಐ ಕರಿಬಸಪ್ಪ ತಿಳಿಸಿದ್ದಾರೆ.

Follow Us:
Download App:
  • android
  • ios