ಮಂಗಳೂರು[ಅ. 13] ಇತ್ತಿಚೇಗೆ ಪ್ರೇಮಿಗಳ ಆತ್ಮಹತ್ಯೆ ಪ್ರಕರಣಗಳು ವರದಿಯಾಗುತ್ತಿರುವುದು ಆತಂಕ ಮೂಡಿಸಿದೆ. ಮನೆಯವರ ವಿರೋಧಕ್ಕೆ ಹೆದರಿ ಮಂಗಳೂರಿನಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರೀತಿಗೆ ಮನೆಯವರ ವಿರೋಧವಿದ್ದ ಕಾರಣ ಯುವಜೋಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಂಗಳೂರಿನ ವಸತಿಗೃಹದಲ್ಲಿ ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೇರಳ ಮೂಲದ ಗ್ರೀಷ್ಮಾ(21) ಹಾಗೂ ವಿಷ್ಣು(22) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಬ್ಬರೂ ಮೂಡುಬಿದಿರೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಹಲವು ದಿನಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರದ್ದೂ ಜಾತಿ ಬೇರೆಯಾಗಿದ್ದರಿಂದ, ಪ್ರೀತಿಗೆ ಮನೆಯವರ ವಿರೋಧವಿತ್ತು ಎನ್ನಲಾಗಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.