Asianet Suvarna News

ಭೀಕರ ಬಸ್ ಅಪಘಾತ : 6 ಜನರ ಸ್ಥಿತಿ ಗಂಭೀರ

ಲಾರಿ ಮತ್ತು ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ  6 ಜನರಿಗೆ ಗಂಭೀರ ಗಾಯವಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಬೆಂಗಳೂರಿಗೆ ಬರುತ್ತಿದ್ದ ಬಸ್‌ಗೆ ಲಾರಿ ಡಿಕ್ಕಿಯಾಗಿದೆ. 

Lorry Collided into Private Bus In Davangere
Author
Bengaluru, First Published Nov 3, 2019, 9:42 AM IST
  • Facebook
  • Twitter
  • Whatsapp

ದಾವಣಗೆರೆ [ನ.03]: ಲಾರಿ ಹಾಗೂ ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕಾನನಕಟ್ಟೆ ಬಳಿ ಹೊಸಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ - ಲಾರಿ ನಡುವೆ ಅಪಘಾತವಾಗಿದೆ. 

ಗಂಭೀರವಾಗಿ ಗಾಯಗೊಂಡ 6 ಮಂದಿಯನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾನನನಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಿಂದ ರಸ್ತೆಯಲ್ಲಿ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಇದರಿಂದ ವಾಹನ ಸವಾರರು ಪರದಾಡುವಂತಾಗಿದೆ. 

ಸುಮ್ಮನಹಳ್ಳಿ ಮೇಲ್ಸೇತುವೆಯಲ್ಲಿ ಗುಂಡಿ: 10 ದಿನ ಸಂಚಾರ ನಿಷೇಧ..!...

ಸ್ಥಳದಕ್ಕೇ ಜಗಳೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಜಗಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow Us:
Download App:
  • android
  • ios