ಜೆ.ಪಿ.ನಗರ 1ನೇ ಹಂತದ ಶಾಕಾಂಬರಿ ನಗರದ ನಿವಾಸಿ ಬಿ.ಹರ್ಷ (34) ಹಣ ಕಳೆದುಕೊಂಡವರು. ಇವರು ನೀಡಿದ ದೂರಿನ ಮೇರೆಗೆ ಅಪರಿಚಿತನ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ, ಬಿಎನ್ಎಸ್ ಕಲಂ 318 (4) ಮತ್ತು ಕಲಂ 319(2)ರ ಅಡಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಬೆಂಗಳೂರು(ಜ.03): ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೊಬ್ಬರು ಖಾಸಗಿ ಫೈನಾನ್ಸ್ ಗ್ರೂಪ್‌ವೊಂದರ ಜಾಹೀ ರಾತು ನೋಡಿ ಅಧಿಕ ಲಾಭದ ಆಸೆಯಿಂದ 71.41 ಲಕ್ಷ ರು. ಹೂಡಿಕೆ ಮಾಡಿ ಬಳಿಕ ವಂಚನೆಗೆ ಒಳಗಾಗಿರುವ ಸಂಬಂಧ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಜೆ.ಪಿ.ನಗರ 1ನೇ ಹಂತದ ಶಾಕಾಂಬರಿ ನಗರದ ನಿವಾಸಿ ಬಿ.ಹರ್ಷ (34) ಹಣ ಕಳೆದುಕೊಂಡವರು. ಇವರು ನೀಡಿದ ದೂರಿನ ಮೇರೆಗೆ ಅಪರಿಚಿತನ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆ, ಬಿಎನ್ಎಸ್ ಕಲಂ 318 (4) ಮತ್ತು ಕಲಂ 319(2)ರ ಅಡಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಬಂಗಾರದ ಮೇಲೆ ಸಾಲ ನೀಡುವ ಮುತ್ತೂಟ್‌ ಫೈನಾನ್ಸ್‌ಗೆ ಮೋಸ ಮಾಡಿದ ಮ್ಯಾನೇಜರ್‌!

ಏನಿದು ಪ್ರಕರಣ?:

ದೂರುದಾರ ಹರ್ಷ ಅವರು ನ.12ರಂದು ತಮ್ಮ ಇನ್ಸ್‌ಸ್ಟಾಗ್ರಾಮ್ ಖಾತೆ ನೋಡುವಾಗ, 'ಆರ್ಯ ಫೈನಾನ್ಸ್ ಗ್ರೂಪ್' ಎಂಬ ಜಾಹೀರಾತು ಗಮನಿಸಿದ್ದಾರೆ. ಆ ಜಾಹೀರಾತಿನಲ್ಲಿ ನೀಡಿದ್ದ ಲಿಂಕ್ ಕ್ಲಿಕ್ ಮಾಡಿದಾಗ, ಅಪರಿಚಿತರು ಹರ್ಷ ಅವರನ್ನು 'ಆರ್ಯ ಪ್ರಾಫಿಟ್ ಪ್ಲಸ್ ಎಕ್ಸ್-ಎ' ಎಂಬ ವಾಟ್ಸಾಪ್ ಗ್ರೂಪ್‌ಗೆ ಸೇರಿಸಿದ್ದಾರೆ. ಬಳಿಕ ನೀವು ಈ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ, ಹೆಚ್ಚಿನ ಲಾಭ ನೀಡುವುದಾಗಿ ಆಮಿಷವೊಡ್ಡಿದ್ದಾರೆ. ಅಪರಿಚಿತರ ಈ ಮಾತು ನಂಬಿದ ಹರ್ಷ ಹಣ ಹೂಡಿಕೆ ಮಾಡಿ ಮೋಸ ಹೋಗಿದ್ದಾರೆ.

ವಿವಿಧ ಹಂತಗಳಲ್ಲಿ ₹71.41 ಲಕ್ಷ ವರ್ಗಾವಣೆ 

ಹರ್ಷ ಅವರು ಅಧಿಕ ಲಾಭದ ಆಸೆಯಿಂದ ಅಪರಿಚಿತರು ನೀಡಿದ್ದ ಬ್ಯಾಂಕ್ ಖಾತೆಗಳಿಗೆ ವಿವಿಧ ಹಂತಗಳಲ್ಲಿ 71.41 ಲಕ್ಷ ರು. ಹಣ ವರ್ಗಾವಣೆ ಮಾಡಿದ್ದಾರೆ. ಬಳಿಕ ಅಪರಿಚಿತರು ಯಾವುದೇ ಲಾಭ ಅಥವಾ ಹಣ ವಾಪಾಸ್ ನೀಡದೆ ಸಂಪರ್ಕ ಕಡಿದುಕೊಂಡಿದ್ದಾರೆ. 

ಈ ವೇಳೆ ಹರ್ಷಗೆ ತಾನು ಸೈಬ‌ರ್ ವಂಚನೆಗೆ ಒಳಗಾಗಿರುವುದು ಗೊತ್ತಾಗಿದೆ. ಬಳಿಕ ಹರ್ಷ ತನಗಾದ ಸೈಬರ್ ವಂಚನೆ ಬಗ್ಗೆ ದಕ್ಷಿಣ ವಿಭಾಗದ ಸೈಬರ್ ಕ್ರೈಂ ಹ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ವಂಚಕರ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು: ಆಂಧ್ರದ ಮಾಜಿ ಸಿಎಂ ಜಗನ್ ಮೋಹನ್ ರೆಡ್ಡಿ ಹೆಸರಲ್ಲಿ ಸಂಗೀತಾ ಮೊಬೈಲ್ಸ್‌ಗೆ ವಂಚನೆ!

