ಮಂಗಳೂರು: ಅಪೂರ್ವ ತುಳು ಶಾಸನ ಪತ್ತೆ

ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ತುಳು ಶಾಸನವೊಂದು ಪತ್ತೆಯಾಗಿದೆ. ಸುಮಾರು 36 ವರ್ಷಗಳಿಂದ ದೇವಾಲಯದ ಆಗ್ನೇಯ ಮೂಲೆಯ ಕೋಣೆಯಲ್ಲಿದ್ದು ಸುಮಾರು 37 ಇಂಚು ಎತ್ತರ ಹಾಗೂ 13 ಇಂಚು ಅಗಲದ ಈ ಶಿಲಾಖಂಡವು ಪ್ರಾಚೀನ ಶಾಸನ ಎಂಬುದು ತಡವಾಗಿ ಬೆಳಕಿಗೆ ಬಂದಿದೆ. 
 

Tulu inscription found in Belthangady balasubramanya temple

ಮಂಗಳೂರು(ಅ.16): ತುಳು ಶಾಸನವೊಂದು ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಂಡು ಬಂದಿದ್ದು ಇದು ಬಹು ಪ್ರಾಚೀನವಾದುದು ಎಂದು ತಜ್ಞರಾದ ಡಾ.ವೈ. ಉಮಾನಾಥ ಶೆಣೈ ಮತ್ತು ಡಾ.ಎಸ್‌.ಆರ್‌. ವಿಘ್ನರಾಜ ಅವರು ಅಭಿಪ್ರಾಯಪಟ್ಟಿದ್ದಾರೆ.

ಸುಮಾರು 36 ವರ್ಷಗಳಿಂದ ದೇವಾಲಯದ ಆಗ್ನೇಯ ಮೂಲೆಯ ಕೋಣೆಯಲ್ಲಿದ್ದು ಸುಮಾರು 37 ಇಂಚು ಎತ್ತರ ಹಾಗೂ 13 ಇಂಚು ಅಗಲದ ಈ ಶಿಲಾಖಂಡವು ಪ್ರಾಚೀನ ಶಾಸನ ಎಂಬುದು ತಡವಾಗಿ ಬೆಳಕಿಗೆ ಬಂದಿದೆ.

ಗುಡುಗು, ಮಿಂಚು ಸಹಿತ ಭಾರೀ ಮಳೆ, 11 ಮೀಟರ್ ಎತ್ತರದಲ್ಲಿ ಹರಿಯುತ್ತಿದೆ ನೇತ್ರಾವತಿ

ಭೂತದ ಕಲ್ಲು ಎಂದು ಭಾವಿಸಲಾಗಿದ್ದ ಈ ಕಲ್ಲಿನ ಕುರಿತು ಜ್ಯೋತಿಷಿಗಳು ಅನುಮಾನಗೊಂಡು ವಿಶ್ಲೇಷಿಸಿದಾಗ ದೇವಸ್ಥಾನ ಆಡಳಿತ ಮೊಕ್ತೇಸರರ ಸೂಚನೆಯಂತೆ ಹಿರಿಯ ಶಾಸನ ತಜ್ಞ ಡಾ.ವೈ. ಉಮಾನಾಥ ಶೆಣೈ ಮತ್ತು ಡಾ.ಎಸ್‌.ಆರ್‌. ವಿಘ್ನರಾಜ ಅವರನ್ನು ಕರೆಸಿ ಓದಿಸಿದಾಗ ಇದು ಒಟ್ಟು 8 ಪಂಕ್ತಿಗಳಲ್ಲಿ ಬರೆದಿರುವ ಕ್ರಿ.ಶ. ಸುಮಾರು 16ನೇ ಶತಮಾನದ ಒಂದು ಅಪೂರ್ವ ತುಳುಶಾಸನವೆಂದು ತಿಳಿದು ಬಂದಿದೆ.

