ಮಂಗಳೂರು(ನ.14): ಮಂಗಳೂರು ಪಾಲಿಕೆ ಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. 60 ವಾರ್ಡ್ ಗಳಲ್ಲಿ 44ರಲ್ಲಿಯೂ ಬಿಜೆಪಿ ವಿಜಯದ ನಗೆ ಬೀರಿದೆ. ಕಳೆದ ಬಾರಿ 35 ಸ್ಥಾನ ಪಡೆದು ಅಧಿಕಾರ ಪಡೆದಿದ್ದ ಕಾಂಗ್ರೆಸ್‌ ಹೀನಾಯ ಸೋಲು ಅನುಭವಿಸಿದೆ.

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧ್ಬುತ ಗೆಲುವು ಸಾಧಿಸಿದ್ದು, ಕಾಂಗ್ರೆಸ್ 14 ಸ್ಥಾನಗಳಿಗೆ ತೃಪ್ತಿಪಟ್ಟುಕೊಂಡಿದೆ. 2ಸ್ಥಾನಗಳು ಎಸ್‌ಡಿಪಿಐ ತೆಕ್ಕೆಗೆ ಹೋಗಿವೆ. ಕಳೆದ ಬಾರಿ 35 ಸ್ಥಾನ ಪಡೆದು ಅಧಿಕಾರ ಪಡೆದಿದ್ದ ಕಾಂಗ್ರೆಸ್‌ ಹೀನಾಯ ಸೋಲನುಭವಿಸಿದೆ.

ಕೋಲಾರ: ನಗರಸಭೆ ಚುನಾವಣಾ ಫಲಿತಾಂಶ ಪ್ರಕಟ, ಅಧಿಕಾರ ಅತಂತ್ರ

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ತವರಲ್ಲಿ ಕೇಸರಿ ಪಡೆ ದಿಗ್ವಿಜಯ ಸಾಧಿಸಿದ್ದು, ಶಾಸಕರಾದ ವೇದವ್ಯಾಸ್ ಕಾಮತ್ ಮತ್ತು ಭರತ್ ಶೆಟ್ಟಿ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಗೆಲುವಿನ ನಗು ಚೆಲ್ಲಿದ್ದಾರೆ.

ದಾವಣಗೆರೆ, ಮಂಗಳೂರು ಮಹಾನಗರ ಪಾಲಿಕೆ ಸೇರಿದಂತೆ 14 ನಗರ ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯ ಫಲಿತಾಂಶ  ಪ್ರಕಟವಾಗಲಿದೆ. ಈಗಾಗಲೇ ಮತ ಎಣಿಕೆ ಕಾರ್ಯ ಆರಂಭವಾಗಿದೆ. ಒಟ್ಟು 409 ವಾರ್ಡ್‌ಗಳಿಗೆ ಮಂಗಳವಾರ ಮತದಾನ ನಡೆದಿದ್ದು, ಗುರುವಾರ ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳಲಿದೆ.

ಕೆ. ಆರ್. ಪೇಟೆ JDS ಅಭ್ಯರ್ಥಿ ಫಿಕ್ಸ್, ಅಧಿಕೃತ ಘೋಷಣೆಯೊಂದೇ ಬಾಕಿ

ಮಂಗಳೂರು ಮಹಾನಗರ ಪಾಲಿಕೆಯ ಒಟ್ಟು 60 ವಾಡ್ ಗರ್ಳಲ್ಲಿ ಕಣಕ್ಕಿಳಿದ 180 ಮಂದಿ ಸ್ಪರ್ಧಿಗಳ ಭವಿಷ್ಯ ನ.14ರಂದು ತೀರ್ಮಾನವಾಗಲಿದೆ. 21 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ನೇರ ಸ್ಪರ್ಧೆ ನಡೆದಿದ್ದು, 24 ವಾರ್ಡ್‌ಗಳಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. 9 ವಾರ್ಡ್ ಗಳಲ್ಲಿ ತಲಾ 4 ಅಭ್ಯರ್ಥಿಗಳಿದ್ದರೆ, 6 ವಾರ್ಡ್‌ಗಳಲ್ಲಿ ಗರಿಷ್ಠ ತಲಾ 5 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ ನಿರ್ಧಾರವಾಗಿದೆ.

ಉಪಚುನಾವಣೆ: ಕೆ. ಆರ್. ಪೇಟೆ ಉಸ್ತುವಾರಿ ಹೊಸಬರಿಗೆ ಕೊಟ್ಟ ಸಿಎಂ