* ಬೆಳಗಾವಿ ತಾಲೂಕಿನ ಕೆದನೂರ ಗ್ರಾಮದಲ್ಲಿ ನಡೆದ ಘಟನೆ* ಸೆಂಟ್ರಿಂಗ್‌ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಮೃತ ಯುವಕ * ಈ ಸಂಬಂಧ ಕಾಕತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು  

ಬೆಳಗಾವಿ(ಆ.12): ಮಾನಸಿಕವಾಗಿ ಖಿನ್ನತೆಗೊಳಗಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ತಡರಾತ್ರಿ ಬೆಳಗಾವಿ ತಾಲೂಕಿನ ಕೆದನೂರ ಗ್ರಾಮದಲ್ಲಿ ನಡೆದಿದೆ.

ಕೆದನೂರು ಗ್ರಾಮದ ವಿಶಾಲ ಮುರಾರಿ ರಾಜಾಯಿ (19) ಆತ್ಮಹತ್ಯೆಗೆ ಶರಣಾದ ಯುವಕ. ಪಿಯುಸಿ ಮುಗಿಸಿದ್ದ ಈತ ಸೆಂಟ್ರಿಂಗ್‌ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಮಂಗಳವಾರ ರಾತ್ರಿ ತಮ್ಮ ಮನೆಯಲ್ಲಿ ರೂಮ್‌ನ ಸ್ಲಾಪ್‌ ಹುಕ್ಕಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಬ್ಬರು ಸೇರಿ ಮೂವರು ಆತ್ಮಹತ್ಯೆ

ಈತನ ಆತ್ಮಹತ್ಯೆಗೆ ಮಾನಸಿಕ ಖಿನ್ನತೆ ಕಾರಣ ಎಂದು ಯುವಕನ ತಂದೆ ಮುರಾರಿ ರಾಜಾಯಿ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಕಾಕತಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.