ಮಂಗಳೂರು(ಅ.07): ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಕೈಗೊಳ್ಳಬೇಕಾದ ಮತ್ತು ಪ್ರಸ್ತುತ ಪ್ರಗತಿಯಲ್ಲಿರುವ ಯೋಜನೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೂಕ್ತ ಕ್ರಮ ಕೈಗೊಳ್ಳಲಿದ್ದಾರೆ ಎಂಬ ವಿಶ್ವಾಸ ತನಗಿದೆ ಎಂದು ಸಂಸದ ಹಾಗೂ ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ.

ಅವರು ಭಾನುವಾರ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕಟ್ಟಡ ಸಂಕೀರ್ಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಕಚೇರಿಯನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರಲ್ಲಿ ಮಾತನಾಡಿದರು.

ಮಂಗಳೂರಿನಲ್ಲಿ ಖಾಸಗಿ ಬಸ್‌ ಕದ್ದು ಉಡುಪಿಗೆ ತಂದಿದ್ದ

ಈಗಾಗಲೇ ಕಾರ್ಯಗತಗೊಂಡು ಪ್ರಗತಿಯಲ್ಲಿರುವ ಯೋಜನೆಗಳ ವೇಗ ವರ್ಧಿಸಲು ಹಾಗೂ ಸಮಸ್ಯೆಗಳೇನಾದರೂ ಇದ್ದಲ್ಲಿ ಅವುಗಳನ್ನು ಸಚಿವರು ಬಗೆಹರಿಸುವ ವಿಶ್ವಾಸವಿದೆ ಎಂದವರು ವಿವರಿಸಿದರು.

ಕೋಟ ಶ್ರೀನಿವಾಸ ಪೂಜಾರಿ ರಾಜಕೀಯದಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅವರ ನೇತೃತ್ವದಲ್ಲಿ ದ.ಕ. ಜಿಲ್ಲೆ ಉತ್ತರೋತ್ತರ ಅಭಿವೃದ್ಧಿ ಹೊಂದಲಿ ಎಂದು ನಳಿನ್‌ ಕುಮಾರ್‌ ಕಟೀಲ್‌ ಹಾರೈಸಿದರು.

ರಾಜ್ಯದ ಈ ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆ: ಯಲ್ಲೋ ಅಲರ್ಟ್‌

ಶಾಸಕ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಉಮಾನಾಥ ಕೋಟ್ಯಾನ್‌, ರಾಜೇಶ್‌ ನಾಯ್ಕ, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ, ಕೃಷ್ಣ ಪಾಲೆಮಾರ್‌, ಮೋನಪ್ಪ ಭಂಡಾರಿ, ಬಿಜೆಪಿ ನಾಯಕರಾದ ಉದಯ ಕುಮಾರ್‌ ಶೆಟ್ಟಿ, ರವಿಶಂಕರ ಮಿಜಾರ್‌, ಯಶ್‌ಪಾಲ್‌ ಸುವರ್ಣ, ಅನ್ವರ್‌ ಮಾಣಿಪ್ಪಾಡಿ, ಹರಿಕೃಷ್ಣ ಬಂಟ್ವಾಳ್‌, ಸುಲೋಚನ ಭಟ್‌ ಇದ್ದರು.

ಪ್ರತಿ ಸೋಮವಾರ ಕಚೇರಿಯಲ್ಲಿ ಲಭ್ಯ:

ತಾನು ಈ ಕಚೇರಿಯಲ್ಲಿ ಪ್ರತಿ ಸೋಮವಾರ ಇಡೀ ದಿನ ಸಾರ್ವಜನಿಕರಿಗೆ ಲಭ್ಯವಿರುತ್ತೇನೆ. ಇಲಾಖೆ ಅಧಿಕಾರಿಗಳ ಜೊತೆಗೆ ಸಭೆ ನಡೆಸುವ ದಿನಗಳಲ್ಲೂ ಸಾರ್ವಜನಿಕರಿಗೆ ಕಚೇರಿಯಲ್ಲಿ ಲಭ್ಯವಿರುತ್ತೇನೆ. ಕಚೇರಿಗೆ ಅನುಭವಿ ಅಧಿಕಾರಿಗಳನ್ನು ನೇಮಕ ಮಾಡುವ ಮೂಲಕ ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಲು ಹಾಗೂ ಅಭಿವೃದ್ಧಿ ಯೋಜನೆಗಳು ತ್ವರಿಗತಿಯಲ್ಲಿ ಸಾಗಲು ಕ್ರಮ ಕೈಗೊಳ್ಳುತ್ತೇನೆ ಎಂದು ಸಚಿವ ಕೋಟ ಶ್ರೀನಿವಾಸ್‌ ಪೂಜಾರಿ ಈ ಸಂದರ್ಭ ತಿಳಿಸಿದರು.