ದಾವಣಗೆರೆ [ನ.08]: ದಾವಣಗೆರೆ ಮಹಾ ನಗರ ಪಾಲಿಕೆ ಚುನಾವಣೆಯ ಮತದಾನ ನ. 12 ರಂದು ಮತ್ತು ಮತ ಎಣಿಕೆ ನ. 14ರಂದು ನಡೆಯುವ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ, ಜಿಲ್ಲಾಧಿಕಾರಿ ಮಹಾಂತೇಶ ಜಿ.ಬೀಳಗಿ ಆದೇಶ ಹೊರಡಿಸಿದ್ದಾರೆ. 

ಪಾಲಿಕೆ ವ್ಯಾಪ್ತಿಯ ಪ್ರದೇಶದಲ್ಲಿ ನ.10ರಂದು ಬೆಳಗ್ಗೆ 7ರಿಂದ ನ.12ರ ರಾತ್ರಿ 12ರವರೆಗೆ ಹಾಗೂ ಮತ ಎಣಿಕೆ ದಿನವಾದ ನ.14ರಂದು ಬೆಳಗ್ಗೆ 8ರಿಂದ ನ.15ರ ಬೆಳಗ್ಗೆ 8ರವರೆಗೆ ಮದ್ಯವನ್ನು ಮದ್ಯದಂಗಡಿ ಮುಚ್ಚಲು ಸೂಚಿಸಲಾಗಿದೆ. 

ಇಲ್ಲಿನ ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಡಾಬಾ, ಛತ್ರ ಇನ್ನಿತರೆ ಸ್ಥಳ ಹಾಗೂ ಯಾವುದೇ ಇತರೆ ಸಾರ್ವಜನಿಕ ಅಥವಾ ಖಾಸಗಿ ಸ್ಥಳಗಳಲ್ಲಿ ಮಾರಾಟ ಮಾಡುವಂತಿಲ್ಲ, ನೀಡುವಂತಿಲ್ಲ, ವಿತರಿಸುವಂತಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ರಾಜ್ಯದ ವಿವಿಧೆಡೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ.

ಶಾಲೆಗಳಿಗೂ ರಜೆ : ಸಾರ್ವತ್ರಿಕ ರಜೆ ಘೋಷಣೆ ದಾವಣಗೆರೆ: ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ನ.12ರಂದು ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳನ್ನೂ ಒಳಗೊಂಡಂತೆ ಶಾಲಾ-ಕಾಲೇಜುಗಳಿಗೆ ನ.12ರಂದು ಸಾರ್ವ ತ್ರಿಕ ರಜೆ ಘೋಷಿಸಿ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. 
1 ದಿನ ಬೆಂಗಳೂರಿನಾದ್ಯಂತ ಮದ್ಯ ಮಾರಾಟ ಬಂದ್...!...

ನಗರ ಪಾಲಿಕೆಯ 45 ವಾರ್ಡ್‌ಗೆ ನ.12 ರಂದು ಚುನಾವಣೆ ನಡೆಯಲಿದ್ದು, ಅಂದು ಮಹಾನಗರ ಪಾಲಿಕೆ ಚುನಾವಣಾ ಕ್ಷೇತ್ರದ ವ್ಯಾಪ್ತಿ ಗೊಳಪಡುವಂತೆ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳನ್ನೂ ಒಳಗೊಂಡಂತೆ ಶಾಲಾ- ಕಾಲೇಜುಗಳಿಗೆ ಆಯೋಗದ ಆದೇಶದಂತೆ ಸಾರ್ವತ್ರಿಕ ರಜೆ ಘೋಷಿಸಿಜಿಲ್ಲಾ ದಂಡಾಧಿಕಾರಿ, ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ಆದೇಶ ಹೊರಡಿಸಿದ್ದಾರೆ. ಚುನಾ ವಣಾ ಕ್ಷೇತ್ರಗಳ ವ್ಯಾಪ್ತಿಯ ಎಲ್ಲಾ ಸಾರ್ವಜನಿಕ ಉದ್ದಿಮೆ ಗಳು, ವ್ಯವಹಾರಿಕೆ ಸಂಸ್ಥೆಗಳು, ಖಾಸಗಿ ಕಂಪನಿ ಗಳು, ಮತ್ತಿತರೆ ಸಂಸ್ಥೆಗಳಲ್ಲಿ ಕಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ಮಾಡುತ್ತಿ ರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗು ವಂತೆ ವೇತನ ಸಹಿತ ರಜೆ ನೀಡುವಂತೆ ಆದೇಶಿಸಲಾಗಿದೆ. 

ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಹೇಳಿದ್ದಾರೆ. ಅದಾಗ್ಯೂ ತುರ್ತು ಸೇವೆಯಡಿ ಕೆಲಸ ಮಾಡು ವ ನೌಕರರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಬೇಕು. ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರ್ಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು ಎಂದು ತಿಳಿಸಿದ್ದಾರೆ.