ಬೆಂಗಳೂರು: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ಆಪ್ತ ಸಹಾಯಕನ ಹೆಸರಿನಲ್ಲಿ ಕರೆ ಮಾಡಿ ಪ್ರಾಯೋಜಕತ್ವದ ನೆಪದಲ್ಲಿ ಸಂಗೀತಾ ಮೊಬೈಲ್ಸ್ ಕಂಪನಿಯಿಂದ 10.40 ಲಕ್ಷ ರು. ಪಡೆದು ವಂಚಿಸಿದ ಆರೋಪದಡಿ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಬನಶಂಕರಿ 2ನೇ ಹಂತದ ಸಂಗೀತಾ ಮೊಬೈಲ್ ಪ್ರೈವೆಟ್ ಲಿಮಿಟೆಡ್ ಕಂಪನಿ ವ್ಯವಸ್ಥಾಪಕ ಕೆ.ಬಿ. ರಾಜೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ಅಪರಿಚಿತ ವ್ಯಕ್ತಿಯ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಎಫ್‌ಐಆರ್‌ ದಾಖಲಿಸಲಾಗಿದೆ. ಆರೋಪಿಯ ಪತ್ತೆಗೆ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಬೆಂಗಳೂರು 14 ಕೆಜಿ ಚಿನ್ನ ವಂಚನೆ ಕೇಸ್: ಐಶ್ವರ್ಯಾ ಗೌಡ ವಿರುದ್ಧ ಡಿ.ಕೆ. ಸುರೇಶ್ ದೂರು

ಏನಿದು ದೂರು?: 

ದೂರುದಾರ ಕೆ.ಬಿ.ರಾಜೇಶ್ ಅವರ ಮೊಬೈಲ್‌ಗೆ 2 ವರ್ಷದ ಹಿಂದೆ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದೆ. ಕರೆ ಮಾಡಿದ್ದ ವ್ಯಕ್ತಿ ತಾನು ಆಂಧ್ರಪ್ರದೇಶದ ಮುಖ್ಯಮಂತ್ರಿ ಜಗನ್ ರೆಡ್ಡಿ ಅವರ ಆಪ್ತ ಸಹಾಯಕ ಕೆ.ನಾಗೇಶ್ವರ ರೆಡ್ಡಿ ಎಂದು ಪರಿಚಯಿಸಿಕೊಂಡಿದ್ದಾನೆ. ಬಳಿಕ ಆಂಧ್ರ ಪ್ರದೇಶ ಕ್ರಿಕೆಟ್ ಸಂಸ್ಥೆಯಿಂದ ಆಟವಾಡುತ್ತಿರುವ ರಿಕಿ ಭುವಿ ಎಂಬ ಆಟಗಾರನಿಗೆ ಪ್ರಾಯೋಜಕತ್ವದ ಅಗತ್ಯವಿದೆ. ಆತನಿಗೆ ನಿಮ್ಮ ಕಂಪನಿಯಿಂದ ಎರಡು ಸೆಟ್ ಕ್ರಿಕೆಟ್ ಸೆಟ್ ಪ್ರಾಯೋಜಕತ್ವ ನೀಡುವಂತೆ ಕೇಳಿಕೊಂಡಿದ್ದಾನೆ. ಈ ಎರಡು ಸೆಟ್ ಕೆಟ್‌ಗೆ 10.40 . ಲಕ್ಷ ರು. ವೆಚ್ಚವಾಗಲಿದೆ. ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸುವಂತೆ ಬ್ಯಾಂಕ್ ಖಾತೆ ವಿವರ ನೀಡಿದ್ದಾನೆ. 

2 ಕಂತುಗಳಲ್ಲಿ ಹಣ ವರ್ಗಾವಣೆ: 

ಅಪರಿಚಿತನ ಮಾತು ನಂಬಿದ ದೂರುದಾರ ರಾಜೇಶ್, 2022ರ ಮೇ 10 ಮತ್ತು ಮೇ 11ರಂದು 5.20 ಲಕ್ಷ ರು.ನಂತೆ ಒಟ್ಟು 10.40 ಲಕ್ಷ ರು. ಹಣವನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸಿದ್ದಾರೆ. ಬಳಿಕ ಇನ್ ವಾಯ್ಸ್‌ ಕೊಡುವಂತೆ ಕೇಳಿದಾಗ ಒಂದೊಂದು ಕಾರಣ ನೀಡಿದ್ದಾನೆ. ಬಳಿಕ ಹಲವು ಬಾರಿ ಕರೆ ಮಾಡಿದರೂ ಕರೆ ಸ್ವೀಕರಿಸದೆ ಸಂಪರ್ಕ ಕಡಿದುಕೊಂಡಿದ್ದಾನೆ. ಈ ಬಗ್ಗೆ ಅನುಮಾನ ಗೊಂಡು ವಿಚಾರಿಸಿದಾಗ, ಅಪರಿಚಿತ ವ್ಯಕ್ತಿಯು ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿಯ ಆಪ್ತ ಸಹಾಯಕ ಕೆ.ನಾಗೇಶ್ವರ ರೆಡ್ಡಿ ಅವರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಹಣ ಪಡೆದು ವಂಚಿಸಿರುವುದು ಗೊತ್ತಾಗಿದೆ. ಹೀಗಾಗಿ ಅಪರಿಚಿತ ವಂಚಕನ ವಿರುದ್ದ ಕಾನೂನುಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.