Asianet Suvarna News Asianet Suvarna News

Bike Taxi : ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಮಾಲೀಕರು, ಆಟೋ ಚಾಲಕರ ಜಟಾಪಟಿ ಶುರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗೆ ಪರವಾನಗಿ ನೀಡಲು ತೀರ್ಮಾನಿಸಿದ ಪ್ರಾಧಿಕಾರದ ಕ್ರಮಕ್ಕೆ ಆಟೋ ರಿಕ್ಷಾ, ಟ್ಯಾಕ್ಸಿ ಮಾಲೀಕರ ಸಂಘದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

Electric bike taxi owners auto drivers have started a fight sat
Author
First Published Dec 8, 2022, 6:04 PM IST

ಬೆಂಗಳೂರು (ಡಿ.8): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗೆ ಪರವಾನಗಿ ನೀಡಲು ತೀರ್ಮಾನಿಸಿದ ಪ್ರಾಧಿಕಾರದ ಕ್ರಮಕ್ಕೆ ಆಟೋ ರಿಕ್ಷಾ, ಟ್ಯಾಕ್ಸಿ ಮಾಲೀಕರ ಸಂಘದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇದರಿಂದ ಆಟೋ- ಟ್ಯಾಕಸ್ಇ ಚಾಲಕರ ಜೀವನದ ಮೇಲೆ ಬರೆ ಎಳೆದಂಗಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುಮಾರು 75 ಲಕ್ಷಕ್ಕೂ ಅಧಿಕ ವಾಹನಗಳು ಇರುವ ಬೆಂಗಳೂರಿನಲ್ಲಿ ಸಾರ್ವಜನಿಕರಿಗೆ ಬಾಡಿಗೆ ಸೇವೆ ನೀಡುವ ಆಟೋ ಟ್ಯಾಕ್ಸಿ ಮತ್ತು ಬೈಕ್‌ ಟ್ಯಾಕ್ಸಿಗಳ ಮಾಲೀಕರ ನಡುವೆ ಮತ್ತೊಮ್ಮೆ ಜಟಾಪಟಿ ಶುರುವಾಗಿದೆ. ೨೦೨೨ರ ವರ್ಷಾರಂಭದಲ್ಲಿಯೇ ರ್ಯಾಪಿಡೋ ಬೈಕ್‌ ಟ್ಯಾಕ್ಸಿ ಮತ್ತು ಆಟೋ ಚಾಲಕರ ನಡುವಿನ ಗಲಾಟೆ ತಾರಕಕ್ಕೇರಿತ್ತು. ಈ ವೇಳೆ ಆಟೋ ಚಾಲಕರು ಮತ್ತು ಬೈಕ್‌ ಟ್ಯಾಕ್ಸಿ ಮಾಲೀಕರೊಂದಿಗೆ ಸಾರಿಗೆ ಸಚಿವ ಶ್ರೀರಾಮುಲು ಸಭೆ ನಡೆಸಿದ್ದರು. ಈ ವೇಳೆ ಸರ್ಕಾರದಿಂದ ಒಪ್ಪಿಗೆ ಪಡೆಯದೇ ಅನಧಿಕೃತ ಬೈಕ್‌ ಟ್ಯಾಕ್ಸಿ ಬಳಕೆ ಮಾಡುವುದನ್ನು ನಿಷೇಧಿಸಲಾಗುತ್ತದೆ ಎಂದು ಭರವಸೆ ನೀಡಿದ್ದರು.

ಆದರೆ, ಈಗ ಪುನಃ ಸಾರ್ವಜನಿಕರಿಗೆ ಅನುಕೂಲ ಆಗುವಂತೆ ಮೆಟ್ರೋ, ರೈಲು ನಿಲ್ದಾಣ ಮತ್ತು ಬಸ್‌ ನಿಲ್ದಾಣಗಳಿಂದ ಲಾಸ್ಟ್‌ ಮೈಲ್‌ ಕನೆಕ್ಟಿವಿಟಿ ಉದ್ದೇಶದಿಂದ ಬೈಕ್‌ ಟ್ಯಾಕ್ಸಿ ಸೇವೆ ಜಾರಿಗೆ ತರಲು ಮುಂದಾಗಿದೆ. ಈ ಕುರಿತು ಸರಕಾರ ಸಭೆ ನಡೆಸಿದ್ದು ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿಗೆ ಅನುಮತಿ ನೀಡಲು ತೀರ್ಮಾನಿಸಿದೆ. ಸರ್ಕಾರದ ಕ್ರಮವನ್ನು ವಿರೋಧಿಸಿ ಆಟೋ ಚಾಲಕರ ಸಂಘದಿಂದ ಆಕ್ರೋಶ ವ್ಯಕ್ತವಾಗಿದೆ.