ತಾಲೂಕು ಕಚೇರಿಗೆ ಎಸಿಬಿ ದಾಳಿ, ದಾಖಲೆ ಇಲ್ಲದ ಸಾವಿರಾರು ರೂಪಾಯಿ ಪತ್ತೆ

ಶಾಸನದಲ್ಲಿ ಎರಡು ವಿಚಾರಗಳನ್ನು ತಿಳಿಸಲಾಗಿದೆ. ಇಚ್ಚೂರ ಉದಕಮಣಿ ಎಂದು ಪ್ರಸಿದ್ಧರಾದ ಈ ಬಾಲಸುಬ್ರಹ್ಮಣ್ಯ ದೇವರ ದೇವಾಲಯವು ರಾಜನಿರ್ಮಿತವಾದುದು. ಆದರೆ ಇಲ್ಲಿ ರಾಜನ ಹೆಸರು ಉಲ್ಲೇಖಗೊಂಡಿಲ್ಲ. ಉಳಿದಂತೆ ಮಾಚಾರ ಸಮಾಜದ ವಾಸಪ್ಪ ಎಂಬವನು ಶಾಸನವನ್ನು ರಚಿಸಿ ಈ ಶಿಲೆಯ ಮೇಲೆ ಬರೆದ ಎನ್ನಲಾಗುತ್ತಿದೆ.

ನಾಗಗಳಿಗೆ ಮತ್ತು ಜಲಕ್ಕೆ ದೇವತೆಯಾಗಿರುವ ಸುಬ್ರಹ್ಮಣ್ಯನನ್ನು ಇಲ್ಲಿ ಉದಕಮಣಿ ಎಂದು ವಿಶೇಷವಾಗಿ ಕರೆಯಲಾಗುತ್ತಿತ್ತು. ಇಂದಿಗೂ ಇಲ್ಲಿ ಶ್ರೀ ಬಾಲಸುಬ್ರಹ್ಮಣ್ಯನನ್ನು ನೀರಿಗಾಗಿ ಪ್ರಾರ್ಥಿಸಿ ದಾರಾಳವಾಗಿ ನೀರನ್ನು ಪಡೆಯಲಾಗುತ್ತದೆ. ಆದುದರಿಂದ ಪ್ರಾಚೀನ ಕಾಲದಿಂದಲೂ ಉದಕಮಣಿಯೆಂದು ಶ್ರೀ ದೇವರನ್ನು ಸಂಬೋಧಿಸಲಾಗುತ್ತಿತ್ತು.

ಮಂಗಳೂರು: ರೌಡಿ ಪತ್ನಿಯಿಂದ ಅರ್ಜಿ ಸ್ವೀಕರಿಸಿದ ಐಪಿಎಸ್ ಹರ್ಷ

ಈ ಶಾಸನವನ್ನು ಓದುವುದರಲ್ಲಿ ಧರ್ಮಸ್ಥಳದ ಪವನಕುಮಾರ್‌ ಸಹಕರಿಸಿದರು. ದೇವಾಲಯದ ಆಡಳಿತ ಮೊಕ್ತೇಸರ ಹಾಗೂ ಅರ್ಚಕ ಸತೀಶ ಪುತ್ತೂರಾಯ ಮತ್ತು ಅವರ ಸಹೋದರ ಸೂರ್ಯನಾರಾಯಣ ಪುತ್ತೂರಾಯ ಈ ಸಂದರ್ಭದಲ್ಲಿ ಇದ್ದರು. ಈ ಶಿಲಾಶಾಸನವನ್ನು ಈಗ ಸುರಕ್ಷಿತವಾಗಿ ಇಡಲಾಗಿದೆ.

ಶಾಸನದಲ್ಲಿನ ತುಳು ಲಿಪಿಯಲ್ಲಿನ ಕೆಲವು ಪದಗಳು

ಸ್ವಸ್ತಿಶ್ರೀ, ಹ (ಇ) ಚ್ಚೂರ ಉದಕ, ಮಣಿಗಾದ್‌, ರಾಜಕೃತ, ಜ್ಜೆ (?) ಮಾತಾರ, ನರಮಾನಿಯೆರೆ, ಮಾ (ವಾ) ಸಪ್ಪೆರೆ, ಪದ ಬರಹ (ವು)

ಉಡುಪಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಮಳೆ

Latest Videos
Follow Us:
Download App:
  • android
  • ios