ಹೊಸಕೋಟೆ [ನ.27]:  ರಾಜ್ಯದ 15 ಕ್ಷೇತ್ರಗಳಲ್ಲಿ ಶೀಘ್ರ ಉಪ ಚುನಾವಣೆ ನಡೆಯುತ್ತಿದ್ದು, ಎಲ್ಲೆಡೆ ಬಿರುಸಿನ ಪ್ರಚಾರ ಕಾರ್ಯ ನಡೆಯುತ್ತಿದೆ. ಅಬ್ಬರ ಪ್ರಚಾರದ ನಡುವೆಯೂ ರಾಜಕೀಯ ಅಂಗಳದಲ್ಲಿ ಫೈಟ್ ಗಳು ಶುರುವಾಗಿದೆ. 

ಹೊಸ ಕೋಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬಿಜೆಪಿ ಕಾರ್ಯಕರ್ತರೋರ್ವರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಾಗಿದೆ. ಹೊಸಕೋಟೆಯ ಮಾಕನಹಳ್ಳಿ ಸಮೀಪಿದ ಖಾಜಿ ಹೊಸಹಳ್ಳಿ ಬಳಿ ಈ ಘಟನೆ ನಡೆದಿದೆ. 

ಈ ಮೊದಲು ಕಾಂಗ್ರೆಸಿನಲ್ಲಿದ್ದ ಮಂಜುನಾಥ್ ಎನ್ನುವ ವ್ಯಕ್ತಿ ಎಂಟಿಬಿ ನಾಗರಾಜ್ ಬಿಜೆಪಿ ಸೇರಿದ ಬಳಿಕ ಬಿಜೆಪಿಗೆ ಸೇರಿದ್ದು ಈ ನಿಟ್ಟಿನಲ್ಲಿ ಹಲ್ಲೆ ನಡೆಸಲಾಗಿದೆ. 

ಚುನಾವಣೆಯಲ್ಲಿ ಎಂಟಿಬಿ ನಾಗರಾಜ್ ಪರ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಮಂಜುನಾಥ್ ಮೇಲೆ ಹಲ್ಲೆ ನಡೆದಿದ್ದು, ಅವರನ್ನುಇಲ್ಲಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. 

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಂಜುನಾಥ್ ಅವರನ್ನು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ಘಟನೆ ಸಂಬಂಧ ತಿರುಮಲಶೆಟ್ಟಿ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೊಸಕೋಟೆ ಚುನಾವಣಾ ಅಖಾಡ ಇದೀಗ ರಂಗೇರಿದ್ದು, ಅನರ್ಹರಾಗಿದ್ದ ಶಾಸಕ ಎಂಟಿಬಿ ನಾಗರಾಜ್ ಹಾಗೂ ಬಿಜೆಪಿಯಿಂದ ಬಂಡಾಯವೆದ್ದು ಸ್ಪರ್ಧೆ ಮಾಡಿದ್ದ ಶರತ್ ಬಚ್ಚೇಗೌಡ ಹಾಗೂ ಪದ್ಮಾವತಿ ನಡುವೆ ಸಖತ್ ಫೈಟ್ ನಡೆಯುತ್ತಿದೆ. 

ಡಿಸೆಂಬರ್ 5 ರಂದು ರಾಜ್ಯದ 15 ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದ್ದು, ಡಿಸೆಂಬರ್ 9 ರಂದು ಫಲಿತಾಂಶ ಪ್ರಕಟವಾಗಲಿದೆ.