 

Bengaluru: ಬೈಕ್‌ ಟ್ಯಾಕ್ಸಿ ಸಂಚಾರಕ್ಕೆ ಸಾರಿಗೆ ಪ್ರಾಧಿಕಾರದಿಂದ ಅನುಮತಿ ನಿಚ್ಚಳ

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಕ್ರಮ ಬೇಡ: ಬೈಕ್ಸ್ ಟ್ಯಾಕ್ಸಿಗಳಿಗೆ ಸಾರ್ವಜನಿಕರನ್ನು ಅತ್ಯಂತ ಕಡಿಮೆ ದರಕ್ಕೆ ಬಾಡಿಗೆ ರೂಪದಲ್ಲಿ ಕರೆದೊಯ್ಯುವುದರಿಂದ ಆಟೋ ಹಾಗೂ ಟ್ಯಾಕ್ಸಿ ಮಾಲೀಕರ ಮೇಲೆ ಪರಿಣಾಮ ಬೀರಲಿದೆ. ಈಗಾಗಲೇ ಕೊರೊನಾ ಸಂದರ್ಭದಲ್ಲಿ ನಾವು ಸಾಕಷ್ಟು ತೊಂದರೆಗೆ ಒಳಗಾಗಿದ್ದು, ಇನ್ನೂ ಚೇತರಿಸಿಕೊಂಡಿಲ್ಲ. ಇದೇ ವೇಳೆ ಸರ್ಕಾರ ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಎನ್ನುವಂತೆ ಎಲೆಕ್ಟ್ರಿಕ್ ಬೈಕ್ ಟ್ರಾಕ್ಸಿಗಳಿಗೆ ಅನುಮತಿ ನೀಡಲು ಸಭೆಯಲ್ಲಿ ತೀರ್ಮಾನಿಸಿದೆ. ಕೂಡಲೇ ಸರ್ಕಾರ ಈ ನಿರ್ಧಾರವನ್ನು ಕೈ ಬಿಡಬೇಕು. ಸರ್ಕಾರ ಈ ನಿಯಮ ಜಾರಿಗೊಳಿಸಿದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮನೆಗೆ ಮುತ್ತಿಗೆ ಹಾಕುವುದಾಗಿ ಆದರ್ಶ ಆಟೋ ಚಾಲಕರ ಸಂಘದ ಅಧ್ಯಕ್ಷ ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ.

ವೈಟ್‌ ಬೋರ್ಡ್‌ ಬೈಕ್ ಬಳಕೆ:  ರ‍್ಯಾಪಿಡೋ ಆ್ಯಪ್‌ ಆಧಾರಿತ ಬೈಕ್‌ ಟ್ಯಾಕ್ಸಿ ಹೆಸರಿನಲ್ಲಿ ವೈಟ್‌ ಬೋರ್ಡ್‌ ಬೈಕ್‌ಗಳಲ್ಲಿ ಅತಿ ಕಡಿಮೆ ದರಕ್ಕೆ ಸೇವೆ ನೀಡಲಾಗುತ್ತಿದೆ. ಕಾನೂನಿನಲ್ಲಿ ಇದ್ದಕ್ಕೆ ಅವಕಾಶವಿಲ್ಲ. ಆಟೋ ಚಾಲಕರು ಸರ್ಕಾರಕ್ಕೆ ಟ್ಯಾಕ್ಸ್‌ ಪಾವತಿಸಿ ಎಲ್ಲೋ ಬೋರ್ಡ್‌ ಆಟೋಗಳಲ್ಲಿ ಸೇವೆ ನೀಡುತ್ತಿದ್ದೇವೆ. ತೆರಿಗೆ ಪಾವತಿಸುವ ನಾವು ಎಲ್ಲಿಗೆ ಹೋಗಬೇಕು? ಯಾವುದೇ ಕಾರಣಕ್ಕೂ ಈ ಕಾನೂನು ಬಾಹಿರ ಬೈಕ್‌ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಬಾರದು ಎಂದು ಆಟೋ ಚಾಲಕರ ಸಂಘದಿಂದ ಆಗ್ರಹಿಸಲಾಗಿದೆ. 

ಓಲಾ, ಉಬರ್‌ ಹಾಗೂ ರ‍್ಯಾಪಿಡೋಗೆ ಸರ್ಕಾರದಿಂದ ನೂತನ ದರ!

500ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿ ವಶ: ಈ ವರ್ಷದ ಆರಂಭದ ದಿನಗಳಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಮೋಟಾರು ವಾಹನ ಕಾಯ್ದೆಯನ್ನು ಉಲ್ಲಂಘಿಸಿದ 500ಕ್ಕೂ ಹೆಚ್ಚು ಬೈಕ್ ಟ್ಯಾಕ್ಸಿಗಳನ್ನು ವಶಪಡಿಸಿಕೊಂಡಿದ್ದರು.  ವೈಯಕ್ತಿಕ ಚಾಲಕರಿಗೆ 10,500 ರೂ.ವರೆಗೆ ದಂಡ ವಿಧಿಸಿದ್ದರು. ಇದೇ ವೇಳೆ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಯಿಂದ ಆದಾಯಕ್ಕೆ ಹೊಡೆತ ಬೀಳುತ್ತದೆ ಎಂದು ಟ್ಯಾಕ್ಸಿ, ಆಟೋ ರಿಕ್ಷಾ ಚಾಲಕರು ಆರೋಪಿಸಿದ್ದರು.

Follow Us:
Download App:
  • android
  • ios