ರಾಜ್ಯ ಸರ್ಕಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಅವರನ್ನು ವರ್ಗಾವಣೆ ಮಾಡಿ ಅವರ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ಎಚ್.ವಿ.ದರ್ಶನ್ ಅವರನ್ನು ನಿಯೋಜಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತರ ಮನೆಗಳಿಗೆ ಪೊಲೀಸರ ರಾತ್ರಿ ಭೇಟಿ ಪ್ರಕರಣದಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ತನಿಖೆಗೆ ಆದೇಶಿಸಿದೆ. ಎನ್ಎಚ್ಆರ್ಸಿ ತನಿಖಾ ವಿಭಾಗದ ಡಿಜಿಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.
ಇರಾನಿನ ಅಣುಸ್ಥಾವರದ ಮೇಲೆ ಇಸ್ರೇಲಿನ ಭೀಕರ ದಾಳಿಯ ಬಳಿಕ ಉಂಟಾಗಿರುವ ಪ್ರತಿದಾಳಿಯಿಂದ ಇಸ್ರೇಲ್ ದೇಶಾದ್ಯಂತ ಹೈ ಅಲರ್ಟ್ ಸ್ಥಿತಿ ಇದೆ.
ರಸ್ತೆಯಲ್ಲಿ ಬೀಳಿಸಿಕೊಂಡು ಹೋಗಿದ್ದ ನಟ ಕೋಮಲ್ ಅವರ ಮೊಬೈಲ್ ಅನ್ನು ಕೆಲವೇ ತಾಸಿನೊಳಗೆ ಪತ್ತೆ ಹಚ್ಚಿ ಮಲ್ಲೇಶ್ವರ ಠಾಣೆ ಪೊಲೀಸರು ಮರಳಿ ಕೊಟ್ಟಿದ್ದಾರೆ.
ಶನಿವಾರ ಕೇವಲ 2 ಗಂಟೆ ಸುರಿದ ಮುಸಲಧಾರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಜನತೆ ತತ್ತರಿಸಿದ್ದು, ಮಂಗಳೂರು ನಗರದ ರಸ್ತೆಗಳಂತೂ ಅಕ್ಷರಶಃ ಮುಳುಗಿಹೋಗಿದ್ದವು.
ಕಡಬ ತಾಲೂಕಿನ ಸವಣೂರು ಗ್ರಾಮದ ಅರೇಲ್ತಾಡಿ ಶ್ರೀ ಉಲ್ಲಾಕ್ಳು, ಕೆಡೆಂಜೊಡಿತ್ತಾಯಿ ದೇವಳದಲ್ಲಿ ನಡೆದ ನೇಮೋತ್ಸವದಲ್ಲಿ ದೈವ ನುಡಿದಂತೆ ಜನಾರ್ಧನ ರೆಡ್ಡಿ 27 ದಿನದಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ದೈವವು 'ಒಂದು ತಿಂಗಳೊಳಗೆ ಅವರು ಜೈಲಿನಿಂದ ಬಿಡುಗಡೆಯಾಗುತ್ತಾರೆ' ಎಂದು ನುಡಿದಿತ್ತು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪದವಿ ಪರೀಕ್ಷೆ ನಡೆಯುತ್ತಿರುವಾಗಲೇ ಎಂಬಿಎ ಮತ್ತು ಎಂಸಿಎ ಪ್ರವೇಶ ಪರೀಕ್ಷೆಗಳನ್ನು ನಡೆಸಲು ನಿರ್ಧರಿಸಿದೆ. ಇದರಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಪರೀಕ್ಷೆ ಮುಂದೂಡುವಂತೆ ಒತ್ತಾಯಿಸುತ್ತಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವುದು ಒಂದೆಡೆಯಾದರೆ, ಇಂಥ ಅಪರಾಧಗಳಿಗೆ ಸಂಬಂಧವೇ ಇಲ್ಲದ ಜನಸಾಮಾನ್ಯರು, ವ್ಯಾಪಾರಿಗಳು, ಉದ್ಯಮಿಗಳ ಬ್ಯಾಂಕ್ ಖಾತೆಗಳು ಕೂಡ ಲೀನ್, ಫ್ರೀಜ್ಗೆ ಒಳಗಾಗುತ್ತಿದ್ದು ತೀವ್ರ ಆತಂಕಕ್ಕೆ ತುತ್ತಾಗಿದ್ದಾರೆ.
ಕೋಮು ಸಂಘರ್ಷ ನಿಗ್ರಹಕ್ಕೆ ದೇಶದಲ್ಲೇ ಪ್ರಥಮ ‘ವಿಶೇಷ ಕಾರ್ಯಪಡೆ’ಯನ್ನು ಮಂಗಳೂರಿನಲ್ಲಿ ಸ್ಥಾಪಿಸಲಾಗಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಶುಕ್ರವಾರ ಇದಕ್ಕೆ ಚಾಲನೆ ನೀಡಿದ್ದಾರೆ.