ಕಾಂಗ್ರೆಸ್ ಮಾಜಿ ಕಾರ್ಪೋರೇಟರ್‌ಗಳ ಮಧ್ಯೆ ಬಿಜೆಪಿ ಹೊಸ ಮುಖಗಳ ಗೆಲುವು
ಮಂಗಳೂರು ಮಹಾನಗರಪಾಲಿಕೆ ಚುನಾವಣೆ ಫಲಿತಾಂಶ ಬಂದಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಹೀನಾಯ ಸೋಲನುಭವಿಸಿದ್ದು ಈ ಬಗ್ಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಪ್ರತಿಕ್ರಿಯಿಸಿದ್ದಾರೆ.
ಮಂಗಳೂರು(ನ.14): ಕಾಂಗ್ರೆಸ್ ಮಾಜಿ ಕಾರ್ಪೋರೇಟರ್ ಗಳ ಮಧ್ಯೆ ಬಿಜೆಪಿ ಹೊಸ ಮುಖಗಳು ಗೆದ್ದಿದೆ ಎಂದು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹೇಳಿದ್ದಾರೆ.
ಮಹಾನಗರಪಾಲಿಕೆ ಚುನಾವಣೆ ಫಲಿತಾಂಶ ಬಂದಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಹೀನಾಯ ಸೋಲನುಭವಿಸಿದ್ದು ಈ ಬಗ್ಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಗೆಲ್ಲಿಸಿಕೊಟ್ಟ ಎಲ್ಲಾ ಮತದಾರ ದೇವರುಗಳಿಗೆ ನನ್ನ ಧನ್ಯವಾದಗಳು. ಯಡಿಯೂರಪ್ಪನವರು ಮೂರು ತಿಂಗಳಲ್ಲಿ ಮಂಗಳೂರಿಗೆ ಕೋಟ್ಯಾಂತರ ಅನುದಾನ ಕೊಟ್ಟಿದ್ದಾರೆ. ನಮ್ಮ ರಾಜ್ಯಾಧ್ಯಕ್ಷ ನಳಿನ್ ಅವರ ತವರು ಮತ್ತೆ ಬಿಜೆಪಿ ತೆಕ್ಕೆಗೆ ಬಂದಿದೆ ಎಂದಿದ್ದಾರೆ.
ಮಂಗಳೂರು ಪಾಲಿಕೆ ಚುನಾವಣೆ: BJPಗೆ ಭರ್ಜರಿ ಜಯ
ಮುಂದಿನ ದಿನಗಳಲ್ಲಿ ಯಶಸ್ಸಿಯಾಗಿ ಪಾಲಿಕೆ ಆಡಳಿತ ನಡೆಸುತ್ತೇವೆ. ನಾನು ಮತ್ತು ಶಾಸಕ ಭರತ್ ಶೆಟ್ಟಿ ಮೇಲೆ ಜವಾಬ್ದಾರಿ ಜಾಸ್ತಿಯಾಗಿದೆ. ಎಲ್ಲಾ ದೇವರು, ದೈವಗಳಿಗೆ ಈ ಗೆಲುವಿನ ಧನ್ಯವಾದ ಸಲ್ಲಿಸುತ್ತೇನೆ. ಅಭ್ಯರ್ಥಿ ಮುಖ ನೋಡಬೇಡಿ, ಬಿಜೆಪಿ ಚಿಹ್ನೆ ನೋಡಿ ಅಂದಿದ್ದೆ. ಅದನ್ನ ಸ್ವೀಕರಿಸಿ ನಮ್ಮನ್ನು ಜನತೆ ಗೆಲ್ಲಿಸಿ ಕೊಟ್ಟಿದ್ದಾರೆ ಎಂದಿದ್ದಾರೆ.
ಕೆಲಸ ಕಾಯಂ ಆಮಿಷ: ಅತಿಥಿ ಉಪನ್ಯಾಸಕಿ ಮೇಲೆ ಅತ್ಯಾಚಾರ
ದಾವಣಗೆರೆ, ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ 14 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಒಟ್ಟು 409 ವಾರ್ಡ್‌ಗಳಿಗೆ ಮಂಗಳವಾರ ಮತದಾನ ನಡೆದಿದ್ದು, ಗುರುವಾರ ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ.