ಕೊಲೆ ಮಾಡಿ ಪರಾರಿಯಾಗಿರುವ ಸುಲೇಮಾನ್ ಮತ್ತು ರಿಜ್ವಾನ್ ಪತ್ತೆಗೆ ಜಾಲ ಬೀಸಿದ ಪೊಲೀಸರು. ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. 

ಬೆಂಗಳೂರು(ಮಾ.31): ಬೈಕ್ ನಿಲ್ಲಿಸುವ ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಯಲಹಂಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಜನಾರ್ಧನ್ ಭಟ್ಟ ಎಂತಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆರೋಪಿಗಳಾದ ರಿಜ್ವಾನ್ ಮತ್ತು ಸುಲೇಮಾನ್ ಕೊಲೆ ಮಾಡಿ ಎಸ್ಕೇಪ್ ಅಗಿದ್ದಾರೆ ಅಂತ ತಿಳಿದು ಬಂದಿದೆ. ಸಮೃದ್ಧಿ ಅಪಾರ್ಟ್‌ಮೆಂಟ್‌ನ ಒಂದೇ ರೂಂನಲ್ಲಿ ಮೂವರು ವಾಸವಿದ್ದರು. ಮಾ.29ರ ರಾತ್ರಿ ಬೈಕ್ ನಿಲ್ಲಿಸುವ ವಿಚಾರಕ್ಕೆ ಗಲಾಟೆ ನಡೆದಿತ್ತು. 

ಬೆಂಗಳೂರು: ಮದ್ಯದ ಅಮಲಿನಲ್ಲಿ ಮೈಕೈ ತಾಗಿಸಿದ್ದಕ್ಕೆ ನೇಪಾಳಿಯ ಹತ್ಯೆ

ವೈಯರ್‌ನಲ್ಲಿ ಜನಾರ್ಧನ್ ಭಟ್ಟನ ಕೈ ಕಾಲು ಕಟ್ಟಿ ಬಾಯಿಗೆ ಟೇಪು ಹಾಕಿ ಕೊಲೆ ಮಾಡಲಾಗಿದೆ. ಕೊಲೆ ಮಾಡಿ ಪರಾರಿಯಾಗಿರುವ ಸುಲೇಮಾನ್ ಮತ್ತು ರಿಜ್ವಾನ್ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ. ಈ ಸಂಬಂಧ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.