Asianet Suvarna News

ಗೋಕಾಕ್‌: ಮಾರಕಾಸ್ತ್ರದಿಂದ ಕೊಚ್ಚಿ ಯುವಕನ ಬರ್ಬರ ಕೊಲೆ

* ಬೆಳಗಾವಿ ಜಿಲ್ಲೆ ಗೋಕಾಕ್‌ ನಗರದಲ್ಲಿ ನಡೆದ ಘಟನೆ
* ಯುವಕನನ್ನ ಹತ್ಯೆಗೈದು ಪರಾರಿಯಾಗಿದ ದುಷ್ಕರ್ಮಿಗಳು
*  ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ
 

Young Man Murder at Gokak in Belagavi grg
Author
Bengaluru, First Published Jul 18, 2021, 12:48 PM IST
  • Facebook
  • Twitter
  • Whatsapp

ಬೆಳಗಾವಿ(ಜು.18): ಮಾರಕಾಸ್ತ್ರದಿಂದ ಕೊಚ್ಚಿ ಯುವಕನನೊಬ್ಬನ್ನ ಬರ್ಬರವಾಗಿ ಹತ್ಯೆಗೈದ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್‌ ನಗರದ ಹೊರವಲಯ ಮಹಾಂತೇಶ ನಗರದಲ್ಲಿ ನಿನ್ನೆ(ಶನಿವಾರ) ತಡರಾತ್ರಿ ನಡೆದಿದೆ. ಮಂಜು ಶಂಕರ್ ಮುರಕಿಭಾವಿ(22) ಕೊಲೆಯಾದ ಯುವಕನಾಗಿದ್ದಾನೆ.  

ನಿನ್ನೆ ತಡರಾತ್ರಿ ಯುವಕನನ್ನ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಕೊಲೆಯಾದ ಶಂಕರ್ ಮುರಕಿಭಾವಿ ಗ್ಯಾರೇಜ್‌ನಲ್ಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎಂದು ತಿಳಿದು ಬಂದಿದೆ.

ಹರಪನಹಳ್ಳಿ: ರಾಡ್‌ನಿಂದ ತಲೆಗೆ ಹೊಡೆದು ಆರ್‌ಟಿಐ ಕಾರ್ಯಕರ್ತನ ಹತ್ಯೆ

ಯುವಕನ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಗೋಕಾಕ್ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕ್ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟ‌ನೆ ನಡೆದಿದೆ. ಪೊಲೀಸರ ತನಿಖೆಯಿಂದಷ್ಟೇ ಕೊಲೆಗೆ ನಿಖರವಾದ ಕಾರಣ ತಿಳಿದು ಬರಬೇಕಿದೆ.
 

Follow Us:
Download App:
  • android
  • ios