ಹುಬ್ಬಳ್ಳಿ: ರೈಲ್ವೆ ಹಳಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ
* ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದಲ್ಲಿ ನಡೆದ ಘಟನೆ
* ಯುವಕನ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ
* ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
ಹುಬ್ಬಳ್ಳಿ(ಸೆ.19): ರೈಲ್ವೆ ಹಳಿಗೆ ಬಿದ್ದು ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದಲ್ಲಿ ಇಂದು(ಭಾನುವಾರ) ನಡೆದಿದೆ. ಅಮರಗೋಳದ ಬಸವರಾಜ ಎಂಬಾತನೇ ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ.
ರೈಲಿಗೆ ಸಿಲುಕಿದ ಯುವಕನ ದೇಹ ಛಿದ್ರ ಛಿದ್ರವಾಗಿದೆ ಎಂದು ತಿಳಿದು ಬಂದಿದೆ. ಯುವಕನ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಯಾದಗಿರಿ; ವಯಸ್ಸಿಗೆ ಬಂದ ಹೆಣ್ಣು ಮಕ್ಕಳಿಗೆ ವಿಷ ಕೊಟ್ಟು ತಾನು ಸೇವಿಸಿದ ತಾಯಿ!
ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ತನಿಖೆಯಿಂದಷ್ಟೇ ಯುವಕನ ಸಾವಿಗೆ ನಿಖರವಾದ ಕಾರಣ ತಿಳಿದು ಬರಬೇಕಿದೆ.